ಸುಳ್ಯದಲ್ಲಿ ಪದವಿಪೂರ್ವ ವಿಭಾಗದ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟ : ವಿಕಾಸ್ ಕಾಲೇಜು ಮಂಗಳೂರು, ಆಳ್ವಾಸ್ ಮೂಡಬಿದ್ರೆ ಮೂಡಬಿದ್ರೆ ಚಾಂಪಿಯನ್

September 19, 2019
9:06 PM

ಸುಳ್ಯ: ಪದವಿಪೂರ್ವ ಶಿಕ್ಷಣ ಇಲಾಖೆ ಮಂಗಳೂರು ಮತ್ತು ನೆಹರೂ ಸ್ಮಾರಕ ಪದವಿಪೂರ್ವ ಕಾಲೇಜು ಸುಳ್ಯ ಇದರ ಸಂಯುಕ್ತ ಆಶ್ರಯದಲ್ಲಿ ನೆಹರೂ ಸ್ಮಾರಕ ಕಾಲೇಜಿನಲ್ಲಿ ಗುರುವಾರ ನಡೆದ ಪದವಿಪೂರ್ವ ಕಾಲೇಜು ವಿಭಾಗದ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಬಾಲಕರ ವಿಭಾಗದಲ್ಲಿ ಮಂಗಳೂರು ನಗರವನ್ನು ಪ್ರತಿನಿಧಿಸಿದ ವಿಕಾಸ್ ಕಾಲೇಜು ಮಂಗಳೂರು ಮತ್ತು ಬಾಲಕಿಯರ ವಿಭಾಗದಲ್ಲಿ ಮಂಗಳೂರು ಗ್ರಾಮಾಂತರನ್ನು ಪ್ರತಿನಿಧಿಸಿದ ಮೂಡಬಿದ್ರೆಯ ಆಳ್ವಾಸ್ ಕಾಲೇಜು ಚಾಂಪಿಯನ್ ಆಗಿ ಹೊರ ಹೊಮ್ಮಿತು.

Advertisement
Advertisement
Advertisement

ಬಾಲಕರ ವಿಭಾಗದಲ್ಲಿ ಪುತ್ತೂರು ತಾಲೂಕನ್ನು ಪ್ರತಿನಿಧಿಸಿದ ಉಪ್ಪಿನಂಗಡಿ ಸರ್ಕಾರಿ ಪದವಿಪೂರ್ವ ಕಾಲೇಜು ದ್ವಿತೀಯ ಸ್ಥಾನ, ಬಂಟ್ವಾಳ ತಾಲೂಕಿನ ಕಾರ್ಮೆಲ್ ಪದವಿಪೂರ್ವ ಕಾಲೇಜು ತೃತೀಯ ಮತ್ತು ಮಂಗಳೂರು ಗ್ರಾಮಾಂತರವನ್ನು ಪ್ರತಿನಿಧಿಸಿದ ಆಳ್ವಾಸ್ ಕಾಲೇಜು ಮೂಡಬಿದ್ರೆ ಚತುರ್ಥ ಸ್ಥಾನ ಪಡೆಯಿತು. ಬಾಲಕಿಯರ ವಿಭಾಗದಲ್ಲಿ ಬೆಳ್ತಂಗಡಿ ತಾಲೂಕಿನ ಉಜಿರೆ ಎಸ್‍ಡಿಎಂ ಕಾಲೇಜು ದ್ವಿತೀಯ ಸ್ಥಾನ, ಮಂಗಳೂರು ನಗರದ ವಿಕಾಸ್ ಕಾಲೇಜು ತೃತೀಯ ಮತ್ತು ಸುಳ್ಯ ನೆಹರೂ ಸ್ಮಾರಕ ಪದವಿಪೂರ್ವ ಕಾಲೇಜು ಚತುರ್ಥ ಸ್ಥಾನ ಪಡೆದುಕೊಂಡಿತು.

Advertisement


ನೆಹರೂ ಸ್ಮಾರಕ ಮಹಾ ವಿದ್ಯಾಲಯದ ಶೈಕ್ಷಣಿಕ ಸಲಹೆಗಾರ ಪ್ರೊ.ಎಂ.ಬಾಲಚಂದ್ರ ಗೌಡ ವಿಜೇತರಿಗೆ ಬಹುಮಾನ ವಿತರಿಸಿದದರು. ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ಕೆ.ಗಿರಿಧರ ಗೌಡ, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಹರಿಣಿ ಪುತ್ತೂರಾಯ, ದೈಹಿಕ ಶಿಕ್ಷಣ ನಿರ್ದೇಶಕ ನಾಗರಾಜ್ ಪದವಿಪೂರ್ವ ಶಿಕ್ಷಣ ಇಲಾಖೆಯ ಜಿಲ್ಲಾ ಕ್ರೀಡಾ ಸಂಯೋಜಕ ಪ್ರೆಮನಾಥ ಶೆಟ್ಟಿ ಉಪಸ್ಥಿತರಿದ್ದರು.

ಕಾಲೇಜಿನ ವಿದ್ಯಾರ್ಥಿ ಕ್ಷೇಮಾಧಿಕಾರಿ ಲಕ್ಷ್ಮಣ್ ಏನೆಕಲ್ಲು ಸ್ವಾಗತಿಸಿ, ಉಪನ್ಯಾಸಕ ಹರೀಶ್ ವಂದಿಸಿದರು. ಉಪನ್ಯಾಸಕಿ ಪಿ.ಬಿ.ಬೇಬಿವಿದ್ಯಾ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಮಳೆ
April 18, 2024
10:09 PM
by: ದ ರೂರಲ್ ಮಿರರ್.ಕಾಂ
ಆದರ್ಶ ಜೀವನ ಮತ್ತು ಪರಿಸರ ಸ್ನೇಹಿ ನೀತಿ ತಿಳಿಸುವ ಮಂಗಟ್ಟೆ ಹಕ್ಕಿಗಳು…
April 18, 2024
4:46 PM
by: The Rural Mirror ಸುದ್ದಿಜಾಲ
ಮರುಭೂಮಿ ನಾಡು ದುಬೈನಲ್ಲಿ 75 ವರ್ಷಗಳಲ್ಲೇ ದಾಖಲೆ ಮಳೆ…! | ಪ್ರವಾಹಕ್ಕೆ UAE ತತ್ತರ |
April 18, 2024
3:49 PM
by: The Rural Mirror ಸುದ್ದಿಜಾಲ
ಎಚ್ಚರ….. ತಾಯಂದಿರೇ ನಿಮ್ಮ ಮಕ್ಕಳಿಗೆ ಸೆರೆಲಾಕ್ ತಿನ್ನಿಸುತ್ತೀರಾ..? | ಬಯಲಾಯ್ತು ಶಾಕಿಂಗ್ ನ್ಯೂಸ್…! | ವರದಿ ಬಹಿರಂಗದ ಬಳಿಕ ನೆಸ್ಲೆ ಪ್ರತಿಕ್ರಿಯೆ ಏನು..?
April 18, 2024
3:21 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror