ಸುಳ್ಯ: ಜನಸಾಮಾನ್ಯರ ಸಮಸ್ಯೆ ಪರಿಹಾರಕ್ಕೆ ಮತ್ತು ಬಡವರ ಬದುಕಿಗ ಶಕ್ತಿ ತುಂಬಲು ರಾಜ್ಯ ಸರ್ಕಾರ ಮೊದಲ ಆದ್ಯತೆಯನ್ನು ನೀಡುತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಸುಳ್ಯದಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿ, ಫಲಾನುಭವಿಗಳಿಗೆ ವಿವಿಧ ಸರ್ಕಾರಿ ಸೌಲಭ್ಯಗಳನ್ನು ವಿತರಿಸಿ ಮಾತನಾಡಿದರು. ಸರ್ಕಾರದ ಯೋಜನೆಗಳು ಅರ್ಹರಾದ ಫಲಾನುಭವಿಗಳಿಗೆ ಪಾರದರ್ಶಕವಾಗಿ ತಲುಪಿಸುವುದು ಸರ್ಕಾರದ ಉದ್ದೇಶ. ಸ್ಥಳೀಯ ಸಂಸ್ಥೆಗಳ ಮೂಲಕ ಆಯುಷ್ಮಾನ್ ಕಾರ್ಡ್ ವಿತರಣೆಗೆ ಸರ್ಕಾರ ಯೋಚನೆ ನಡೆಸಿದೆ ಎಂದ ಅವರು ಇಂದಿರಾ ಕ್ಯಾಂಟೀನ್ ಮೂಲಕ ಜನರಿಗೆ ಉತ್ತಮ ಗುಣಮಟ್ಟದ ಊಟ ಮತ್ತು ಉಪಾಹಾರ ನೀಡುವಂತಾಗಬೇಕು. ಆಹಾರದ ಗುಣಮಟ್ಟದ ಖಾತ್ರಿಗೆ ಜನಪ್ರತಿನಿಧಿಗಳು ಹಾಗು ಅಧಿಕಾರಿಗಳು ಗಮನ ಹರಿಸಬೇಕು ಎಂದು ಅವರು ಹೇಳಿದರು. ಭೌಗೋಳಿಕವಾಗಿ ಭಿನ್ನವಾಗಿರುವುದರಿಂದ ಸುಳ್ಯ ತಾಲೂಕಿನಲ್ಲಿ ಹಲವಾರು ಮೂಲಭೂತ ಸಮಸ್ಯೆಗಳು ಇದೆ. ಈ ಸಮಸ್ಯೆಗಳ ಪರಿಹಾರಕ್ಕೆ ಎಲ್ಲಾ ಸಹಕಾರ ನೀಡುವುದಾಗಿ ಅವರು ಹೇಳಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಎಸ್.ಅಂಗಾರ ಪಶ್ಚಿಮ ವಾಹಿನಿ ಯೋಜನೆಯಲ್ಲಿ ಸುಳ್ಯ ತಾಲೂಕಿಗೆ 12 ಕಡೆ ಡ್ಯಾಂಗಳ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು. ಕ್ಷೇತ್ರಕ್ಕೆ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳು ಮಂಜೂರಾಗಿ ಅಭಿವೃದ್ಧಿ ನಡೆಸುವ ಸಂದರ್ಭದಲ್ಲಿ ಜನರ ಸಹಕಾರ ಅತೀ ಅಗತ್ಯವಾಗಿ ಬೇಕಾಗಿದೆ ಎಂದು ಅವರು ಹೇಳಿದರು.
ಪುತ್ತೂರು ಸಹಾಯಕ ಕಮೀಷನರ್ ಡಾ.ಯತೀಶ್ ಉಳ್ಳಾಳ್, ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ, ಉಪಾಧ್ಯಕ್ಷೆ ಶುಭದಾ ಎಸ್.ರೈ, ಜಿಲ್ಲಾ ಪಂಚಾಯತ್ ಸದಸ್ಯರಾದ ಎಸ್.ಎನ್.ಮನ್ಮಥ, ಆಶಾ ತಿಮ್ಮಪ್ಪ, ಪುಷ್ಪಾವತಿ ಬಾಳಿಲ, ತಾ.ಪಂ.ಸ್ಥಾಯಿ ಸಮಿತಿ ಅಧ್ಯಕ್ಷೆ ಜಾಹ್ನವಿ ಕಾಂಚೋಡು, ಸದಸ್ಯೆ ಪುಷ್ಪಾ ಮೇದಪ್ಪ, ನಗರ ಪಂಚಾಯಿತಿ ಸದಸ್ಯರಾದ ಎಂ.ವೆಂಕಪ್ಪ ಗೌಡ, ವಿನಯಕುಮಾರ್ ಕಂದಡ್ಕ, ಶಶಿಕಲಾ, ಬಾಲಕೃಷ್ಣ ಭಟ್, ಬಾಲಕೃಷ್ಣ ರೈ, ಕೆ.ಎಸ್.ಉಮ್ಮರ್, ಶರೀಫ್ ಕಂಠಿ, ಶಿಲ್ಪಾ ಸುದೇವ್, ಬುದ್ಧ ನಾಯ್ಕ್, ವಾಣಿಶ್ರೀ, ಸುಶೀಲ ಜಿನ್ನಪ್ಪ, ಪ್ರವಿತಾ ಪ್ರಶಾಂತ್, ಸರೋಜಿನಿ ಪೆಲ್ತಡ್ಕ, ಶೀಲಾ ಅರುಣ ಕುರುಂಜಿ, ಪೂಜಿತ ಕೆ.ಯು, ತಾಲೂಕು ಪಂಚಾಯಿತಿ ಕಾರ್ಯರ್ನಿಹಣಾಧಿಕಾರಿ ಎನ್.ಭವಾನಿಶಂಕರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸುಳ್ಯ ತಹಶೀಲ್ದಾರ್ ಎನ್.ಎ.ಕುಂಞ ಅಹಮ್ಮದ್ ಸ್ವಾಗತಿಸಿ ನಗರ ಪಂಚಾಯಿತಿ ಮುಖ್ಯಾಧಿಕಾರಿ ಎನ್.ಮತ್ತಡಿ ವಂದಿಸಿದರು. ದೇವರಾಜ್ ಮುತ್ಲಾಜೆ ಕಾರ್ಯಕ್ರಮ ನಿರೂಪಿಸಿದರು.