ಸುಳ್ಯ: ದ.ಕ.ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಸುಳ್ಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸುಳ್ಯ, ನೆಹರೂ ಮೆಮೋರಿಯಲ್ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ಆಶ್ರಯದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ನಡೆಯಿತು.
ಜಿಲ್ಲಾ ಪಂಚಾಯತ್ ಸದಸ್ಯ ಎಸ್.ಎನ್.ಮನ್ಮಥ ಉದ್ಘಾಟಿಸಿದರು. ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಜಿಲ್ಲಾ ಆರೋಗ್ಯ ಮೇಲ್ವಿಚಾರಕ ಜಯರಾಮ ಪೂಜಾರಿ ಸಂಪನ್ಮೂಲ ವ್ಯಕ್ತಿಯಾಗಿದ್ದರು. ತಾಲೂಕು ಪಂಚಾಯತ್ ಸದಸ್ಯರಾದ ಪುಷ್ಪಾ ಮೇದಪ್ಪ, ವಿದ್ಯಾಲಕ್ಷ್ಮಿ, ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಎನ್.ಭವಾನಿಶಂಕರ, ತಾಲೂಕು ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಭಾನುಮತಿ, ಯುವ ರೆಡ್ ಕ್ರಾಸ್ ಘಟಕದ ಕಾರ್ಯಕ್ರಮಾಧಿಕಾರಿ ಡಾ.ಅನುರಾಧಾ ಕುರುಂಜಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ತಾಲೂಕು ಆರೋಗ್ಯಾಧಿಕಾರಿ ಡಾ.ಸುಬ್ರಹ್ಮಣ್ಯ ಸ್ವಾಗತಿಸಿದರು. ವಾಸುದೇವ ನಾಯಕ್ ಕಾರ್ಯಕ್ರಮ ನಿರೂಪಿಸಿದರು. ಪಂಜ ಆರೋಗ್ಯ ಕೇಂದ್ರದ ನಿವೃತ್ತ ಆರೋಗ್ಯ ಸಹಾಯಕಿ ಕಮಲ.ಎ.ಎಸ್, ಆಶಾ ಕಾರ್ಯಕರ್ತೆ ಅನಿತಾ ಅವರನ್ನು ಸನ್ಮಾನಿಸಲಾಯಿತು.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…