ಸುಬ್ರಹ್ಮಣ್ಯ:ಸುಬ್ರಹ್ಮಣ್ಯ ಕೆ.ಎಸ್.ಎಸ್. ಕಾಲೇಜಿನ ಅಂತಿಮ ವರ್ಷದ ಪದವಿ ಓದುತಿದ್ದ ಭವಿಶ್ ಎಂಬ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಕಡಬ ತಾಲೂಕಿನ ಏನೆಕಲ್ಲು ಗ್ರಾಮದ ಪರಮಲೆ ಪುರುಷೋತ್ತಮ ಗೌಡರ ಪುತ್ರ ಭವಿಶ್ ಪಿ.ಪಿ. ಸುಬ್ರಹ್ಮಣ್ಯ ಕೆ.ಎಸ್.ಎಸ್. ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿ. ಮಂಗಳವಾರ ಪರೀಕ್ಷೆ ಮುಗಿಸಿದ ಬಳಿಕ ನಾಪತ್ತೆಯಾಗಿದ್ದ. ಸಂಜೆಯಾದರೂ ಮನೆಗೆ ಬಾರದೇ ಇದ್ದಾಗ ಮನೆಯವರು ಕಾಲೇಜು ಹಾಗೂ ಆತನ ಸ್ನೇಹಿತರಲ್ಲಿ ವಿಚಾರಿಸಿದಾಗ ಆತ ಮಧ್ಯಾಹ್ನವೇ ಮನೆಗೆ ತೆರಳಿರುವುದಾಗಿ ತಿಳಿದ ಬಳಿಕ ಸಂಜೆ ಹುಡುಕಾಡಿದಾಗ ರಾತ್ರಿ ಮರದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಸುಬ್ರಹ್ಮಣ್ಯ ಪೋಲೀಸ್ ಠಾಣೆಯಲ್ಲಿ ಮೃತನ ತಂದೆ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ .
ಮೃತ ವಿದ್ಯಾರ್ಥಿ ತಂದೆ, ತಾಯಿ ಸಹೋದರಿಯನ್ನು ಅಗಲಿದ್ದಾನೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel