ಸುಬ್ರಹ್ಮಣ್ಯ: ಸುರಕ್ಷತೆಯ ಪ್ರಯಾಣ ನಮ್ಮೆಲ್ಲರ ಆದ್ಯತೆಯಾಗಿರಲಿ ಎಂಬ ಘೋಷವಾಕ್ಯದಡಿಯಲ್ಲಿ, ಒಮಾನಾ ಸುಬ್ರಹ್ಮಣ್ಯ ಠಾಣಾಧಿಕಾರಿ ನೇತೃತ್ವದಲ್ಲಿ ಸಂಚಾರ ನಿಯಂತ್ರಣ ಮತ್ತು ಸುರಕ್ಷತಾ ಸಪ್ತಾಹ ಕಾರ್ಯಕ್ರಮ ನಡೆಯಿತು.
ಸುಬ್ರಹ್ಮಣ್ಯ ಪೊಲೀಸ್ ಅಧಿಕಾರಿಗಳು ಹಾಗು ಸುಬ್ರಹ್ಮಣ್ಯ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳು ಜ.17ರಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ರಥಬೀದಿಯಲ್ಲಿ ಸಭೆ ಸೇರಿ ಪಥಸಂಚಲನ ನಡೆಸಿ, ನಿಧಾನವಾಗಿ ಚಲಿಸಿ ಕುಟುಂಬ ನಿಮ್ಮ ಬರುವಿಕೆಗೆ ಕಾಯುತ್ತಿರುತ್ತದೆ, ಹೆಲ್ಮೆಟ್ ಧರಿಸಿ, ಸಿಟಿಬೆಲ್ಟ್ ಧರಿಸಿ, ರಸ್ತೆ ಸುರಕ್ಷತೆ ಎಂಬುದು ಅತೀ ಚಿಕ್ಕ ವಿಷಯ ನಿರ್ಲಕ್ಷ ಮಾಡಿದರೆ ದುಬಾರಿ ಆಗುತ್ತದೆ, ರಸ್ತೆ ನಿಯಮ ಪಾಲಿಸಿ ಜೀವ ಉಳಿಸಿ ಎಂಬುದಾಗಿ ಸಾರ್ವಜನಿಕರಲ್ಲಿ ಅರಿವುಮೂಡಿಸುವ ಕಾರ್ಯ ನಡೆಯಿತು.
ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ಠಾಣಾಧಿಕಾರಿ ಒಮಾನಾ, ಎ. ಎಸ್. ಐ ಕರುಣಾಕರ , ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷ ರಾಜೇಶ ಏನ್. ಎಸ್, ಸುಬ್ರಹ್ಮಣ್ಯ ಪದವಿಪೂರ್ವ ಕಾಲೇಜು ಶಿಕ್ಷಕಿ ಸ್ಮಿತಾ, ಶಿಕ್ಷಕ ಗುರುರಾಜ್, ಹಾಗು ಪೊಲೀಸ್ ಸಿಬಂದಿಗಳು, ಹೋಮ್ ಗಾರ್ಡ್ ಸಿಬಂದಿಗಳು ಹಾಗು ವಿದ್ಯಾರ್ಥಿಗಳು ಪಾಲ್ಗೊಂಡರು.
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.