ಸುಳ್ಯದಲ್ಲಿ ಕರ್ನಾಟಕ ರಾಜ್ಯೋತ್ಸವ: ಭಾಷೆಯ ಪ್ರಾಮುಖ್ಯತೆ ಅರ್ಥ ಮಾಡಿಕೊಳ್ಳಿ- ಶಾಸಕ ಅಂಗಾರ

November 1, 2019
9:37 PM

ಸುಳ್ಯ: ಭಾಷೆ ಉಳಿದರೆ ಮಾತ್ರ ಸಂಸ್ಕೃತಿ, ಜನಾಂಗ ಉಳಿಯುತ್ತದೆ. ಆದುದರಿಂದ ಭಾಷೆಯ ಮಹತ್ವವನ್ನು ಪ್ರತಿಯೊಬ್ಬರೂ ಅರ್ಥ ಮಾಡಿಕೊಳ್ಳಬೇಕು. ಭಾಷೆಯನ್ನು ಹೃದಯದಲ್ಲಿರಿಸಿ ಭಾವನಾತ್ಮಕವಾಗಿ ಬೆಳೆಸಬೇಕು ಮತ್ತು ಭಾಷೆಯ ಜೊತೆ ನಾವೂ ಬೆಳೆಯಬೇಕು ಎಂದು ಶಾಸಕ ಎಸ್.ಅಂಗಾರ ಹೇಳಿದ್ದಾರೆ. ಸುಳ್ಯ ತಾಲೂಕು ರಾಷ್ಟ್ರೀಯ ಹಬ್ಬಗಳ ದಿನಾಚರಣಾ ಸಮಿತಿಯ ವತಿಯಿಂದ ನಡೆದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

Advertisement
Advertisement

ತಹಶೀಲ್ದಾರ್ ಎನ್.ಎ.ಕುಂಞ ಅಹಮ್ಮದ್ ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿ ಸಂದೇಶ ನೀಡಿದರು. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ, ಎಪಿಎಂಸಿ ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ, ತಾ.ಪಂ.ಸದಸ್ಯ ಅಶೋಕ್ ನೆಕ್ರಾಜೆ, ನಗರ ಪಂಚಾಯಿತಿ ಸದಸ್ಯರಾದ ಎಂ.ವೆಂಕಪ್ಪ ಗೌಡ, ಬಾಲಕೃಷ್ಣ ಭಟ್, ಡೇವಿಡ್ ಧೀರಾ ಕ್ರಾಸ್ತಾ, ಪೊಲೀಸ್ ವೃತ್ತ ನಿರೀಕ್ಷಕ ಆರ್.ಸತೀಶ್‍ಕುಮಾರ್, ಉಪನಿರೀಕ್ಷಕ ಎಂ.ಆರ್.ಹರೀಶ್, ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಎನ್.ಭವಾನಿಶಂಕರ, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ.ಮಹಾದೇವ, ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಮೋಹನ್ ಗೌಡ, ಗೃಹರಕ್ಷಕ ದಳದ ಕಮಾಂಡೆಂಟ್, ಜಯಂತ ಶೆಟ್ಟಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಶ್ಮಿ, ನಗರ ಪಂಚಾಯಿತಿ ಮುಖ್ಯಾಧಿಕಾರಿ ಮತ್ತಡಿ ಮತ್ತಿತರರು ಉಪಸ್ಥಿತರಿದ್ದರು.

ನಗರದಲ್ಲಿ ಸಂಚಾರಿ ನಿಯಂತ್ರಣದಲ್ಲಿ ಕಾರ್ಯದಲ್ಲಿ ಸೇವೆ ಸಲ್ಲಿಸುತ್ತಿರುವ ಗೃಹ ರಕ್ಷಕ ದಳದ ಪುಷ್ಪಾವತಿ, ರಂಗ ನಿರ್ದೇಶಕ ಜೀವನ್ ರಾಂ ಅವರನ್ನು ಸನ್ಮಾನಿಸಲಾಯಿತು. ಕನ್ನಡ ಭಾಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಪುಸ್ಕರಿಸಲಾಯಿತು. ಅಚ್ಚುತ ಅಟ್ಲೂರು ಕಾರ್ಯಕ್ರಮ ನಿರೂಪಿಸಿದರು.

Advertisement
Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯಾದ್ಯಂತ ಭಾರೀ ಮಳೆ  ಹಿನ್ನೆಲೆ | ಜಿಲ್ಲಾ ಸಚಿವರು,ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಆದೇಶ
May 29, 2025
7:40 AM
by: The Rural Mirror ಸುದ್ದಿಜಾಲ
ಭಾರತ್ ಮುನ್ಸೂಚನಾ ವ್ಯವಸ್ಥೆ | ಭಾರತದಿಂದ ವಿಶ್ವದ ಅತ್ಯಂತ ನಿಖರವಾದ ಹವಾಮಾನ ಮಾದರಿಗೆ ಚಾಲನೆ | ಸಣ್ಣ ಪ್ರಮಾಣದ ಹವಾಮಾನ ಸ್ಥಿತಿಗತಿಗಳ ನಿಖರವಾದ ಮಾಹಿತಿ ಲಭ್ಯ|
May 29, 2025
7:37 AM
by: ದ ರೂರಲ್ ಮಿರರ್.ಕಾಂ
ಇಂದು ದೇಶಾದ್ಯಂತ ವಿಕಸಿತ ಕೃಷಿ ಸಂಕಲ್ಪ ಅಭಿಯಾನ
May 29, 2025
7:22 AM
by: The Rural Mirror ಸುದ್ದಿಜಾಲ
14 ಮುಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿ
May 29, 2025
7:12 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group