Advertisement
MIRROR FOCUS

ಸುಳ್ಯಕ್ಕೆ ಮತ್ತೆ ವಕ್ಕರಿಸಿದ ಕೋವಿಡ್ | ಸುಳ್ಯ ಸರಕಾರಿ ಆಸ್ಪತ್ರೆ ಸಂಪೂರ್ಣ ಸೀಲ್ ಡೌನ್

Share

ಸುಳ್ಯ: ವೈದ್ಯರಿಗೆ ಮತ್ತು ವೈದ್ಯಕೀಯ ಸಿಬ್ಬಂದಿಗಳಿಗೆ ಮತ್ತೆ ಕೊರೋನಾ ಪಾಸಿಟಿವ್ ಬಂದಿರುವ ಹಿನ್ನಲೆಯಲ್ಲಿ ಸುಳ್ಯ ಸರಕಾರಿ ತಾಲೂಕು ಆಸ್ಪತ್ರೆಯನ್ನು ಸಂಪೂರ್ಣ ಸೀಲ್ ಡೌನ್ ಮಾಡಲಾಗಿದೆ. 48 ಗಂಟೆಗಳ ಬಳಿಕ ಆಸ್ಪತ್ರೆಯನ್ನು ಸ್ಯಾನಿಟೈಸ್ ಮಾಡಿ ಬಳಿಕ ತೆರೆಯಲಾಗುವುದು ಎಂದು ತಾಲೂಕು ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಕೆ.ವಿ.ಕರುಣಾಕರ ತಿಳಿಸಿದ್ದಾರೆ.

ಸುಳ್ಯ ಸರಕಾರಿ ಆಸ್ಪತ್ರೆಯಿಂದ ಪರೀಕ್ಷೆಗೆ ಕಳುಹಿಸಿದ 32 ಮಾದರಿಯಲ್ಲಿ 6 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದೆ. ಒಬ್ಬರು ವೈದ್ಯರು, ಒಬ್ಬರು ನರ್ಸಿಂಗ್ ಸಿಬ್ಬಂದಿ, 3 ಡಯಾಲಿಸಿಸ್ ಸಿಬ್ಬಂದಿ ಮತ್ತು ಒಬ್ಬರು ರೋಗಿಗೆ ಕೋವಿಡ್ ಪಾಸಿಟಿವ್ ಬಂದಿದೆ.

ಕೆಲವು ದಿನಗಳ ಹಿಂದೆ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿದ್ದ ರೋಗಿಗೆ ಮತ್ತು ಈ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ನರ್ಸ್ ಓರ್ವರಿಗೆ ಕೊರೋನಾ ಪಾಸಿಟಿವ್ ಬಂದಿತ್ತು. ಈ ಹಿನ್ನಲೆಯಲ್ಲಿ ಆಸ್ಪತ್ರೆಯ ವೈದ್ಯರ ಮತ್ತು ಸಿಬ್ಬಂದಿಗಳ ಗಂಟಲ ದ್ರವ ಮಾದರಿ ಪರೀಕ್ಷೆಗೆ ಕಳುಹಿಸಲಾಗಿತ್ತು‌. ನರ್ಸ್ ಓರ್ವರಿಗೆ ಕೊರೋನಾ ಪಾಸಿಟಿವ್ ಬಂದ ಕಾರಣ ಆಸ್ಪತ್ರೆಯ ತೀವ್ರ ನಿಗಾ ಘಟಕ ಮತ್ತು ಡಯಾಲಿಸಿಸ್ ಘಟಕವನ್ನು ತಾತ್ಕಾಲಿಕವಾಗಿ ಮುಚ್ಚಲಾಗಿತ್ತು. ಇದೀಗ ಆಸ್ಪತ್ರೆಯ ವೈದ್ಯರಿಗೆ ಮತ್ತು ದಾದಿಯರಿಗೆ ಕೊರೋನಾ ಪಾಸಿಟಿವ್ ಬಂದಿರುವುದು ಆತಂಕಕ್ಕೆ ಕಾರಣವಾಗಿದೆ‌.
ಆಸ್ಪತ್ರೆಯನ್ನು ಸೀಲ್ ಡೌನ್ ಮಾಡಲಾಗಿದ್ದು ತುರ್ತು ಚಿಕಿತ್ಸಾ ವಿಭಾಗ ಸೇರಿ ಎಲ್ಲಾ ವಿಭಾಗವನ್ನೂ ಮುಚ್ಚಲಾಗುವುದು. ಒಳ ರೋಗಿಗಳ ಚಿಕಿತ್ಸೆ ಮಾತ್ರ ಎಂದಿನಂತೆ ನಡೆಯಲಿದೆ. ಅವರಿಗೆ ಚಿಕಿತ್ಸೆ ನೀಡಲು ಒಬ್ಬರು ವೈದ್ಯರು ಮತ್ತು ಕೆಲ ಮಂದಿ ನರ್ಸಿಂಗ್ ಸಿಬ್ಬಂದಿಗಳು ಕಾರ್ಯನಿರ್ವಹಿಸಲಿದ್ದಾರೆ. 48 ಗಂಟೆಗಳ ಬಳಿಕ ಸಂಪೂರ್ಣ ಸ್ಯಾನಿಟೈಸ್ ಮಾಡಿದ ಬಳಿಕ ಶನಿವಾರದಿಂದ ಆಸ್ಪತ್ರೆ ಮತ್ತೆ ತೆರೆದು ಕಾರ್ಯಾಚರಿಲಿದೆ ಎಂದು ಡಾ.ಕರುಣಾಕರ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!

ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…

9 hours ago

ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!

ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…

12 hours ago

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

15 hours ago

ಹವಾಮಾನ ವರದಿ | 27-03-2026 | ಮಾರ್ಚ್ 28 ರಿಂದ ಮಳೆ ಹೆಚ್ಚಳ ಸೂಚನೆ | ರಾಜ್ಯಾದ್ಯಂತ ಗುಡುಗು ಸಹಿತ ಮಳೆಯ ಮುನ್ಸೂಚನೆ

ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…

1 day ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

2 days ago