ಸುಳ್ಯ: ಜೂನ್ 8 ಮತ್ತು 9ರಂದು ರಾಜ್ಯ ಮಟ್ಟದ ಹೊನಲು ಬೆಳಕಿನ ಲಗೋರಿ ಪಂದ್ಯಾಟ ಸುಳ್ಯ ಯುವಜನ ಸಂಯುಕ್ತ ಮಂಡಳಿ ಸಭಾ ಭವನದ ಮುಂಭಾಗದ ಸ.ಪ.ಪೂ.ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಲಿದೆ.
ದ ಕ ಜಿಲ್ಲಾ ಲಗೋರಿ ಅಸೋಸಿಯೇಷನ್ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.ದ ಕ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯ 10 ಮತ್ತು ಕೊಡಗು ಹಾಸನ ಮೈಸೂರು ಚಿಕ್ಕಮಗಳೂರು ಬೆಂಗಳೂರು ಮಂಡ್ಯ ಜಿಲ್ಲೆಯ 6 ತಂಡಗಳು ಭಾಗವಹಿಸಲಿವೆ.
ಈ ಬಗ್ಗೆ ಸಂಘಟನಾ ಸಮಿತಿ ರಚಿಸಲಾಗಿದೆ. ದ.ಕ.ಜಿಲ್ಲಾ ಅಸೋಸಿಯೇಶನ್ ನ ಉಪಾಧ್ಯಕ್ಷ ಎನ್.ಎ.ರಾಮಚಂದ್ರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಮಿತಿ ರಚಿಸಲಾಯಿತು. ಜಿಲ್ಲಾ ಅಸೋಸಿಯೇಶನ್ ನ ಪ್ರಧಾನ ಕಾರ್ಯದರ್ಶಿ ದೊಡ್ಡಣ್ಣ ಬರೆಮೇಲು ಸ್ವಾಗತಿಸಿ, ಉಪಾಧ್ಯಕ್ಷ ಬಿ.ಕೆ.ಮಾಧವ ವಂದಿಸಿದರು. ಕೋಶಾಧಿಕಾರಿ ಸಂತೋಷ್ ಮಡ್ತಿಲ ಕಾರ್ಯಕ್ರಮ ನಿರೂಪಿಸಿದರು.
ಸಂಘಟನಾ ಸಮತಿ:
ಸಂಘಟನಾ ಸಮಿತಿಯ ಅಧ್ಯಕ್ಷರಾಗಿ ದೀಪಕ್ ಕುತ್ತಮೊಟ್ಟೆ, ಪ್ರಧಾನ ಕಾರ್ಯದರ್ಶಿಯಾಗಿ ಪಿ.ಎಸ್.ಗಂಗಾಧರ, ಸಂಯೋಜಕರಾಗಿ ದಿನೇಶ್ ಮಡಪ್ಪಾಡಿ, ಕೋಶಾಧಿಕಾರಿಯಾಗಿ ನವೀನ್ ಕಜೆ ಆಯ್ಕೆಯಾಗಿದ್ದಾರೆ ಎಂದು ಜಿಲ್ಲಾ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ದೊಡ್ಡಣ್ಣ ಬರೆಮೇಲು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಕದನ ವಿರಾಮ ಘೋಷಣೆ ಬಳಿಕ ಪಾಕಿಸ್ತಾನ ಗಡಿಗೆ ಹೊಂದಿಕೊಂಡಿರುವ ರಾಜ್ಯಗಳ ಪರಿಸ್ಧಿತಿ ಸಾಮಾನ್ಯ…
ಕೃಷಿಯಷ್ಟೇ ಅಲ್ಲ ಕೃಷಿ ವಸ್ತುಗಳ ಮಾರುಕಟ್ಟೆ ಹಾಗೂ ಕೃಷಿ ಬೆಳವಣಿಗೆಯ ಬಗ್ಗೆ ಪುತ್ತೂರಿನ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಸಂಸ್ಕಾರದಿಂದ ಮೀಯದ ಮನಸ್ಸು, ತನ್ನ ಬಗ್ಗೆ ಯೋಚಿಸುವುದಿಲ್ಲ. ತನ್ನ ಭವಿಷ್ಯದತ್ತ ನೋಟ ಹರಿಸುವುದಿಲ್ಲ.…
ಶನಿವಾರ ಸಂಜೆ 5 ಗಂಟೆಗೆ ಆರಂಭವಾದ ತೀವ್ರ ಘರ್ಷಣೆಗಳ ನಂತರ ಭಾರತ ಮತ್ತು…