ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಹಾಗೂ ಸಂಪುಟ ನರಸಿಂಹ ಸ್ವಾಮಿ ಮಠದ ನಡುವೆ ಕಳೆದ ಕೆಲವು ಸಮಯಗಳಿಂದ ನಡೆಯುತ್ತಿದ್ದ ಸರ್ಪಸಂಸ್ಕಾರ ಸೇವೆಯ ಬಗೆಗಿನ ವಿವಾದವನ್ನು ಬಗೆಹರಿಸಲು ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಸುಬ್ರಹ್ಮಣ್ಯಕ್ಕೆ ಆಗಮಿಸಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಆಗಮಿಸಿದ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಪಾದಂಗಳವರಿಗೆ ದೇವಸ್ಥಾನದ ಗೋಪುರದಿಂದ ದೇವಸ್ಥಾನದ ವತಿಯಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಬಳಿಕ ಶ್ರೀಗಳು ಸಂಪುಟ ನರಸಿಂಹ ಸ್ವಾಮಿ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಅವರನ್ನು ಭೇಟಿ ಮಾಡಿದರು.ಈ ಸಂದರ್ಭ ವಿಶ್ವ ಹಿಂದೂ ಪರಿಷದ್ ಮುಖಂಡ ಎಂ.ಬಿ.ಪುರಾಣಿಕ್ , ಬಜರಂಗದಳ ಮುಖಂಡರಾದ ಶರಣ್ ಪಂಪ್ ವೆಲ್, ಹಿಂದೂ ಮುಖಂಡರುಗಳಾದ ಜಗದೀಶ ಶೇಣವ, ಪ್ರಮುಖರಾದ ಹರಿಕೃಷ್ಣ ಪುನರೂರು ಮೊದಲಾದವರು ಇದ್ದರು.
ಇದೀಗ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಜೊತೆ ಮಾತನಾಡಿದ ಬಳಿಕ ಪೇಜಾವರ ಶ್ರೀಗಳು ಭಕ್ತರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ಈ ಸಂದರ್ಭ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಪೇಜಾವರ ಶ್ರೀಗಳು, ವಿವಾದ ಬಗೆಹರಿಸುವ ವಿಶ್ವಾಸ ವ್ಯಕ್ತಪಡಿಸಿದರು.
ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್…
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಳೆ ಮಂಡಿಸಲಿರುವ ಕೇಂದ್ರ ಬಜೆಟ್ 2025…