ಸುಳ್ಯದಲ್ಲಿ ಪ್ಲಾಸ್ಟಿಕ್ ನಿರ್ಮೂಲನಾ ಜಾಗೃತಿ ಜಾಥಾ

August 14, 2019
12:07 PM

ಸುಳ್ಯ: ಸ್ವಚ್ಛ ಸುಳ್ಯ ತಂಡ ಮತ್ತು ಹೈ ಟೊರ್ಕ್ ಮೊಟೊ ಕ್ರೆವ್ ಗ್ರೂಪ್ ಸಹಭಾಗಿತ್ವದಲ್ಲಿ ನಗರದ ಪ್ಲಾಸ್ಟಿಕ್ ತ್ಯಾಜ್ಯವನ್ನು ಶೋಧಿಸಿ ವಿಲೇವಾರಿ ಮಾಡುವ ವಿಭಿನ್ನ‌ ರೀತಿಯ ಪ್ಲಾಸ್ಟಿಕ್ ನಿರ್ಮೂಲನಾ ಜಾಥಾ ಸುಳ್ಯ ನಗರದಲ್ಲಿ ನಡೆಯಿತು.

Advertisement
Advertisement
Advertisement

ಚೆನ್ನಕೇಶವ ದೇವಾಲಯದ ಆವರಣದಿಂದ ಆರಂಭಗೊಂಡ ದ್ವಿಚಕ್ರ ವಾಹನ ಜಾಥಾಕ್ಕೆ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಚಾಲನೆ ನೀಡಿದರು. ಸುಮಾರು 50 ಕ್ಕಿಂತ ಹೆಚ್ಚಿನ ಬೈಕ್ ಸವಾರರು ಸುಳ್ಯ ನಗರದ ಎಲ್ಲಾ ಮುಖ್ಯ ರಸ್ತೆಗಳಲ್ಲಿ ಸಂಚರಿಸಿ ದಾರಿಯುದ್ದಕ್ಕೂ ಬಿದ್ದಿದ್ದ ಪ್ಲಾಸ್ಟಿಕ್ ಗಳನ್ನು ಹೆಕ್ಕಿ ತಂದು ವಿಲೇವಾರಿ ಮಾಡುವ ಮೂಲಕ ಜನರಲ್ಲಿ ಮುಂದೆ ಪ್ಲಾಸ್ಟಿಕ್ ಉಪಯೋಗಿಸಬೇಡಿ ಎಂದು ಜಾಗೃತಿ ಮೂಡಿಸುವ ವಿಭಿನ್ನ ರೀತಿಯ ಚಳುವಳಿ ಇದಾಗಿತ್ತು. ಸುಳ್ಯ ನಗರದಲ್ಲಿ ಆ.15 ರಿಂದ ಸುಳ್ಯದಲ್ಲಿ ಪ್ಲಾಸ್ಟಿಕ್ ನಿಷೇಧ ಜಾರಿಗೆ ಬರಲಿದ್ದು ಈ ಹಿನ್ನಲೆಯಲ್ಲಿ

Advertisement

ಪ್ಲಾಸ್ಟಿಕ್ ತ್ಯಾಜ್ಯದಿಂದ ಉಂಟಾಗುವ ಪರಿಸರ ಹಾನಿಯ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಚೆನ್ನಕೇಶವ ದೇವಸ್ಥಾನದಿಂದ ಪ್ರಾರಂಭಗೊಂಡು, ಸುಳ್ಯ ನಗರದಾದ್ಯಂತ ಸಂಚರಿಸಿ ಪ್ಲಾಸ್ಟಿಕ್ ಕಸ ಸಂಗ್ರಹಿಸಲಾಯಿತು.

ಸುಳ್ಯ ಎಸ್ಐ ಎಂ.ಆರ್.ಹರೀಶ್, ಸುಳ್ಯ ವರ್ತಕರ ಸಂಘದ ಅಧ್ಯಕ್ಷ ಪಿ.ಬಿ.ಸುಧಾಕರ ರೈ, ಸ್ವಚ್ಛ ನಗರ ಸುಳ್ಯ ತಂಡದ ವಿನೋದ್ ಲಸ್ರಾದೋ, ಲೋಕೇಶ್ ಗುಡ್ಡೆಮನೆ, ಡಿ.ಎಸ್. ಗಿರೀಶ್, ಕೆ.ಆರ್. ಮನಮೋಹನ್, ಸುಂದರ ರಾವ್, ನ.ಪಂ. ಸದಸ್ಯರಾದ ಶರೀಪ್ ಕಂಠಿ, ಬುದ್ಧ ನಾಯ್ಕ, ರೋಟರಿ ಕ್ಲಬ್‌ನ ರಾಮಚಂದ್ರ ಪಿ, ಡಿ.ಎಂ.ಶಾರೀಖ್, ನ.ಪಂ. ಆರೋಗ್ಯಾಧಿಕಾರಿ ರವಿಕೃಷ್ಣ, ಯುವ ಬ್ರಿಗೇಡ್‌ನ ಶರತ್ ಪರಿವಾರ್, ಹೈ ಟೊರ್ಕ್ ಮೊಟೊ ಕ್ರೆವ್ ಗ್ರೂಪ್‌ನ ಮಯೂರ್, ಕೌಶಲ್, ದೀಕ್ಷಿತ್ ರಾವ್, ಸಂಪ್ರೀತ್, ಸಚಿನ್, ಸನತ್ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 23-11-2024 | ರಾಜ್ಯದಲ್ಲಿ ಒಣಹವೆ ಮುಂದುವರಿಕೆ | ನ.28 ರಿಂದ ಕೆಲವು ಕಡೆ ಮಳೆ ಸಾಧ್ಯತೆ |
November 23, 2024
12:23 PM
by: ಸಾಯಿಶೇಖರ್ ಕರಿಕಳ
ಇಂಧನ ಉಳಿತಾಯ | ಪರಿಸರ ಜಾಗೃತಿ | ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆ
November 23, 2024
6:21 AM
by: The Rural Mirror ಸುದ್ದಿಜಾಲ
ಕೃಷಿ ಭೂಮಿ ಉಳಿಸಿಕೊಳ್ಳಲು- ಆರೋಗ್ಯ ಕಾಪಾಡಲು ಸಾವಯವ ಕೃಷಿಯತ್ತ ಒಲವು ಬೆಳೆಸಿ | ಐಐಟಿ ನಿರ್ದೇಶಕ ಡಾ.ವೆಂಕಪ್ಪಯ್ಯ ಆರ್. ದೇಸಾಯಿ
November 23, 2024
6:12 AM
by: The Rural Mirror ಸುದ್ದಿಜಾಲ
ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಕ್ಯೂಆರ್ ಕೋಡ್ ಅಳವಡಿಕೆ
November 23, 2024
6:06 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror