ಸುಬ್ರಹ್ಮಣ್ಯ: ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ವಸತಿಗೃಹದಲ್ಲಿ ಯವಕ ಹಾಗೂ ಯುವತಿ ಪೊಲೀಸ್ ವಶವಾದ ಬಳಿಕ ಇದೀಗ ಕ್ಷೇತ್ರದ ಎಲ್ಲಾ ವಸತಿಗೃಹಗಳಲ್ಲಿ ಕೊಠಡಿ ಪಡೆಯುವವರ ಸೂಕ್ತ ದಾಖಲೆ ಪಡೆದೇ ಕೊಠಡಿ ನೀಡುವಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಹಿಂದೂ ಸಂಘಟನೆ ಹಾಗೂ ಸ್ಥಳೀಯರು ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದ್ದಾರೆ.
ಪವಿತ್ರ ಕ್ಷೇತ್ರದಲ್ಲಿ ಯಾವುದೇ ವಸತಿಗೃಹದಲ್ಲಿ ಸರಿಯಾದ ದಾಖಲೆ ಪಡೆಯದೇ ಕೊಠಡಿ ನೀಡುವುದು ಅನೈತಿಕ ವ್ಯವಹಾರಕ್ಕೆ ಅವಕಾಶ ನೀಡಿದಂತಾಗುತ್ತದೆ. ಈ ನಿಟ್ಟಿನಲ್ಲಿ ಪೋಲಿಸ್ ಇಲಾಖೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡು ಶ್ರೀ ಕ್ಷೇತ್ರದ ಪಾವಿತ್ರ್ಯತೆ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಬೇಕು ಎಂದು ಊರನಾಗರಿಕರ ಪರವಾಗಿ ಪೋಲಿಸ್ ಇಲಾಖೆಗೆ ಮನವಿಮಾಡಲಾಯಿತು. ಈ ಬಗ್ಗೆ ತನಿಖೆ ನಡೆಸಿ ಮುಂದಿನ ದಿನಗಳಲ್ಲಿ ಈ ನಿಟ್ಟಿನಲ್ಲಿ ಪೋಲಿಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಬಗ್ಗೆ ಪೋಲಿಸ್ ಅಧಿಕಾರಿಯವರು ಸೇರಿದ ನಾಗರಿಕರಿಗೆ ಭರವಸೆ ನೀಡಿದರು.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೇಘಾಲಯಕ್ಕೆ ಭೇಟಿ ನೀಡಿದ ಸಂದರ್ಭ ಹಲಸಿನ…
ವ್ಯಾಪಾರದ ಯಶಸ್ಸು ಒಂದು ಕಾಲದಿಂದ ಇನ್ನೊಂದು ಕಾಲಕ್ಕೆ ಬದಲಾಗುತ್ತದೆ, ಮತ್ತು ಜ್ಯೋತಿಷ್ಯ ಶಾಸ್ತ್ರದ…
ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಮತ್ತು ಇತರ ಮೂವರು ಸಿಬ್ಬಂದಿಯನ್ನು…
ಸಾಮಾಜಿಕ ವ್ಯವಸ್ಥೆಯಲ್ಲಿ ‘ಸೇವೆ’ಗೆ ಮೌಲ್ಯ ನಿರ್ಧರಿಸಲು ಕಷ್ಟಸಾಧ್ಯ. ಆತ್ಮಾರ್ಥ ಸೇವೆಗಳು ಸದ್ದಾಗುವುದಿಲ್ಲ. ಫಕ್ಕನೆ…
15.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…