ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯಕ್ಕೆ ನೂತನ ಬ್ರಹ್ಮರಥವು ಅ.2 ರಂದು ತಲುಪಲಿದೆ. ಈ ಸಂದರ್ಭ ಸುಬ್ರಹ್ಮಣ್ಯದ ಸಂಪುಟ ನರಸಿಂಹ ಸ್ವಾಮಿ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಅವರಿಗೆ ಆಹ್ವಾನ ಇದೆಯೋ ಇಲ್ಲವೋ ಎಂಬ ಚರ್ಚೆ ಈಗ ಸಾಮಾಜಿಕ ಜಾಲತಾಣದಲ್ಲಿ ಕಂಡುಬರುತ್ತಿದೆ. ಕಳೆದ ಎರಡು ದಿನಗಳಿಂದ ಈ ಚರ್ಚೆ ನಡೆಯುತ್ತಿದೆ.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ದಾನಿಗಳಿಂದ ಹಾಗೂ ಭಕ್ತರಿಂದ ನೂತನ ಬ್ರಹ್ಮರಥ ಸಮರ್ಪಣೆಯಾಗಲಿದೆ. ಈಗಾಗಲೇ ಕೋಟೇಶ್ವರದಲ್ಲಿ ನೂತನ ಬ್ರಹ್ಮರಥ ನಿರ್ಮಾಣಗೊಂಡು ಸೆ.30 ರಂದು ಕೋಟೇಶ್ವರದಿಂದ ರಥ ಹೊರಡಲಿದ್ದು ಅ.2 ರಂದು ಕುಕ್ಕೆ ಸುಬ್ರಹ್ಮಣ್ಯಕ್ಕೆ ತಲುಪಲಿದೆ. ಇದಕ್ಕಾಗಿ ಈಗಾಗಲೇ ಪೂರ್ವಬಾವಿ ಸಭೆಯೂ ನಡೆದಿದೆ. ಅದ್ದೂರಿಯಾಗಿ ಸ್ವಾಗತ ಮಾಡಲು ಸಭೆಯಲ್ಲಿ ನಿರ್ಧರಿಸಲಾಗಿದೆ. ಆದರೆ ಇದೀಗ ಚರ್ಚೆಯಾಗುತ್ತಿರುವುದು ಸಂಪುಟ ನರಸಿಂಹ ಸ್ವಾಮಿ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಅವರಿಗೆ ಆಹ್ವಾನ ಇದೆಯೋ ಇಲ್ಲವೋ ಎಂಬ ಬಗ್ಗೆ. ಧಾರ್ಮಿಕವಾಗಿ ಸ್ವಾಮೀಜಿಗಳಿಗೆ ಆದ್ಯತೆ ನೀಡಲಾಗುತ್ತದೆಯಾದರೂ ಸುಬ್ರಹ್ಮಣ್ಯದಲ್ಲಿ ಈ ಬಗ್ಗೆ ಯಾವ ನಿರ್ಧಾರಗಳಾಗುತ್ತವೆ ಎಂಬುದು ಚರ್ಚೆಯ ವಿಷಯವಾಗಿದೆ.
ಕಳೆದ ಹಲವಾರು ಸಮಯಗಳಿಂದ ದೇವಸ್ಥಾನದ ಭಕ್ತರು ಹಾಗೂ ಸಂಪುಟ ನರಸಿಂಹ ಮಠದ ನಡುವೆ ಸರ್ಪಸಂಸ್ಕಾರದ ಕಾರಣಕ್ಕಾಗಿ ಚರ್ಚೆ, ವಾದಗಳು ನಡೆಯುತ್ತಿದ್ದವು. ಈ ಕಾರಣದಿಂದ ನ್ಯಾಯಾಲಯದಿಂದ ನೋಟೀಸ್ ಜಾರಿ, ಪೊಲೀಸ್ ಠಾಣೆಯಲ್ಲಿ ಕೇಸು ಇತ್ಯಾದಿಗಳು ನಡೆದಿತ್ತು. ಹೀಗಾಗಿ ಈಗ ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ನಡೆಯುತ್ತಿದೆ.
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…