ಸುಳ್ಯ: ವೈದ್ಯರಿಗೆ ಮತ್ತು ವೈದ್ಯಕೀಯ ಸಿಬ್ಬಂದಿಗಳಿಗೆ ಮತ್ತೆ ಕೊರೋನಾ ಪಾಸಿಟಿವ್ ಬಂದಿರುವ ಹಿನ್ನಲೆಯಲ್ಲಿ ಸುಳ್ಯ ಸರಕಾರಿ ತಾಲೂಕು ಆಸ್ಪತ್ರೆಯನ್ನು ಸಂಪೂರ್ಣ ಸೀಲ್ ಡೌನ್ ಮಾಡಲಾಗಿದೆ. 48 ಗಂಟೆಗಳ ಬಳಿಕ ಆಸ್ಪತ್ರೆಯನ್ನು ಸ್ಯಾನಿಟೈಸ್ ಮಾಡಿ ಬಳಿಕ ತೆರೆಯಲಾಗುವುದು ಎಂದು ತಾಲೂಕು ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಕೆ.ವಿ.ಕರುಣಾಕರ ತಿಳಿಸಿದ್ದಾರೆ.
ಸುಳ್ಯ ಸರಕಾರಿ ಆಸ್ಪತ್ರೆಯಿಂದ ಪರೀಕ್ಷೆಗೆ ಕಳುಹಿಸಿದ 32 ಮಾದರಿಯಲ್ಲಿ 6 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದೆ. ಒಬ್ಬರು ವೈದ್ಯರು, ಒಬ್ಬರು ನರ್ಸಿಂಗ್ ಸಿಬ್ಬಂದಿ, 3 ಡಯಾಲಿಸಿಸ್ ಸಿಬ್ಬಂದಿ ಮತ್ತು ಒಬ್ಬರು ರೋಗಿಗೆ ಕೋವಿಡ್ ಪಾಸಿಟಿವ್ ಬಂದಿದೆ.
ಕೆಲವು ದಿನಗಳ ಹಿಂದೆ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿದ್ದ ರೋಗಿಗೆ ಮತ್ತು ಈ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ನರ್ಸ್ ಓರ್ವರಿಗೆ ಕೊರೋನಾ ಪಾಸಿಟಿವ್ ಬಂದಿತ್ತು. ಈ ಹಿನ್ನಲೆಯಲ್ಲಿ ಆಸ್ಪತ್ರೆಯ ವೈದ್ಯರ ಮತ್ತು ಸಿಬ್ಬಂದಿಗಳ ಗಂಟಲ ದ್ರವ ಮಾದರಿ ಪರೀಕ್ಷೆಗೆ ಕಳುಹಿಸಲಾಗಿತ್ತು. ನರ್ಸ್ ಓರ್ವರಿಗೆ ಕೊರೋನಾ ಪಾಸಿಟಿವ್ ಬಂದ ಕಾರಣ ಆಸ್ಪತ್ರೆಯ ತೀವ್ರ ನಿಗಾ ಘಟಕ ಮತ್ತು ಡಯಾಲಿಸಿಸ್ ಘಟಕವನ್ನು ತಾತ್ಕಾಲಿಕವಾಗಿ ಮುಚ್ಚಲಾಗಿತ್ತು. ಇದೀಗ ಆಸ್ಪತ್ರೆಯ ವೈದ್ಯರಿಗೆ ಮತ್ತು ದಾದಿಯರಿಗೆ ಕೊರೋನಾ ಪಾಸಿಟಿವ್ ಬಂದಿರುವುದು ಆತಂಕಕ್ಕೆ ಕಾರಣವಾಗಿದೆ.
ಆಸ್ಪತ್ರೆಯನ್ನು ಸೀಲ್ ಡೌನ್ ಮಾಡಲಾಗಿದ್ದು ತುರ್ತು ಚಿಕಿತ್ಸಾ ವಿಭಾಗ ಸೇರಿ ಎಲ್ಲಾ ವಿಭಾಗವನ್ನೂ ಮುಚ್ಚಲಾಗುವುದು. ಒಳ ರೋಗಿಗಳ ಚಿಕಿತ್ಸೆ ಮಾತ್ರ ಎಂದಿನಂತೆ ನಡೆಯಲಿದೆ. ಅವರಿಗೆ ಚಿಕಿತ್ಸೆ ನೀಡಲು ಒಬ್ಬರು ವೈದ್ಯರು ಮತ್ತು ಕೆಲ ಮಂದಿ ನರ್ಸಿಂಗ್ ಸಿಬ್ಬಂದಿಗಳು ಕಾರ್ಯನಿರ್ವಹಿಸಲಿದ್ದಾರೆ. 48 ಗಂಟೆಗಳ ಬಳಿಕ ಸಂಪೂರ್ಣ ಸ್ಯಾನಿಟೈಸ್ ಮಾಡಿದ ಬಳಿಕ ಶನಿವಾರದಿಂದ ಆಸ್ಪತ್ರೆ ಮತ್ತೆ ತೆರೆದು ಕಾರ್ಯಾಚರಿಲಿದೆ ಎಂದು ಡಾ.ಕರುಣಾಕರ ತಿಳಿಸಿದ್ದಾರೆ.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…