ಸುಬ್ರಹ್ಮಣ್ಯ ಸಂಪುಟ ಶ್ರೀ ನರಸಿಂಹ ಮಠದ ಗೋಶಾಲೆಯಲ್ಲಿ ಕರುವಿಗೆ ಆಶ್ರಯ

August 30, 2019
2:15 PM

ಸುಬ್ರಹ್ಮಣ್ಯ :ಸುಬ್ರಹ್ಮಣ್ಯ ಸಮೀಪದ ಮಲೆಯಾಳ ಬಳಿ  ಕಾಲಿಗೆ ಗಾಯಗೊಂಡು ಅನಾಥವಾಗಿ ಕಂಡು ಬಂದ ಹೋರಿ ಕರುವನ್ನು ರಕ್ಷಿಸಿದ ಸುಬ್ರಹ್ಮಣ್ಯ ಕೆಎಸ್‍ಎಸ್ ಕಾಲೇಜಿನ ಎಬಿವಿಪಿ ವಿದ್ಯಾರ್ಥಿಗಳು ಕರುವನ್ನು ಸಂಪುಟ ಶ್ರೀ ನರಸಿಂಹ ಸ್ವಾಮಿ ಮಠದ ಗೋಶಾಲೆಗೆ ಸೇರಿಸಿದ್ದಾರೆ.

ಕೆಲ ದಿನಗಳ ಹಿಂದೆ ಯಾರೋ ಕಿಡಿಗೇಡಿಗಳು ರಾತ್ರಿ ಹೊತ್ತು ಹೋರಿ ಕರುವೊಂದನ್ನು ಸುಬ್ರಹ್ಮಣ್ಯ –ಜಾಲ್ಸೂರು ಸಂಪರ್ಕ ರಸ್ತೆಯ ಮಲೆಯಾಳ ಬಳಿ ತಂದು ಬಿಟ್ಟು ಹೋಗಿದ್ದರು. ಅಂದಿನಿಂದ ಸ್ಥಳಿಯವಾಗಿ ಕರುವುದು ತಿರುಗಾಡಿಕೊಂಡಿತ್ತು. ಬುಧವಾರ ಕಾಲಿಗೆ ಏಟು ಮಾಡಿಕೊಂಡ ಸ್ಥಿತಿಯಲ್ಲಿ ಕರು ರಸ್ತೆ ಬದಿ ಇರುವುದನ್ನು ಗಮನಿಸಿದ ವಿದ್ಯಾರ್ಥಿಗಳು ಸುಬ್ರಹ್ಮಣ್ಯ ಸಂಪುಟ ಶ್ರೀ ನರಸಿಂಹ ಸ್ವಾಮಿ  ಮಠದ ಆಡಳಿತಾಧಿಕಾರಿ ಸುದರ್ಶನ ಜೋಯಿಸ ಅವರ ಗಮನಕ್ಕೆ ತಂದಿದ್ದರು.

ಕರುವಿಗೆ ಮಠದ ಗೋಶಾಲೆಯಲ್ಲಿ ಆಶ್ರಯ ಒದಗಿಸುವ ಕುರಿತು ಅವರಿಂದ ಭರವಸೆ ವ್ಯಕ್ತಗೊಂಡಿತ್ತು. ಜತೆಗೆ ಮಠದಿಂದ ವಾಹನವನ್ನು ಸಿಬಂದಿಗಳನ್ನು ಮಕ್ಕಳ ಜತೆ ಕಳಿಸಿಕೊಟ್ಟು ವ್ಯವಸ್ಥೆ ಕಲ್ಪಿಸಿದ್ದರು. ಅದರಂತೆ ಸಿಬಂದಿಗಳ ನೆರವಿನಿಂದ ವಿದ್ಯಾರ್ಥಿಗಳು ಕರುವನ್ನು ಹಿಡಿದು ತಂದು ಮಠಕ್ಕೆ ಒಪ್ಪಿಸಿದ್ದು ಮಠದಲ್ಲಿ ಕರುವಿಗೆ ಚಿಕಿತ್ಸೆ ನೀಡಿ ಆಶ್ರಯ ನೀಡಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?
September 9, 2026
6:43 AM
by: ಅರುಣ್‌ ಕುಮಾರ್ ಕಾಂಚೋಡು
ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..
September 8, 2026
11:10 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ
September 8, 2026
10:02 PM
by: ದ ರೂರಲ್ ಮಿರರ್.ಕಾಂ
ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ
September 8, 2026
9:38 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror