ಸುಳ್ಯ: ಹಿರಿಯ ಸಾಹಿತಿ ಸುಬ್ರಾಯ ಚೊಕ್ಕಾಡಿಯವರ ಕವನ ಸಂಕಲನ ಕಲ್ಲುಮಂಟಪ ಸೋಮವಾರ ಬಿಡುಗಡೆಯಾಯಿತು. ಸುಬ್ರಾಯ ಚೊಕ್ಕಾಡಿ ಅವರ 80 ನೇ ಹುಟ್ಟುಹಬ್ಬದ ಸಂದರ್ಭ ಆಯೋಜನೆಗೊಂಡಿದ್ದ ಕಾರ್ಯಕ್ರಮದಲ್ಲಿ ಕವನಸಂಕಲನ ಬಿಡುಗಡೆ ಮಾಡಲಾಯಿತು.
ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಫ್ರೆಂಡ್ಸ್ ಕ್ಲಬ್ ಪೈಲಾರು ಇವರ ಜಂಟಿ ಸಹಯೋಗದಲ್ಲಿ ಸುಬ್ರಾಯ ಚೊಕ್ಕಾಡಿಯವರ ಬದುಕು-ಬರಹಗಳ ಬಗ್ಗೆ ಅವಲೋಕನ ಎಂಬ ಕಾರ್ಯಕ್ರಮ ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕದಲ್ಲಿ ಆಯೋಜಿಸಲಾಗಿತ್ತು.
ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಹರಪ್ರಸಾದ್ ತುದಿಯಡ್ಕ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕವನ ಸಂಕಲನ ಕಲ್ಲು ಮಂಟಪ ವನ್ನು ಹಿರಿಯ ಸಾಹಿತಿ, ಉಪನ್ಯಾಸಕ ಡಾ.ಪೂವಪ್ಪ ಕಣಿಯೂರು ಬಿಡುಗಡೆ ಮಾಡಿದರು. ಈ ಸಂದರ್ಭ ಯುವ ಬರಹಗಾರ-ಶಿಕ್ಷಕ ಅರವಿಂದ ಚೊಕ್ಕಾಡಿ ಹಾಗೂ ಬೆಳ್ತಂಗಡಿ ತಾಲೂಕು ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿಗಳಾದ ರಾಮಕೃಷ್ಣ ಭಟ್ ಬೆಳಾಲು ಅತಿಥಿಗಳಾಗಿದ್ದರು. ವೇದಿಕೆಯಲ್ಲಿ ಚಂದ್ರಶೇಖರ ಪೇರಾಲು, ದಯಾನಂದ ಆಳ್ವ, ಮೊದಲಾದವರು ಇದ್ದರು.
ರಾಜ್ಯದ ದಕ್ಷಿಣ ಕರಾವಳಿ, ಮಲೆನಾಡು ಭಾಗಗಳಲ್ಲಿ ಬೇಸಿಗೆ ಮಳೆಯು ಮುಂದುವರಿಯುವ ಲಕ್ಷಣಗಳಿವೆ. ಉತ್ತರ…
ರಾಜಕೀಯ ಎನ್ನುವುದು ಕೃಷಿ ಹಾಗೂ ಅಡಿಕೆ ಬೆಳೆಗಾರರ ವಿಚಾರದಲ್ಲಿ ಕೂಡಾ ಹೇಗೆ ಇರುತ್ತದೆ,…
ಮನುಷ್ಯನಿಗೆ ಆಹಾರ, ನಿದ್ರೆಗಳು ಸಹಜ. ವಯೋವೃದ್ಧರಿಗೆ ಬೋಜನದ ನಂತರದ ನಿದ್ರೆಯಿಂದ ಮೈಮನಗಳಿಗೆ ಸ್ಫೂರ್ತಿ.…
ದಾವಣಗೆರೆ ಜಿಲ್ಲೆಯ 6 ತಾಲೂಕುಗಳಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಬಹುದಾದ 197…
ಯಾದಗಿರಿ ಜಿಲ್ಲೆಯಲ್ಲಿ ಮುಂದಿನ ಮೂರು ತಿಂಗಳಿನಲ್ಲಿ ಗರಿಷ್ಠ 45 ಡಿಗ್ರಿ ಸೆಲ್ಸಿಯಸ್ ತಾಪಮಾನ…
ವಿಶ್ವವಿಖ್ಯಾತ ಜೋಗ ಜಲಪಾತ ಪ್ರದೇಶದ ವ್ಯಾಪ್ತಿಯಲ್ಲಿ ಪ್ರವಾಸಿಗರಿಗೆ ಮೂಲಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ…