ಕೊಪ್ಪರಿಗೆ ಏರುವ ಸಂದರ್ಭ ಪೂಜಾ ಕಾರ್ಯ
ಸುಬ್ರಹ್ಮಣ್ಯ: ಕಾರ್ತಿಕ ಬಹುಳ ದ್ವಾದಶಿಯಾದ ಭಾನುವಾರ ಕುಕ್ಕೆಶ್ರೀ ಸುಬ್ರಹ್ಮಣ್ಯದಲ್ಲಿ ಕೊಪ್ಪರಿಗೆ ಏರುವುದರೊಂದಿಗೆ ವಾರ್ಷಿಕ ಜಾತ್ರೋತ್ಸವ ಆರಂಭವಾಯಿತು. ಕೊಪ್ಪರಿಗೆ ಏರಿದ ಬಳಿಕ ಡಿ.9 ರಂದು ಕೊಪ್ಪರಿಗೆ ಇಳಿಯುವವರೆಗೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪಸಂಸ್ಕಾರ ಸೇವೆ ಜರುಗುವುದಿಲ್ಲ. ಡಿ.10 ಬಳಿಕ ಸರ್ಪಸಂಸ್ಕಾರ ಸೇವೆ ಆರಂಭವಾಗಲಿದೆ. ಜಾತ್ರೋತ್ಸವದ ಸಮಯದಲ್ಲಿ ಇತರ ಸೇವೆಗಳು ಎಂದಿನಂತೆ ನಡೆಯಲಿದೆ. ಚಂಪಾಷಷ್ಠಿ ದಿನ ಆಶ್ಲೇಷಾ ಬಲಿ ಮತ್ತು ನಾಗಪ್ರತಿಷ್ಠೆ ಸೇವೆಗಳು ನಡೆಯುವುದಿಲ್ಲ. ಲಕ್ಷದೀಪ ಅಮವಾಸ್ಯೆಯಂದು ಹಾಗೂ ಮಾರ್ಗಶಿರ ಶುದ್ಧ ಚೌತಿ, ಪಂಚಮಿ ಮತ್ತು ಷಷ್ಠಿಯಂದು ಮಹಾಭಿಷೇಕ ಸೇವೆ ನಡೆಯುವುದಿಲ್ಲ.ಈ ದಿನಗಳಲ್ಲಿ ರಾತ್ರಿ ಪ್ರಾರ್ಥನೆ ಸೇವೆ ನಡೆಯುವುದಿಲ್ಲ.
ಜಾತ್ರೋತ್ಸವ:
ನ.25 ಸೋಮವಾರ ಶೇಷವಾಹನಯುಕ್ತ ಬಂಡಿ ಉತ್ಸವ, ನ.26ರಂದು ಮಂಗಳವಾರ ಲಕ್ಷದೀಪೋತ್ಸವ ನಡೆಯಲಿದೆ. ನ.27 ಬುಧವಾರ ಶೇಷವಾಹನೋತ್ಸವ, ನ.28 ಗುರುವಾರ ಅಶ್ವವಾಹನೋತ್ಸವ, ನ.29 ಶುಕ್ರವಾರ ಮಯೂರ ವಾಹನೋತ್ಸವ ನಡೆಯಲಿದೆ. ನ.30 ಶನಿವಾರ ಚೌತಿ ಹೂವಿನ ತೇರಿನ ಉತ್ಸವ, ಡಿ.1 ಆದಿತ್ಯವಾರ ಮಾರ್ಗಶಿರ ಶುದ್ಧ ಪಂಚಮಿ ದಿನ ತೈಲಾಭ್ಯಂಜನ, ರಾತ್ರಿ ಪಂಚಮಿ ರಥೋತ್ಸವ ನೆರವೇರಲಿದೆ. ಡಿ.2 ಸೋಮವಾರ ಮಾರ್ಗಶಿರ ಶುದ್ಧ ಷಷ್ಠಿ ಬೆಳಗ್ಗೆ ಚಂಪಾಷಷ್ಠಿ ಮಹಾರಥೋತ್ಸವ ನಡೆಯಲಿದೆ. ಡಿ.3 ಮಂಗಳವಾರ ಅವಭೃತೋತ್ಸವ ಮತ್ತು ನೌಕವಿಹಾರ, ಡಿ.9 ಸೋಮವಾರ ಕೊಪ್ಪರಿಗೆ ಇಳಿಯುವುದರ ಮೂಲಕ ಜಾತ್ರೋತ್ಸವ ಸಮಾಪನಗೊಳ್ಳಲಿದೆ.ಈ ದಿನ ರಾತ್ರಿ ನೀರಿನಲ್ಲಿ ಬಂಡಿ ಉತ್ಸವ ನೆರವೇರಲಿದೆ. ಅಲ್ಲದೆ ಪುರುಷರಾಯ, ಹೊಸಳಿಗಮ್ಮ ಹಾಗೂ ಪರಿವಾರ ದೈವಗಳ ನಡಾವಳಿ ನಡೆಯಲಿದೆ.
ಕಡಲ ತೀರದ ಸ್ವಚ್ಛತೆಯ 100ನೇ ವಾರದ 'ಕ್ಲೀನ್ ಕಿನಾರ' ಕಾರ್ಯಕ್ರಮಕ್ಕೆ ಶಾಸಕ ಗುರುರಾಜ್…
ಗುಜ್ಜೆ ಚಟ್ನಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ: ಗುಜ್ಜೆ 3/4 ಕಪ್ ,ನೀರು…
2025ರಲ್ಲಿ ಮಂಗಳ ಗ್ರಹವು ವಿವಿಧ ನಕ್ಷತ್ರಗಳಲ್ಲಿ ಸಂಚಾರ ಮಾಡುವುದರಿಂದ ಕೆಲ ರಾಶಿಗಳಿಗೆ ವಿಶೇಷ…
ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಮೂರು ದಿನಗಳ…
ಈಗಿನಂತೆ ಎಪ್ರಿಲ್ 29 ಹಾಗೂ 30 ರಂದು ಮಳೆ ಸ್ವಲ್ಪ ಕಡಿಮೆ ಇರುವ…
ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್‌ನಲ್ಲಿ ಪ್ರಧಾನಿ…