Advertisement
ಸುದ್ದಿಗಳು

ಸುಬ್ರಹ್ಮಣ್ಯ ದೇವಸ್ಥಾನ – ಸಂಪುಟ ನರಸಿಂಹ ಮಠ: ಮುಗಿಯದ ಸಂಘರ್ಷ : ಜೂ.10 ರ ಮೊದಲು ಮತ್ತೆ ಸಭೆ

Share

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಹಾಗೂ ಸಂಪುಟ ನರಸಿಂಹ ಸ್ವಾಮಿ ಮಠದ ನಡುವಿನ ಸರ್ಪಸಂಸ್ಕಾರ ಸೇವೆ ಸೇರಿದಂತೆ ಉಂಟಾಗಿರುವ ಭಿನ್ನಾಭಿಪ್ರಾಯ ಬಗೆಹರಿಸಲು ಪೇಜಾವರ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ನೇತೃತ್ವದಲ್ಲಿ  ಸುಬ್ರಹ್ಮಣ್ಯದಲ್ಲಿ ಶುಕ್ರವಾರ  ನಡೆದ ಸಭೆಯಲ್ಲೂ ಅಂತಿಮ ತೀರ್ಮಾನಕ್ಕೆ ಬರಲು ಸಾಧ್ಯವಾಗದೆ ಜೂ.11 ರ ಮೊದಲು ಮತ್ತೆ ಸಭೆ ನಡೆಸಲು ತೀರ್ಮಾನಿಸಲಾಗಿದೆ. ಅದಕ್ಕೂ ಮುನ್ನ ಮತ್ತೊಮ್ಮೆ ಅಭಿಪ್ರಾಯ ಸಂಗ್ರಹಿಸಲು ಉದ್ದೇಶಿಸಲಾಗಿದೆ.

ಸಂಜೆ 4 ಗಂಟೆಗೆ ಕ್ಷೇತ್ರಕ್ಕೆ ಆಗಮಿಸಿದ ಪೇಜಾವರ ಶ್ರೀಗಳು   ಸುಬ್ರಹ್ಮಣ್ಯ ದೇವರ ದರ್ಶನ ನಡೆಸಿದ  ಬಳಿಕ ಸಂಪುಟ ನರಸಿಂಹ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರ ಜೊತೆ  ಚರ್ಚೆ ನಡೆಸಿದ್ದಾರೆ.ಈ ವೇಳೆ ವಿಶ್ವ  ಹಿಂದೂ ಪರಿಷತ್ ಮತ್ತು ಬಜರಂಗದಳ ಮುಖಂಡರೂ ಸ್ವಾಮೀಜಿ ಗೆ ಸಾಥ್ ನೀಡಿದ್ದರು. ಆ ಬಳಿಕ ಸಭೆ ನಡೆಯಿತು. ಭಕ್ತರು ಹಾಗೂ ದೇವಸ್ಥಾನದ ಪ್ರಮುಖರು  ಭಾಗವಹಿಸಿದ್ದರು.

ಮಠದ ಜೊತೆಗಿನ ಚರ್ಚೆ ಬಳಿಕ ‌ಕ್ಷೇತ್ರದ ಕಚೇರಿಯಲ್ಲಿ ಎರಡೂ ಕಡೆಯನ್ನು ಕೂರಿಸಿ ಸಂಧಾನ ನಡೆಸಲು ಪ್ರಯತ್ನಿಸಿದ್ದಾರೆ.ಈ ವೇಳೆ ಎರಡೂ ಕಡೆಯ ನಾಯಕರಿಂದ ವಾದ –  ಪ್ರತಿವಾದ ಚರ್ಚೆ ನಡೆದಿದ್ದರಿಂದ ಪೇಜಾವರ ಶ್ರೀ ಸಂಧಾನ ಸಭೆ ಮೊಟಕುಗೊಳಿಸಿ ಜೂನ್ ಹತ್ತರೊಳಗೆ ಮಂಗಳೂರಿನಲ್ಲಿ ಸಭೆ ಕರೆದು ನಿರ್ಧಾರ ಪ್ರಕಟಿಸಿದರು. ಕ್ಷೇತ್ರದ ಆಡಳಿತ ಮಂಡಳಿ ಮತ್ತು ಮಠದ ಮುಖಂಡರು ಈ ಸಂಧಾನ ಸಭೆ ಗೆ ಒಪ್ಪಿಕೊಂಡಿದ್ದು,ಜೂನ್ ಹತ್ತರೊಳಗೆ ಮಂಗಳೂರಿನಲ್ಲಿ ನಡೆಯುವ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಸಭೆಯಲ್ಲಿ ವಿಹಿಂಪ ಮುಖಂಡರು, ದೇವಸ್ಥಾನದ ಆಡಳಿತ ಮಂಡಳಿ ಪ್ರಮುಖರು, ಮಠದ ಪ್ರಮುಖರು ಹಾಗೂ ಕುಕ್ಕೆ ಸುಬ್ರಹ್ಮಣ್ಯ ಭಕ್ತರು ಇದ್ದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಾಳುಮೆಣಸು ಮಾರುಕಟ್ಟೆಯಲ್ಲಿ ಏನಾಗುತ್ತಿದೆ?

ಆಗಮನ ಕಡಿಮೆಯಾಗಿದ್ದರೂ ದೇಶದ ಕಾಳುಮೆಣಸು ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ದಾಸ್ತಾನು ಮತ್ತು ಬೇಡಿಕೆ…

7 hours ago

ಹವಾಮಾನ ವರದಿ | 29-09-2026 | ಅ.6 ರವರೆಗೆ ಹಲವು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ

ಅರಬ್ಬಿ ಸಮುದ್ರದ ಗಾಳಿಯು ಶ್ರೀಲಂಕಾ ಹಾಗೂ ತಮಿಳುನಾಡು ಕರಾವಳಿ ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವ…

8 hours ago

ಕೃಷಿ ವೆಚ್ಚ ಕಡಿಮೆ ಮಾಡಲು ಇಲ್ಲಿ ರೈತರ ಹೊಸ ಹೆಜ್ಜೆ…

ರಾಸಾಯನಿಕ ಗೊಬ್ಬರ ಮತ್ತು ಕೀಟನಾಶಕಗಳ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಚಿತ್ರಕೂಟದ…

12 hours ago

‘ರೋಸ್ಟೆಡ್ ಅಡಿಕೆ’ ಆಮದು ವರ್ಗೀಕರಣಕ್ಕೆ ಮತ್ತೊಂದು ತಿರುವು – ಹೈಕೋರ್ಟ್ ತೀರ್ಪು ಉಲ್ಲೇಖಿಸಿ ಅರ್ಜಿ ತಿರಸ್ಕರಿಸಿದ ಮುಂಬೈ ಪ್ರಾಧಿಕಾರ

‘ರೋಸ್ಟೆಡ್ ಅಡಿಕೆ’ಯನ್ನು ಯಾವ ಸುಂಕ ವರ್ಗದಡಿ ಪರಿಗಣಿಸಬೇಕು ಎಂಬ ವಿವಾದಕ್ಕೆ ಮುಂಬೈ CAAR…

21 hours ago

ಬರಕ್ಕೆ ರಾಗಿ ಕೂಡ ಸೋಲುತ್ತಿದೆ – ‘ಬರ ನಿರೋಧಕ’ ಎಂದರೆ ಮಳೆ ಇಲ್ಲದಿದ್ದರೂ ಬೆಳೆಯುತ್ತದೆ ಎಂದಲ್ಲ!

ಮಳೆ ಇಲ್ಲದಿದ್ದರೆ ರಾಗಿ ಸೇರಿದಂತೆ ಬರ ಸಹಿಷ್ಣು ಬೆಳೆಗಳೂ ಉಳಿಯುವುದಿಲ್ಲ ಎಂಬುದನ್ನು ಕರ್ನಾಟಕದ…

22 hours ago

₹2,000ಕ್ಕಿಂತ ಹೆಚ್ಚಿನ UPI ವಹಿವಾಟಿನ MDRಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ

₹2,000ಕ್ಕಿಂತ ಹೆಚ್ಚಿನ ನಿರ್ದಿಷ್ಟ UPI ವ್ಯಾಪಾರಿ ವಹಿವಾಟುಗಳಿಗೆ MDR ವಿಧಿಸುವ ಕೇಂದ್ರದ ನಿರ್ಧಾರಕ್ಕೆ…

1 day ago