ಸುಳ್ಯ: ಸುಳ್ಯ ತಾಲೂಕು ಲಗೋರಿ ಅಸೋಸಿಯೇಶನ್, ದ.ಕ.ಜಿಲ್ಲಾ ಲಗೋರಿ ಅಸೋಸಿಯೇಷನ್ ಆಶ್ರಯದಲ್ಲಿ ಕೆ.ವಿ.ಜಿ ಸುಳ್ಯ ಹಬ್ಬದ ಪ್ರಯುಕ್ತ ರಾಜ್ಯ ಮಟ್ಟದ ಆಹ್ವಾನಿತ ಹೊನಲು ಬೆಳಕಿನ ಲಗೋರಿ ಪಂದ್ಯಾಟ ಚೆನ್ನಕೇಶವ ದೇವಸ್ಥಾನದ ವಠಾರದಲ್ಲಿ ನಡೆಯಿತು. ಎಂಟು ತಂಡಗಳು ಭಾಗವಹಿಸಿದ ಲೀಗ್ ಮಾದರಿಯ ಪಂದ್ಯಾಟ ಲಗೋರಿ ಪ್ರಿಯರ ಮನ ರಂಜಿಸಿತು. ಹನುಮಾನ್ ಲಗೋರಿಯನ್ ಮಂಗಳೂರು, ಚಿಕ್ಕಮಗಳೂರು ಜಿಲ್ಲಾ ತಂಡ, ಪಂಚ ಶ್ರೀ ಪಂಜ, ವಿದ್ಯಾರಶ್ಮಿ ವಿದ್ಯಾಲಯ, ಚಿಗುರು ಯುವಕ ಮಂಡಲ ಪೆರಾಜೆ, ಕೆ.ವಿ.ಜಿ ವಿದ್ಯಾಸಂಸ್ಥೆ ತಂಡ, ಗರುಡ ಚೊಕ್ಕಾಡಿ, ಕೊಡಗು ತಂಡ ತಂಡಗಳು ಪಂದ್ಯಾಟದಲ್ಲಿ ಭಾಗವಹಿಸಿದ್ದವು.
ದ.ಕ.ಜಿಲ್ಲಾ ಲಗೋರಿ ಅಸೋಸಿಯೇಷನ್ ಅಧ್ಯಕ್ಷ ಕೆ.ಸೀತಾರಾಮ ರೈ ಸವಣೂರು ಉದ್ಘಾಟಿಸಿದರು. ನಗರ ಪಂಚಾಯತ್ ಮಾಜಿ ಅಧ್ಯಕ್ಷ ಎನ್.ಎ.ರಾಮಚಂದ್ರ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯತ್ ಸದಸ್ಯ ಹರೀಶ್ ಕಂಜಿಪಿಲಿ, ನಗರ ಪಂಚಾಯತ್ ಸದಸ್ಯ ವಿನಯಕುಮಾರ್ ಕಂದಡ್ಕ, ತಾಲೂ ಕಬಡ್ಡಿ ಅಸೋಸಿಯೇಶನ್ ಅಧ್ಯಕ್ಷ ಬಿ.ಕೆ.ಮಾಧವ, ಸೀತಾರಾಮ ಕೇವಳ, ಲಗೋರಿ ಅಸೋಸಿಯೇಷನ್ ತಾಲೂಕು ಕಾರ್ಯದರ್ಶಿ ವಿಶ್ವನಾಥ್ ಕೆ ಉಪಸ್ಥಿತರಿದ್ದರು.
ಜಿಲ್ಲಾ ಲಗೋರಿ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ದೊಡ್ಡಣ್ಣ ಬರೆಮೇಲು ಸ್ವಾಗತಿಸಿ ಪ್ರಸ್ತಾವನೆಗೈದರು. ತೀರ್ಥವರ್ಣ ವಂದಿಸಿದರು. ದಿನೇಶ್ ಮಡಪ್ಪಾಡಿ ಕಾರ್ಯಕ್ರಮ ನಿರೂಪಿಸಿದರು.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.