Advertisement
ಸುದ್ದಿಗಳು

ಸುಳ್ಯದಲ್ಲಿ ಪದವಿಪೂರ್ವ ವಿಭಾಗದ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟ

Share

ಸುಳ್ಯ: ಪದವಿಪೂರ್ವ ಶಿಕ್ಷಣ ಇಲಾಖೆ ಮಂಗಳೂರು ಮತ್ತು ನೆಹರೂ ಸ್ಮಾರಕ ಪದವಿಪೂರ್ವ ಕಾಲೇಜು ಸುಳ್ಯ ಇದರ ಸಂಯುಕ್ತ ಆಶ್ರಯದಲ್ಲಿ ಪದವಿಪೂರ್ವ ಕಾಲೇಜಿನ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟ ನೆಹರೂ ಸ್ಮಾರಕ ಕಾಲೇಜಿನಲ್ಲಿ ಗುರುವಾರ ನಡೆಯಿತು. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಪಂದ್ಯಾಟವನ್ನು ಉದ್ಘಾಟಿಸಿದರು. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ತಮ್ಮ ಕ್ರೀಡಾ ಸಾಮರ್ಥ್ಯದ ಮೂಲಕ ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳಬೇಕು ಎಂದು ಅವರು ಹೇಳಿದರು.

ಮುಖ್ಯ ಅತಿಥಿ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಮಾತನಾಡಿ ಶಾಲಾ ಕಾಲೇಜಿನ ಕ್ರೀಡಾಕೂಟಗಳು ವಿದ್ಯಾರ್ಥಿಗಳ ಪ್ರತಿಭೆಯನ್ನು ತೋರ್ಪಡಿಸಲು ಇರುವ ವೇದಿಕೆ‌. ಕ್ರೀಡಾ ಸ್ಫೂರ್ತಿಯೊಂದಿಗೆ ಆಡಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿಂಚಬೇಕು ಎಂದು ಕರೆ ನೀಡಿದರು.

ನೆಹರೂ ಸ್ಮಾರಕ ಮಹಾ ವಿದ್ಯಾಲಯದ ಶೈಕ್ಷಣಿಕ ಸಲಹೆಗಾರ ಪ್ರೊ.ಎಂ.ಬಾಲಚಂದ್ರ ಗೌಡ ಅಧ್ಯಕ್ಷತೆ ವಹಿಸಿದ್ದರು. ಪದವಿಪೂರ್ವ ಶಿಕ್ಷಣ ಇಲಾಖೆಯ ಜಿಲ್ಲಾ ಕ್ರೀಡಾ ಸಂಯೋಜಕ ಪ್ರೆಮನಾಥ ಶೆಟ್ಟಿ ಮುಖ್ಯ ಅತಿಥಿಯಾಗಿದ್ದರು. ನೆಹರೂ ಸ್ಮಾರಕ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಹರಿಣಿ ಪುತ್ತೂರಾಯ ಸ್ವಾಗತಿಸಿ, ದೈಹಿಕ ಶಿಕ್ಷಣ ನಿರ್ದೇಶಕ ನಾಗರಾಜ್ ವಂದಿಸಿದರು. ಪಿ.ಬಿ.ಬೇಬಿವಿದ್ಯಾ ಮತ್ತು ಹರೀಶ್ ಕಾರ್ಯಕ್ರಮ ನಿರೂಪಿಸಿದರು.
ಪದವಿಪೂರ್ವ ವಿಭಾಗದ ಬಾಲಕರ ಮತ್ತು ಬಾಲಕಿಯರ ವಿಭಾಗದಲ್ಲಿ ತಲಾ ಆರು ತಂಡಗಳು ಪಂದ್ಯಾಟದಲ್ಲಿ ಭಾಗವಹಿಸಿದವು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…

8 hours ago

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

24 hours ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

2 days ago

ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ

ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…

2 days ago