ಸುಳ್ಯ: ತ್ರಿಖಂಡವಾದ ಭಾರತ ಮತ್ತೆ ಒಂದಾಗಬೇಕು ಎಂಬ ಸಂಕಲ್ಪದೊಂದಿಗೆ ವಿಶ್ವ ಹಿಂದೂ ಪರಿಷತ್, ಭಜರಂಗದಳ ಸುಳ್ಯ ಪ್ರಖಂಡ ಇದರ ಆಶ್ರಯದಲ್ಲಿ ಅಖಂಡ ಭಾರತ ಸಂಕಲ್ಪ ದಿನಾಚರಣೆ ಮತ್ತು ಪಂಜಿನ ಮೆರವಣಿಗೆ ಸುಳ್ಯದಲ್ಲಿ ನಡೆಯಿತು.
ಶಿವಕೃಪಾ ಕಲಾ ಮಂದಿರದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಗಣಪತಿ ಭಟ್ ಮಜಿಗುಂಡಿ ಅಧ್ಯಕ್ಷ ತೆ ವಹಿಸಿದ್ದರು. ನ್ಯಾಯವಾದಿ ಪ್ರಜ್ವಲ್ ಕುಮಾರ್ ದಿಕ್ಸೂಚಿ ಭಾಷಣ ಮಾಡಿದರು. ನಿವೃತ್ತ ಸೈನಿಕ ಎ.ವಿ.ಶಿವಲಿಂಗೇ ಗೌಡ ಮುಖ್ಯ ಅತಿಥಿಯಾಗಿದ್ದರು.
ಭಜರಂಗದಳ ತಾಲೂಕು ಸಂಚಾಲಕ ನಿಕೇಶ್ ಉಬರಡ್ಕ ಪ್ರತಿಜ್ಞೆ ಬೋಧಿಸಿದರು. ನಗರ ಸಂಚಾಲಕ ದೀಕ್ಷಿತ್ ಪಾನತ್ತಿಲ ವೇದಿಕೆಯಲ್ಲಿದ್ದರು. ನಗರ ಕಾರ್ಯದರ್ಶಿ ಪ್ರವೀಣ್ ಜಯನಗರ ಸ್ವಾಗತಿಸಿ, ತಿರ್ಥೇಶ್ ವಂದಿಸಿದರು. ಸುಮಿತ್ ವಂದೆ ಮಾತರಂ ಹಾಡಿದರು. ಗಿರೀಶ್ ಕುಂಠಿನಿ ಕಾರ್ಯಕ್ರಮ ನಿರೂಪಿಸಿದರು.
ಇದಕ್ಕೂ ಮುನ್ನ ನಗರದಲ್ಲಿ ಪಂಜಿನ ಮೆರವಣಿಗೆ ನಡೆಯಿತು. ಸುಳ್ಯ ಜ್ಯೋತಿ ವೃತ್ತದ ಬಳಿಯಿಂದ ಆರಂಭಗೊಂಡ ಪಂಜಿನ ಮೆರವಣಿಗೆ ಸುಳ್ಯ ನಗರದ ಮುಖ್ಯ ರಸ್ತೆಯಲ್ಲಿ ಸಾಗಿ ಗಾಂಧಿನಗರಕ್ಕೆ ತೆರಳಿ ಅಲ್ಲಿಂದ ಹಿಂತಿರುಗಿ ಖಾಸಗೀ ಬಸ್ ನಿಲ್ದಾಣದ ಬಳಿಯಲ್ಲಿರುವ ಶಿವಕೃಪಾ ಕಲಾ ಮಂದಿರದಲ್ಲಿ ಸಮಾಪನಗೊಂಡಿತು.
ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…
ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…
ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…
ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…
ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…
17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…