ಸುಳ್ಯ: ಪದವಿಪೂರ್ವ ಶಿಕ್ಷಣ ಇಲಾಖೆ ಮಂಗಳೂರು ಮತ್ತು ನೆಹರೂ ಸ್ಮಾರಕ ಪದವಿಪೂರ್ವ ಕಾಲೇಜು ಸುಳ್ಯ ಇದರ ಸಂಯುಕ್ತ ಆಶ್ರಯದಲ್ಲಿ ನೆಹರೂ ಸ್ಮಾರಕ ಕಾಲೇಜಿನಲ್ಲಿ ಗುರುವಾರ ನಡೆದ ಪದವಿಪೂರ್ವ ಕಾಲೇಜು ವಿಭಾಗದ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಬಾಲಕರ ವಿಭಾಗದಲ್ಲಿ ಮಂಗಳೂರು ನಗರವನ್ನು ಪ್ರತಿನಿಧಿಸಿದ ವಿಕಾಸ್ ಕಾಲೇಜು ಮಂಗಳೂರು ಮತ್ತು ಬಾಲಕಿಯರ ವಿಭಾಗದಲ್ಲಿ ಮಂಗಳೂರು ಗ್ರಾಮಾಂತರನ್ನು ಪ್ರತಿನಿಧಿಸಿದ ಮೂಡಬಿದ್ರೆಯ ಆಳ್ವಾಸ್ ಕಾಲೇಜು ಚಾಂಪಿಯನ್ ಆಗಿ ಹೊರ ಹೊಮ್ಮಿತು.
ಬಾಲಕರ ವಿಭಾಗದಲ್ಲಿ ಪುತ್ತೂರು ತಾಲೂಕನ್ನು ಪ್ರತಿನಿಧಿಸಿದ ಉಪ್ಪಿನಂಗಡಿ ಸರ್ಕಾರಿ ಪದವಿಪೂರ್ವ ಕಾಲೇಜು ದ್ವಿತೀಯ ಸ್ಥಾನ, ಬಂಟ್ವಾಳ ತಾಲೂಕಿನ ಕಾರ್ಮೆಲ್ ಪದವಿಪೂರ್ವ ಕಾಲೇಜು ತೃತೀಯ ಮತ್ತು ಮಂಗಳೂರು ಗ್ರಾಮಾಂತರವನ್ನು ಪ್ರತಿನಿಧಿಸಿದ ಆಳ್ವಾಸ್ ಕಾಲೇಜು ಮೂಡಬಿದ್ರೆ ಚತುರ್ಥ ಸ್ಥಾನ ಪಡೆಯಿತು. ಬಾಲಕಿಯರ ವಿಭಾಗದಲ್ಲಿ ಬೆಳ್ತಂಗಡಿ ತಾಲೂಕಿನ ಉಜಿರೆ ಎಸ್‍ಡಿಎಂ ಕಾಲೇಜು ದ್ವಿತೀಯ ಸ್ಥಾನ, ಮಂಗಳೂರು ನಗರದ ವಿಕಾಸ್ ಕಾಲೇಜು ತೃತೀಯ ಮತ್ತು ಸುಳ್ಯ ನೆಹರೂ ಸ್ಮಾರಕ ಪದವಿಪೂರ್ವ ಕಾಲೇಜು ಚತುರ್ಥ ಸ್ಥಾನ ಪಡೆದುಕೊಂಡಿತು.
ನೆಹರೂ ಸ್ಮಾರಕ ಮಹಾ ವಿದ್ಯಾಲಯದ ಶೈಕ್ಷಣಿಕ ಸಲಹೆಗಾರ ಪ್ರೊ.ಎಂ.ಬಾಲಚಂದ್ರ ಗೌಡ ವಿಜೇತರಿಗೆ ಬಹುಮಾನ ವಿತರಿಸಿದದರು. ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ಕೆ.ಗಿರಿಧರ ಗೌಡ, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಹರಿಣಿ ಪುತ್ತೂರಾಯ, ದೈಹಿಕ ಶಿಕ್ಷಣ ನಿರ್ದೇಶಕ ನಾಗರಾಜ್ ಪದವಿಪೂರ್ವ ಶಿಕ್ಷಣ ಇಲಾಖೆಯ ಜಿಲ್ಲಾ ಕ್ರೀಡಾ ಸಂಯೋಜಕ ಪ್ರೆಮನಾಥ ಶೆಟ್ಟಿ ಉಪಸ್ಥಿತರಿದ್ದರು.
ಕಾಲೇಜಿನ ವಿದ್ಯಾರ್ಥಿ ಕ್ಷೇಮಾಧಿಕಾರಿ ಲಕ್ಷ್ಮಣ್ ಏನೆಕಲ್ಲು ಸ್ವಾಗತಿಸಿ, ಉಪನ್ಯಾಸಕ ಹರೀಶ್ ವಂದಿಸಿದರು. ಉಪನ್ಯಾಸಕಿ ಪಿ.ಬಿ.ಬೇಬಿವಿದ್ಯಾ ಕಾರ್ಯಕ್ರಮ ನಿರೂಪಿಸಿದರು.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…