ಸುಬ್ರಹ್ಮಣ್ಯ-ಮಠ ಸಂಧಾನ ಸಭೆ ಸುಬ್ರಹ್ಮಣ್ಯದಲ್ಲೇ ನಡೆಯಲಿ

June 13, 2019
11:00 AM

ಸುಬ್ರಹ್ಮಣ್ಯ: ಸರ್ಪ ಸಂಸ್ಕಾರ ಸೇರಿದಂತೆ ಇತರ ಸೇವೆಗಳ ಬಗ್ಗೆ ಸಂಪುಟ ನರಸಿಂಹ ಸ್ವಾಮಿ ಮಠ ಹಾಗೂ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಆಡಳಿತ ಸಮಿತಿ ನಡುವೆ ನಡೆಸುವ ಸಂಧಾನ ಸಭೆ ಸುಬ್ರಹ್ಮಣ್ಯದಲ್ಲೇ ನಡೆಯಬೇಕು ಎಂದು ಆದಿವಾಸಿ ಮಲೆಕುಡಿಯ ಜನಾಂಗದ ಮುಖಂಡ ಎ.ವಿ ನಾಗೇಶ್ ಒತ್ತಾಯ ಮಾಡಿದ್ದಾರೆ.

Advertisement
Advertisement

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಮತ್ತು ಶ್ರೀ ಸಂಪುಟ ನರಸಿಂಹ ಮಠ ಸಮಸ್ತ ನಾಡಿನ ಹಿಂದೂ ಸಮಾಜದ ಧಾರ್ಮಿಕ ಕೇಂದ್ರವಾಗಿದೆ. ಎರಡು ಧಾರ್ಮಿಕ ಸಂಸ್ಥೆಗಳ ಸಮಸ್ಯೆಯನ್ನು ಪರಿಹಾರ ಮಾಡುವವರು ಮತ್ತು ಸಂದಾನ ಕಾರ್ಯ ನಡೆಸುವವರು ಶ್ರೀ ಕ್ಷೇತ್ರದಲ್ಲೇ ನಡೆಸಬೇಕು. ಈ ಬಗ್ಗೆ ಇನ್ಯಾವುದೋ ಸ್ಥಳದಲ್ಲಿ ನಡೆಸುವುದು ಸೂಕ್ತವಲ್ಲ ಎಂದು ಅವರು ಹೇಳಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದೇವಳದ ಗರ್ಭಗುಡಿಯಲ್ಲಿ ಆರಾಧನೆ ಮಾಡುತ್ತಿರುವ ಗಣಪತಿ ದೇವರ ವಿಗ್ರಹವನ್ನು ಮೊದಲು ಇದ್ದಂತಹ ಜಾಗದಲ್ಲೇ ಪ್ರತಿಷ್ಠಾಪಿಸಿ ಆರಾಧಿಸಬೇಕು.  ಶ್ರೀ ಮಠದ ನರಸಿಂಹ  ಗುಡಿಗೆ ಬೇರೆ ಜಾಗದಲ್ಲಿ ಪ್ರತಿಷ್ಠಾಪಿಸಬೇಕು ಎಂದು ಒತ್ತಾಯಿಸಿದ ನಾಗೇಶ್ ಶ್ರೀ ಶಂಕರಾಚಾರ್ಯರ ಮಹಾ ಸಂಸ್ಥಾನ, ಶೃಂಗೇರಿ ಶಾರದಾಪೀಠದ ಗುರುಗಳಾದ ಶ್ರೀ ಭಾರತೀ ತೀರ್ಥ ಸ್ವಾಮೀಜಿಗಳ ಸಮ್ಮುಖದಲ್ಲಿ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲೇ ಸಮಸ್ಯೆಯ ಪರಿಹಾರ ಸಂಧಾನ ಮಾತುಕತೆ ನಡೆಯಬೇಕು.ಸಂಧಾನ ಮಾತುಕತೆಯಲ್ಲಿ ಶ್ರೀ ದೇವಳದ ಆಡಳಿತ ಮಂಡಳಿ, ಶ್ರೀ ಸಂಪುಟ ನರಸಿಂಹ ಸ್ವಾಮಿ ಮಠದ ಆಡಳಿತ ಮಂಡಳಿ ಮತ್ತು ದೇವಸ್ಥಾನದ ಹಿತರಕ್ಷಣಾ ವೇದಿಕೆ ಸದಸ್ಯರುಗಳನ್ನು ಹೊರತು ಪಡಿಸಿ ಇನ್ನಿತರ ಯಾವುದೇ ಸಂಘ ಸಂಸ್ಥೆಗಳ, ವ್ಯಕ್ತಿಗಳು ಭಾಗಿಯಾಗಬಾರದು. ಅಲ್ಲದೇ ಸಂಧಾನ ಮಾತುಕತೆ ಸಂದರ್ಭದಲ್ಲಿ ಕ್ಷೇತ್ರದ ಮೂಲ ನಿವಾಸಿಗಳಾದ ಮಲೆಕುಡಿಯ ಸಮುದಾಯದ ಅಭಿಪ್ರಾಯಗಳನ್ನು ಕೂಡ ಪರಿಗಣಿಸಬೇಕೆಂದು ಆಗ್ರಹಿಸುತ್ತಿದ್ದೇವೆ ಎಂದು ನಾಗೇಶ್ ಹೇಳಿದ್ದಾರೆ. ಈ ಸಂದರ್ಭದಲ್ಲಿ ಪ್ರಮುಖರಾದ ಬೆಳ್ಳಿಯಪ್ಪ ಮಲೆಕುಡಿಯ, ಕೇಶವ, ಬಾಬು ಎ.ವಿ, ನಾರಾಯಣ ಡಿ ಉಪಸ್ಥಿತರಿದ್ದರು.

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಏರಿದ ತಾಪಮಾನ : ರಾಜ್ಯದಲ್ಲಿ ಇಂದಿನಿಂದ 5 ದಿನ ಬೀಸಲಿದೆ ಬಿಸಿಗಾಳಿ ಎಚ್ಚರಿಕೆ..!
April 25, 2024
11:01 PM
by: The Rural Mirror ಸುದ್ದಿಜಾಲ
ನೆಲ್ಯಾಡಿ | ವಿಶ್ವವಿದ್ಯಾನಿಲಯ ಕಾಲೇಜು ಶಿಕ್ಷಕ-ರಕ್ಷಕ ಸಂಘದ ಮಹಾಸಭೆ | ನೂತನ ಪದಾಧಿಕಾರಿಗಳ ನೇಮಕ
April 25, 2024
10:12 PM
by: ದ ರೂರಲ್ ಮಿರರ್.ಕಾಂ
ಇತ್ತೀಚಿಗೆ ಮಕ್ಕಳ ಬೆಳವಣಿಗೆ ಕುಂಠಿತವಾಗುತ್ತಿದೆ | ಮಕ್ಕಳ ತೂಕ ಮತ್ತು ಎತ್ತರವನ್ನು ಹೆಚ್ಚಿಸುವ ಆಹಾರಗಳು |
April 25, 2024
3:13 PM
by: The Rural Mirror ಸುದ್ದಿಜಾಲ
ಕೊನೆಗೂ ಗಾಂಧಿ ಕುಡಿಗಳ ಕ್ಷೇತ್ರ ಫಿಕ್ಸ್‌ | ರಾಯ್ ಬರೇಲಿಯಿಂದ ಪ್ರಿಯಾಂಕಾ, ಅಮೇಥಿಯಿಂದ ರಾಹುಲ್ ಸ್ಪರ್ಧೆ ಬಹುತೇಕ ಖಚಿತ |
April 25, 2024
3:00 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror