Advertisement
ಸುದ್ದಿಗಳು

ಸುಳ್ಯಕ್ಕೊಂದು ಸಚಿವ ಸ್ಥಾನ : “ಶಾಸಕ ಎಸ್.ಅಂಗಾರ” ಇನ್ನು “ಸಚಿವ ಎಸ್.ಅಂಗಾರ”…?

Share

ಸುಳ್ಯ: ಕಳೆದ 26 ವರ್ಷಗಳಿಂದ ಸುಳ್ಯ ಶಾಸಕರಾಗಿ ಕೆಲಸ ಮಾಡುತ್ತಿದ್ದ  ಎಸ್.ಅಂಗಾರ ಅವರು ಇನ್ನು ಸಚಿವ ಎಸ್.ಅಂಗಾರ..? ಈ ದಿನಗಳು ಹತ್ತಿರ ಬಂದಿವೆ ಎಂದು ಮೂಲಗಳು ತಿಳಿಸಿವೆ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಕ್ಷೇತ್ರದಲ್ಲಿ ಸತತವಾಗಿ ಬಿಜೆಪಿ ಗೆದ್ದುಕೊಂಡಿತ್ತು. ದಕ್ಷಿಣ ಭಾರತದ ಬಿಜೆಪಿಯ ಹೆಬ್ಬಾಗಿಲು ಎಂದೂ ಎಲ್.ಕೆ.ಅಡ್ವಾಣಿ ಅವರಿಂದಲೂ ಹೇಳಿಸಿಕೊಂಡಿರುವ ಕ್ಷೇತ್ರ.  ಕಳೆದ ಬಾರಿ ಇಡೀ ಜಿಲ್ಲೆಯಲ್ಲಿ ಬಿಜೆಪಿ ಸೋತಿದ್ದರೂ ಸುಳ್ಯ ಕ್ಷೇತ್ರವನ್ನು ಬಿಜೆಪಿ ಉಳಿಸಿಕೊಂಡಿತ್ತು. ಹಾಗಿದ್ದರೂ ಸತತ 26 ವರ್ಷಗಳಿಂದ ಶಾಸಕರಾಗಿದ್ದ ಎಸ್.ಅಂಗಾರ ಅವರಿಗೆ ಇದುವರೆಗೆ ಸಚಿವ ಸ್ಥಾನ ಲಭ್ಯವಾಗಿರಲಿಲ್ಲ. ಪೂರ್ಣ ಪ್ರಮಾಣದಲ್ಲಿ ಬಿಜೆಪಿ ಸರಕಾರವೂ ಬಂದಿರಲಿಲ್ಲ. ಬಂದಿದ್ದರೂ ಅವಕಾಶ ಸಿಗಲಿಲ್ಲ. ಸಚಿವ ಸ್ಥಾನಕ್ಕಾಗಿ ವಿಧಾನಸಭೆಯ  ಹಿರಿಯ ಶಾಸಕ ಅಂಗಾರ ಅವರು ಎಂದೂ ಲಾಬಿಯನ್ನೂ ಮಾಡಿರಲಿಲ್ಲ. ಇದೀಗ ಮತ್ತೆ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸರಕಾರ ರಚನೆಯಾಗಿದೆ. ಇದುವರೆಗೆ ಸಚಿವ ಸಂಪುಟ ರಚನೆಯಾಗಿಲ್ಲ. ಇದೀಗ ಸಚಿವ ಸಂಪುಟ ಆ.17 ರ ನಂತರ ರಚನೆಯಾಗಲಿದ್ದು ಇದಕ್ಕಾಗಿ ಪಟ್ಟಿ ರಚನೆಯಾಗಿದೆ. ಇದರಲ್ಲಿ  ಎಸ್.ಅಂಗಾರ ಅವರ ಹೆಸರೂ ಸೇರ್ಪಡೆಯಾಗಿದೆ ಎಂದು ಮೂಲಗಳು ಖಚಿತಪಡಿಸಿವೆ.

ಅನಾಯಾಸವಾಗಿ ಈಗಲಾದರೂ ಸುಳ್ಯ ಕ್ಷೇತ್ರಕ್ಕೊಂದು ಸಚಿವ ಸ್ಥಾನ ಲಭಿಸಬೇಕು ಎಂಬುದು ಮತದಾರರ ಒತ್ತಾಸೆ. ಇದಕ್ಕಾಗಿ ಯಾವುದೇ ಲಾಬಿ, ಒತ್ತಾಯವೂ ಅನಗತ್ಯ. ಏಕೆಂದರೆ ಸುಳ್ಯದ ಎಲ್ಲಾ ಮತದಾರರಿಗೆ , ಕಾರ್ಯಕರ್ತರಿಗೆ ಬಿಜೆಪಿ ಸಹಜವಾಗಿಯೇ ಮಾನ-ಸಮ್ಮಾನ ನೀಡಲೇಬೇಕಾದ ಅನಿವಾರ್ಯತೆ ಇದೆ. ಹೀಗಾಗಿ 26 ವರ್ಷಗಳಿಂದ ಶಾಸಕರಾಗಿರುವ ಎಸ್.ಅಂಗಾರ ಅವರಿಗೆ ಸಚಿವ ಸ್ಥಾನ ಲಭ್ಯವಾಗಲಿದೆ ಎಂಬುದು ಮೂಲಗಳ ಸ್ಪಷ್ಟ ಅಭಿಪ್ರಾಯ.

ಇದರ ಜೊತೆಗೆ ಸುಳ್ಯದ ಬಿಜೆಪಿ ಪಕ್ಷದ ಜವಾಬ್ದಾರಿಯೂ ಹೆಚ್ಚಿದೆ. ಸುಳ್ಯದಲ್ಲಿ ಕಳೆದ ಅನೇಕ ವರ್ಷಗಳಿಂದ ಮೂಲಭೂತವಾದ ಹಲವಾರು ಬೇಡಿಕೆಗಳು ಇವೆ. ಇವೆಲ್ಲವೂ ಇನ್ನು ಹೆಚ್ಚು ಜೀವಪಡೆಯುವುದು, ಹೀಗಾಗಿ  ಅನುದಾನಗಳೂ ಹೆಚ್ಚು ಲಭ್ಯವಾಗುವಂತೆ ಮಾಡಬೇಕು ಎಂಬುದರ ಬಗ್ಗೆಯೂ ಸ್ಪಷ್ಟವಾದ ಸೂಚನೆ ನೀಡಲಾಗಿದೆ ಎಂದೂ ಮೂಲಗಳು ತಿಳಿಸಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

22 hours ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

23 hours ago

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!

ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…

2 days ago

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

2 days ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

2 days ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

2 days ago