ಸುಬ್ರಹ್ಮಣ್ಯ: ಚಂಪಾ ಷಷ್ಠಿ ಪೂರ್ವಬಾವಿ ಸಭೆ

November 4, 2019
2:22 PM

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಡಿ.1 ಹಾಗೂ 2 ರಂದು ನಡೆಯುವ ಚಂಪಾಷಷ್ಠಿ ಬಗ್ಗೆ ಪೂರ್ವಬಾವಿ ಸಿದ್ಧತಾ ಕಾರ್ಯಗಳ ಬಗ್ಗೆ ಸಮಾಲೋಚನೆ ನಡೆಸಲು ಸೋಮವಾರ ಸುಬ್ರಹ್ಮಣ್ಯದಲ್ಲಿ ಸಭೆ ನಡೆಯಿತು.

ಸಹಾಯಕ ಕಮೀಶನರ್ ಹಾಗೂ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಎಚ್.ಕೆ.ಕೃಷ್ಣಮೂರ್ತಿ ಅಧ್ಯಕ್ಷತೆಯಲ್ಲಿ  ನಡೆದ ಸಭೆಯಲ್ಲಿ ಪ್ರತೀ ವರ್ಷದಂತೆ ಸಂಭ್ರಮ, ಸಡಗರದಿಂದ “ಸುಬ್ರಹ್ಮಣ್ಯ ಜಾತ್ರೆ”  ನಡೆಸಲು ನಿರ್ಧರಿಸಲಾಯಿತು. ಸಭೆಯಲ್ಲಿ  ಪ್ರಮುಖವಾಗಿ ವಾಹನಗಳ ಪಾರ್ಕಿಂಗ್ ವ್ಯವಸ್ಥೆ, ಸಿಸಿಟಿವಿ ಅಳವಡಿಕೆ, ಭದ್ರತೆ ಸೇರಿದಂತೆ ಸ್ವಚ್ಛತಾ ಕಾರ್ಯಗಳು, ಬ್ರಹ್ಮರಥ ಎಳೆಯುವ ಸಂದರ್ಭ ಪಾಸ್ ವಿತರಣೆ , ಹೊರೆಕಾಣಿಕೆ ವ್ಯವಸ್ಥೆ ಇತ್ಯಾದಿಗಳ ಬಗ್ಗೆ ಚರ್ಚೆ ನಡೆಯಿತು. ನ.9 ರಂದು ಭದ್ರತೆ ಹಾಗೂ ರಸ್ತೆ ದುರಸ್ತಿ ಬಗ್ಗೆ ವಿಶೇಷ ಸಭೆ ನಡೆಸಲು ಇದೇ ವೇಳೆ ನಿರ್ಧರಿಸಲಾಯಿತು.

ಸಭೆಯಲ್ಲಿ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ ಪೇರಾಲು, ಜಿಪಂ ಸದಸ್ಯೆ ಆಶಾ ತಿಮ್ಮಪ್ಪ,  ತಾಪಂ ಸದಸ್ಯ ಅಶೋಕ್ ನೆಕ್ರಾಜೆ, ಗ್ರಾಪಂ ಅಧ್ಯಕ್ಷೆ ಸುಶೀಲಾ,  ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನಿಕಟಪೂರ್ವ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಹಾಗೂ ಸದಸ್ಯರು,  ಪೊಲೀಸ್ ಇಲಾಖೆಯ ಅಧಿಕಾರಿ ಚಂದಪ್ಪ,  ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಸಣ್ಣೇಗೌಡ ಹಾಗೂ ಸ್ಥಳೀಯ ಪ್ರಮುಖರು ಭಾಗವಹಿಸಿದ್ದರು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭಾರಿ ಮಳೆ ಎಚ್ಚರಿಕೆ: ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿಗೆ ಆರೆಂಜ್ – ಎಲ್ಲೋ ಅಲರ್ಟ್‌ | ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ
August 3, 2026
4:38 PM
by: ದ ರೂರಲ್ ಮಿರರ್.ಕಾಂ
ಹಿಂದೂ ಮಹಾಸಾಗರದ ಹವಾಮಾನದಲ್ಲಿ ಹಠಾತ್ ಬದಲಾವಣೆ – ಮತ್ತೆ ಮಹಾಮಳೆಗೆ ಕಾರಣವಾಗುತ್ತಿದೆಯೇ?
August 3, 2026
12:03 PM
by: ಸಾಯಿಶೇಖರ್ ಕರಿಕಳ
ರಾಜ್ಯದಲ್ಲಿ ಭಾರೀ ಮಳೆ ಆರ್ಭಟ – ಕೆಲವು ಜಿಲ್ಲೆಗಳಲ್ಲಿ ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
August 3, 2026
7:20 AM
by: ದ ರೂರಲ್ ಮಿರರ್.ಕಾಂ
ಆಹಾರ-ನಿದ್ರೆ ಪರಸ್ಪರ ಪೂರಕ; ಉತ್ತಮ ನಿದ್ರೆಗೆ ಹಸಿವು ಅಗತ್ಯ: ರಾಘವೇಶ್ವರ ಶ್ರೀ
August 2, 2026
9:50 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror