Advertisement
ರಾಜ್ಯ

ಸುಬ್ರಹ್ಮಣ್ಯ – ಸಕಲೇಶಪುರ ರೈಲು ಮಾರ್ಗದಲ್ಲಿ ಆತಂಕ ಹಳಿಗೆ ಉರುಳಲು ಸಿದ್ದವಾಗಿದೆ ಬಂಡೆ !

Share

ನೆಟ್ಟಣ: ಮಂಗಳೂರು-ಬೆಂಗಳೂರು ನಡುವಿನ ರೈಲು ಮಾರ್ಗದಲ್ಲಿ  ಸುಬ್ರಹ್ಮಣ್ಯದಿಂದ ಸಕಲೇಶಪುರ ನಡುವಿನ ರೈಲು ಹಳಿಯಲ್ಲಿ   ಮಣಿಬಂಡ ಎಂಬಲ್ಲಿ ಬಂಡೆಯೊಂದು ರೈಲು ಹಳಿ ಮೇಲೆ ಉರುಳಿ ಬೀಳಲು ಸಿದ್ದವಾಗಿದೆ. ಬಂಡೆ ತೆರವು ಕಾಮಗಾರಿಯನ್ನು ಶನಿವಾರ ನಡೆಸಲು ರೈಲ್ವೆ ಅಧಿಕಾರಿಗಳು ಸಿದ್ದತೆ ಮಾಡಿಕೊಂಡಿದ್ದಾರೆ.

ಶನಿವಾರ ಬಂಡೆ ಸ್ಪೋಟಿಸುವ ಕಾಮಗಾರಿ ವೇಳೆ ಮತ್ತಷ್ಟು ಭೂಕುಸಿತ ಆದಲ್ಲಿ ಈ ಮಾರ್ಗದಲ್ಲಿ ಶನಿವಾರ ಹಗಲು ಅಥವಾ ರಾತ್ರಿ ಅವಧಿ ರೈಲು ಓಡಾಟಗಳಲ್ಲಿ ವ್ಯತ್ಯಯಗಳು ಉಂಟಾಗುವ ಸಾಧ್ಯತೆ ಇದೆ. ಸುಬ್ರಹ್ಮಣ್ಯ ರಸ್ತೆ ಮತ್ತು ಸಿರಿಬಾಗಿಲು ನಡುವಿನ  86 ನೇ ಕಿ.ಮೀ ನಲ್ಲಿ ಹಳಿಯ ಮೇಲೆ ಕಳೆದ ಮಳೆಗಾಲ ಆಗಸ್ಟ್ ನಲ್ಲಿ ಭಾರಿ ಭೂಕುಸಿತ ಸಂಭವಿಸಿತ್ತು. ಹಲವು ಕಡೆ ಭೂಕುಸಿತ ಸಂಭವಿಸಿ ಅನಾಹುತ ಸೃಷ್ಟಿಸಿತ್ತು. ಅಂದು ಭೂಕುಸಿತಗೊಂಡ ಸ್ಥಳದಲ್ಲಿ ಈ ಅಪಾಯಕಾರಿ ಬಂಡೆ ಇದೆ. ಈ ಸ್ಥಳದಲ್ಲಿ ಇನ್ನಷ್ಟು ಭೂಕುಸಿತ ನಡೆಯುವ ಸಾಧ್ಯ ತೆಗಳು ಕಂಡುಬಂದಿವೆ. ಶುಕ್ರವಾರ ರಾತ್ರಿ ರೈಲು ಓಡಾಟ ನಡೆಸಿದ ಬಳಿಕವಷ್ಟೆ ಬಂಡೆ ತೆರವು ಕಾಮಗಾರಿ ಕುರಿತು ರೈಲ್ವೆ ಅಧಿಕಾರಿಗಳು ನಿರ್ಧಾರಿಸಲಿದ್ದಾರೆ.

ದಕ್ಷಿಣ ಪಶ್ಚಿಮ ರೈಲ್ವೆ ವಿಭಾಗದ ತಾಂತ್ರಿಕ ಅಧಿಕಾರಿಗಳು ಈ ಭಾಗದಲ್ಲಿ ಮೊಕ್ಕಂ ಹೂಡಿ ಪರಿಶೀಲನೆ ನಡೆಸುತಿದ್ದಾರೆ.ಅತೀವ ಮಳೆ ಇರುವ ಕಾರಣ ಈ ಮಾರ್ಗದಲ್ಲಿ ರೈಲು ಯಾನದ ಕುರಿತು ತೀವ್ರ ನಿಗಾವಹಿಸಲಾಗಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…

19 hours ago

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

1 day ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

2 days ago

ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ

ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…

2 days ago