ಸುಳ್ಯ: ಭಾರತ ದೇಶವನ್ನು ಉಳಿಸಲು, ಜನರ ವಿಶ್ವಾಸಕ್ಕೆ ತಕ್ಕಂತೆ ಆಡಳಿತ ನಡೆಸಲು ನರೇಂದ್ರ ಮೋದಿ ನೇತೃತ್ವದ ಸರ್ಕಾರ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕಾದ ಅನಿವಾರ್ಯತೆ ಇದೆ ಎಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳಿನ್‍ಕುಮಾರ್ ಕಟೀಲ್ ಹೇಳಿದ್ದಾರೆ.
ಸುಳ್ಯದಲ್ಲಿ ಬಿಜೆಪಿ ಚುನಾವಣಾ ಪ್ರಚಾರದ ಅಂಗವಾಗಿ ನಡೆದ ರೋಡ್ ಶೋ ಬಳಿಕ ನಡೆದ ಸಾರ್ವಜನಿಕ ಸಭೆಯಲ್ಲಿ ಅವರು ಮಾತನಾಡಿದರು. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ, ಕಾಶ್ಮೀರ ಭಾರತದಲ್ಲಿಯೇ ಉಳಿಯಲು, ಏಕರೂಪ ನಾಗರಿಕ ಸಂಹಿತೆ ಜಾರಿಗೆ ಮತ್ತು ಪಾಕಿಸ್ಥಾನಕ್ಕೆ ತಕ್ಕ ಉತ್ತರ ನೀಡಲು ಹಾಗು ದೇಶ ಅಭಿವೃದ್ಧಿಯೆಡೆಗೆ ಸಾಗಲು ನರೇಂದ್ರ ಮೋದಿಯವರಂತಹಾ ವಿಶ್ವ ನಾಯಕ ದೇಶದ ಪ್ರಧಾನಿಯಾಗಿರಬೇಕು. ಆ ನಂಬಿಕೆ ಜನರಲ್ಲಿ ಇರುವುದರಿಂದಲೇ ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿಯಾಗಬೇಕೆಂದು ಜನತೆ ಬಯಸಿದ್ದಾರೆ. ಕಳೆದ ಐದು ವರ್ಷದಲ್ಲಿ ದೇಶದಲ್ಲಿ ಅದ್ಭುತ ಅಭಿವೃದ್ಧಿ ಕೆಲಸಗಳು ನಡೆದಿದೆ. ಹಳ್ಳಿಯಿಂದ ದಿಲ್ಲಿಯವರೆಗೆ ಪರಿವರ್ತನೆ ಸಾಧ್ಯವಾಗಿದೆ ಎಂದರು.
ಶಾಸಕ ಎಸ್.ಅಂಗಾರ , ಮಾಜಿ ಸಚಿವ ಕೃಷ್ಣ ಜೆ ಪಾಲೆಮಾರ್, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಮಾತನಾಡಿದರು. ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರವಿಶಂಕರ ಮಿಜಾರು, ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ, ಜಿಲ್ಲಾ ಪಂಚಾಯತ್ ಸದಸ್ಯರಾದ ಹರೀಶ್ ಕಂಜಿಪಿಲಿ, ಎಸ್.ಎನ್.ಮನ್ಮಥ, ಪುಷ್ಪಾವತಿ ಬಾಳಿಲ, ಮಂಡಲ ಸಮಿತಿ ಪ್ರಧಾನ ಕಾರ್ಯದರ್ಶಿಗಳಾದ ಪ್ರಕಾಶ್ ಹೆಗ್ಡೆ, ಸುಬೋದ್ ಶೆಟ್ಟಿ ಮೇನಾಲ, ವೆಂಕಟ್ ದಂಬೆಕೋಡಿ, ಭಾಗೀರಥಿ ಮುರುಳ್ಯ ಮತ್ತಿತರರು ಉಪಸ್ಥಿತರಿದ್ದರು.
ಬಿಜೆಪಿ ನಗರಾಧ್ಯಕ್ಷ ವಿನಯಕುಮಾರ್ ಕಂದಡ್ಕ ನಿರೂಪಿಸಿದರು.
ಕೊಡಗು ಜಿಲ್ಲೆಯ ಕೆಲವೆಡೆ ಲಘು ಭೂಕಂಪನವಾಗಿದ್ದು ರಿಕ್ಟರ್ ಮಾಪಕದಲ್ಲಿ ಇದರ ತೀವ್ರತೆ 1.6…
ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ತಾಲೂಕುಗಳ ಹಲವು ಕಡೆ ಸಂಜೆ ಉತ್ತಮ ಮಳೆಯಾಗಿದೆ.…
ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಕರ್ತವ್ಯ ನಿರ್ವಹಿಸುವ ವೈದ್ಯರು ಬೆಳಗ್ಗೆ 9 ಗಂಟೆಯಿಂದ…
ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಲಾದ ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ ಎಂದು ಗದಗ…
ಕೆಂಪು ಮೆಣಸಿನಕಾಯಿಗೆ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ-ಎಂಐಎಸ್ ಅಡಿಯಲ್ಲಿ ಬೆಲೆ ಕೊರತೆ ಪಾವತಿ-ಪಿಡಿಪಿ ಯೋಜನೆಯನ್ನು…
ಅನಧಿಕೃತ ಮರಳು ಸಾಗಾಟ ತಡೆಯಲು ಜಿಲ್ಲಾ ಮಟ್ಟದಲ್ಲಿ ರಚಿಸಲಾಗಿರುವ ಕಾರ್ಯಪಡೆ ಮರಳು ಸಮಿತಿಗೆ…