ಸುಳ್ಯ: ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ, ವಿಶೇಷ ಉಪನ್ಯಾಸ ಮತ್ತು ಸನ್ಮಾನ ಕಾರ್ಯಕ್ರಮ ಜುಲೈ 23 ರಂದು ಪೂ.10 ಗಂಟೆಗೆ ಸುಳ್ಯ ಅಂಬೇಡ್ಕರ್ ಕನ್ನಡ ಭವನದಲ್ಲಿ ನಡೆಯಿಲಿದೆ.
ಶಾಸಕ ಎಸ್.ಅಂಗಾರ ಕಾರ್ಯಕ್ರಮವನ್ನು ಉದ್ಘಾಟಿಸುವರು. ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮುರಳೀಧರ ಅಡ್ಡನಪಾರೆ ಅಧ್ಯಕ್ಷತೆ ವಹಿಸುವರು.
ಉಪನ್ಯಾಸ:
ಪತ್ರಿಕಾ ದಿನಾಚರಣೆಯ ಪ್ರಯುಕ್ತ ವಿಶೇಷಚಉಪನ್ಯಾಸ ಕಾರ್ಯಕ್ರಮ ನಡೆಯಲಿದೆ.
‘ಮಾಧ್ಯಮಗಳು ಮತ್ತು ಪ್ರಚಲಿತ ವಿದ್ಯಮಾನ‘ ಎಂಬ ವಿಚಾರದಲ್ಲಿ ಹೊಸದಿಗಂತ ಪತ್ರಿಕೆಯ ಮಂಗಳೂರು ಆವೃತ್ತಿಯ ಸ್ಥಾನೀಯ ಸಂಪಾದಕ ಪ್ರಕಾಶ್ ಇಳಂತಿಲ ಉಪನ್ಯಾಸ ನೀಡುವರು.
‘ಮಾದಕ ವಸ್ತುಗಳ ತಡೆ ಜಾಗೃತಿ‘ ಕುರಿತು ಸುಳ್ಯ ತಹಶೀಲ್ದಾರ್ ಎನ್.ಎ.ಕುಂಞಿಅಹಮ್ಮದ್ ಉಪನ್ಯಾಸ ನೀಡಲಿದ್ದಾರೆ.
ಸನ್ಮಾನ:
ಎರಡೂವರೆ ದಶಕಗಳ ಕಾಲ ಪತ್ರಕರ್ತರಾಗಿ ದುಡಿದ ಪಯಸ್ವಿನಿ ಪತ್ರಿಕೆಯ ಮಾಜಿ ಸಂಪಾದಕ ಚಂದ್ರೇಶ್ ಗೋರಡ್ಕ ಅವರನ್ನು ಸಮಾರಂಭದಲ್ಲಿ ಸನ್ಮಾನಿಸಲಾಗುವುದು.
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಪಿ.ಸಿ.ಜಯರಾಮ ಸನ್ಮಾನ ನೆರವೇರಿಸುವರು.
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಹರಪ್ರಸಾದ್ ತುದಿಯಡ್ಕ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಗಿರೀಶ್ ಅಡ್ಪಂಗಾಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…