ಸುಳ್ಯ: ಶಾಸಕ ಅಂಗಾರ ಅವರಿಗೆ ಸಚಿವ ಸ್ಥಾನ ಲಭ್ಯವಾಗದ ಹಿನ್ನೆಲೆಯಲ್ಲಿ ಸುಳ್ಯ ಮಂಡಲ ಬಿಜೆಪಿ ವತಿಯಿಂದ ಚುನಾಯಿತರಾದ ಜನಪ್ರತಿನಿಧಿಗಳು ತೆಗೆದುಕೊಂಡಿರುವ ಅಸಹಕಾರ ಚಳವಳಿಯನ್ನು ಕೈಬಿಟ್ಟು ಕ್ಷೇತ್ರದ ತಮ್ಮ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ.
ಸತತ 6 ಬಾರಿ ಚುನಾಯಿತರಾಗಿರುವ ಸುಳ್ಯ ಕ್ಷೇತ್ರದ ಶಾಸಕ ಎಸ್ ಅಂಗಾರ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಕ್ಷೇತ್ರದ ಸಂಘಟನೆಯ ಹಾಗೂ ಜನಸಾಮಾನ್ಯರ ಬೇಡಿಕೆ ಯಾಗಿತ್ತು. ಆದರೆ ಲಭ್ಯವಾಗದ ಹಿನ್ನೆಲೆಯಲ್ಲಿ ಬಿಜೆಪಿಯು ಸುಳ್ಯದಲ್ಲಿ ಅಸಹಕಾರ ಚಳುವಳಿ ಘೋಷಣೆ ಮಾಡಿತ್ತು. ಬಗ್ಗೆ ಇದೀಗ ಮುಖ್ಯಮಂತ್ರಿಗಳ ಬಳಿಗೆ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಕ್ಷೇತ್ರದ ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಸುಳ್ಯದ ಭಾರತೀಯ ಜನತಾ ಪಾರ್ಟಿಯ ಪ್ರಮುಖರು ನಿಯೋಗ ಹೋಗುವುದೆಂದು ತೀರ್ಮಾನಿಸಲಾಗಿದ್ದಾರೆ. ಈ ಬಗ್ಗೆ ಸೆ.14 ರಂದು ನಿಯೋಗ ತೆರಳಲಿದೆ.
ಇದೀಗ ಬಿಜೆಪಿ ರಾಜ್ಯಾಧ್ಯಕ್ಷರು ಸೂಕ್ತ ಭರವಸೆಯನ್ನು ನೀಡಿರುವುದರಿಂದ, ಸುಳ್ಯ ಕ್ಷೇತ್ರದಲ್ಲಿ ಚುನಾಯಿತರಾದ ಬಿಜೆಪಿ ಜನಪ್ರತಿನಿಧಿಗಳು ತೆಗೆದುಕೊಂಡಿರುವ ಅಸಹಕಾರ ಚಳವಳಿಯನ್ನು ಕೈಬಿಟ್ಟು ಕ್ಷೇತ್ರದಲ್ಲಿ ತಮ್ಮ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕೆಂದು ಮಂಡಲ ಸಮಿತಿಯಿಂದ ತೀರ್ಮಾನಿಸಲಾಗಿರುತ್ತದೆ ಎಂದು ಮಂಡಲ ಬಿಜೆಪಿಯು ಜನಪ್ರತಿನಿಧಿಗಳಿಗೆ ತಿಳಿಸಿದೆ ಎಂದು ತಿಳಿದುಬಂದಿದೆ.
ಕೇಂದ್ರ ಸರ್ಕಾರದ ಈ ಬಾರಿ ಬಜೆಟ್ ಮೇಲೆ ರೈತಾಪಿ ವರ್ಗ ಬಹಳ ನಿರೀಕ್ಷೆ…
ಸಾರಡ್ಕದಲ್ಲಿ ನಡೆದ ಕೃಷಿಹಬ್ಬದ ಬಗ್ಗೆ ಸಾವಯವ ಕೃಷಿಕ ಎ ಪಿ ಸದಾಶಿವ ಅವರ…
ಕಳೆದ ಒಂದು ವಾರದಲ್ಲಿ ಚಾರ್ಮಾಡಿ ಘಾಟ್‌ನಲ್ಲಿ ಉಂಟಾದ ಎರಡನೇ ಕಾಡ್ಗಿಚ್ಚು ಪ್ರಕರಣ ಇದಾಗಿದೆ.…
ಅಡಿಕೆ ಆಮದು ವ್ಯವಹಾರದಲ್ಲಿ ತಪ್ಪು ಮಾಹಿತಿ ನೀಡಿ ವಿದೇಶದಿಂದ ಕಳ್ಳಸಾಗಾಣಿಕೆ ಮಾಡುತ್ತಿದ್ದ ಪ್ರಕರಣದಲ್ಲಿ ತೂತುಕುಡಿಯ…
ಸಾರಡ್ಕದ ಆರಾಧನಾ ಕಲಾಭವನದಲ್ಲಿ ಜ.26 ರಂದು ಕೃಷಿ ಹಬ್ಬ ನಡೆಯಲಿದೆ.ಬೆಳಗ್ಗೆ ಉದ್ಘಾಟನೆಗೊಳ್ಳುವ ಕೃಷಿ…
ಆಮದು ಸುಂಕವನ್ನು ತಪ್ಪಿಸಲು ಹುರಿದ ಅಡಿಕೆಯನ್ನು ಆಮದು ಮಾಡಿಕೊಳ್ಳಲಾಗುತ್ತಿದೆ. ಹುರಿದ ಅಡಿಕೆಯ ಆಮದು…