ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕೊಪ್ಪರಿಗೆ ಏರಿತು : ಕ್ಷೇತ್ರದಲ್ಲಿ ಇನ್ನಿಲ್ಲ ಸರ್ಪಸಂಸ್ಕಾರ ಸೇವೆ

November 24, 2019
10:43 PM

ಸುಬ್ರಹ್ಮಣ್ಯ: ಕಾರ್ತಿಕ ಬಹುಳ ದ್ವಾದಶಿಯಾದ ಭಾನುವಾರ  ಕುಕ್ಕೆಶ್ರೀ ಸುಬ್ರಹ್ಮಣ್ಯದಲ್ಲಿ ಕೊಪ್ಪರಿಗೆ ಏರುವುದರೊಂದಿಗೆ ವಾರ್ಷಿಕ ಜಾತ್ರೋತ್ಸವ ಆರಂಭವಾಯಿತು.  ಕೊಪ್ಪರಿಗೆ ಏರಿದ ಬಳಿಕ ಡಿ.9 ರಂದು ಕೊಪ್ಪರಿಗೆ ಇಳಿಯುವವರೆಗೆ  ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪಸಂಸ್ಕಾರ ಸೇವೆ ಜರುಗುವುದಿಲ್ಲ. ಡಿ.10 ಬಳಿಕ ಸರ್ಪಸಂಸ್ಕಾರ ಸೇವೆ ಆರಂಭವಾಗಲಿದೆ. ಜಾತ್ರೋತ್ಸವದ ಸಮಯದಲ್ಲಿ ಇತರ ಸೇವೆಗಳು ಎಂದಿನಂತೆ ನಡೆಯಲಿದೆ. ಚಂಪಾಷಷ್ಠಿ ದಿನ ಆಶ್ಲೇಷಾ ಬಲಿ ಮತ್ತು ನಾಗಪ್ರತಿಷ್ಠೆ ಸೇವೆಗಳು ನಡೆಯುವುದಿಲ್ಲ. ಲಕ್ಷದೀಪ ಅಮವಾಸ್ಯೆಯಂದು ಹಾಗೂ ಮಾರ್ಗಶಿರ ಶುದ್ಧ ಚೌತಿ, ಪಂಚಮಿ ಮತ್ತು ಷಷ್ಠಿಯಂದು ಮಹಾಭಿಷೇಕ ಸೇವೆ ನಡೆಯುವುದಿಲ್ಲ.ಈ ದಿನಗಳಲ್ಲಿ ರಾತ್ರಿ ಪ್ರಾರ್ಥನೆ ಸೇವೆ ನಡೆಯುವುದಿಲ್ಲ.

ಜಾತ್ರೋತ್ಸವ:
ನ.25 ಸೋಮವಾರ ಶೇಷವಾಹನಯುಕ್ತ ಬಂಡಿ ಉತ್ಸವ, ನ.26ರಂದು ಮಂಗಳವಾರ ಲಕ್ಷದೀಪೋತ್ಸವ ನಡೆಯಲಿದೆ. ನ.27 ಬುಧವಾರ ಶೇಷವಾಹನೋತ್ಸವ, ನ.28 ಗುರುವಾರ ಅಶ್ವವಾಹನೋತ್ಸವ, ನ.29 ಶುಕ್ರವಾರ ಮಯೂರ ವಾಹನೋತ್ಸವ ನಡೆಯಲಿದೆ. ನ.30 ಶನಿವಾರ ಚೌತಿ ಹೂವಿನ ತೇರಿನ ಉತ್ಸವ, ಡಿ.1 ಆದಿತ್ಯವಾರ ಮಾರ್ಗಶಿರ ಶುದ್ಧ ಪಂಚಮಿ ದಿನ ತೈಲಾಭ್ಯಂಜನ, ರಾತ್ರಿ ಪಂಚಮಿ ರಥೋತ್ಸವ ನೆರವೇರಲಿದೆ. ಡಿ.2 ಸೋಮವಾರ ಮಾರ್ಗಶಿರ ಶುದ್ಧ ಷಷ್ಠಿ ಬೆಳಗ್ಗೆ ಚಂಪಾಷಷ್ಠಿ ಮಹಾರಥೋತ್ಸವ ನಡೆಯಲಿದೆ. ಡಿ.3 ಮಂಗಳವಾರ ಅವಭೃತೋತ್ಸವ ಮತ್ತು ನೌಕವಿಹಾರ, ಡಿ.9 ಸೋಮವಾರ ಕೊಪ್ಪರಿಗೆ ಇಳಿಯುವುದರ ಮೂಲಕ ಜಾತ್ರೋತ್ಸವ ಸಮಾಪನಗೊಳ್ಳಲಿದೆ.ಈ ದಿನ ರಾತ್ರಿ ನೀರಿನಲ್ಲಿ ಬಂಡಿ ಉತ್ಸವ ನೆರವೇರಲಿದೆ. ಅಲ್ಲದೆ ಪುರುಷರಾಯ, ಹೊಸಳಿಗಮ್ಮ ಹಾಗೂ ಪರಿವಾರ ದೈವಗಳ ನಡಾವಳಿ ನಡೆಯಲಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ
May 4, 2026
2:57 PM
by: ದ ರೂರಲ್ ಮಿರರ್.ಕಾಂ
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು
May 4, 2026
7:58 AM
by: ದ ರೂರಲ್ ಮಿರರ್.ಕಾಂ
ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!
May 4, 2026
7:35 AM
by: ಮಿರರ್‌ ಡೆಸ್ಕ್
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!
May 3, 2026
10:27 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror