ಸುಳ್ಯ: ಕರ್ನಾಟಕ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಿರಿಯ ನಾಗರಿಕ ಮತ್ತು ವಿಕಲಚೇತನರ ಸಬಲೀಕರಣ ಇಲಾಖೆ, ಸುಳ್ಯ ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಸಂಘ, ಎಂ.ಬಿ.ಫೌಂಡೇಶನ್ ಸುಳ್ಯ ಇದರ ಸಂಯುಕ್ತ ಆಶ್ರಯದಲ್ಲಿ ಸುಳ್ಯ ತಾಲೂಕು ಮಟ್ಟದ ವಿಶ್ವ ವಿಕಲಚೇತನರ ದಿನಾಚರಣೆ ಡಿ.7 ರಂದು ಸುಳ್ಯ ಕೆ.ವಿ.ಜಿ. ಪುರಭವನದಲ್ಲಿ ನಡೆಯಿತು.
ಸುಳ್ಯ ಪೊಲೀಸ್ ವೃತ್ತ ನಿರೀಕ್ಷಕ ನವೀನ್ ಚಂದ್ರ ಜೋಗಿ ಉದ್ಘಾಟಿಸಿದರು. ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ ಅಧ್ಯಕ್ಷತೆ ವಹಿಸಿದ್ದರು. ಜಿ.ಪಂ.ಸದಸ್ಯ ಹರೀಶ್ ಕಂಜಿಪಿಲಿ, ವಕೀಲರ ಸಂಘದ ಅಧ್ಯಕ್ಷ ಎಂ.ವೆಂಕಪ್ಪ ಗೌಡ, ಲಯನ್ಸ್ ಕ್ಲಬ್ ಅಧ್ಯಕ್ಷ ಗಂಗಾಧರ ರೈ, ರೋಟರಿ ಕ್ಲಬ್ ಅಧ್ಯಕ್ಷ ಡಾ.ಪುರುಷೋತ್ತಮ ಕೆ.ಜಿ, ನಗರ ಪಂಚಾಯತ್ ಮುಖ್ಯಾಧಿಕಾರಿ ಎನ್.ಮತ್ತಡಿ ಅತಿಥಿಗಳಾಗಿ ಭಾಗವಹಿಸಿದ್ದರು. ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಸಂಘದ ಕಾರ್ಯದರ್ಶಿ ಪ್ರವೀಣ್ ನಾಯಕ್, ತಾ.ಪಂ.ತಾಲೂಕು ವಿವಿಧೋದ್ದೇಶ ಕಾರ್ಯಕರ್ತ ಚಂದ್ರಶೇಖರ್.ಬಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಸಂಘದ ಅಧ್ಯಕ್ಷ ಪುಟ್ಟಣ್ಣ ವಲಿಕಜೆ ಸ್ವಾಗತಿಸಿ, ಎಂ.ಬಿ. ಫೌಂಡೇಶನ್ ಅಧ್ಯಕ್ಷ ಎಂ.ಬಿ.ಸದಾಶಿವ ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಜೇಶ್ವರಿ ಪ್ರಾರ್ಥಿಸಿದರು. ಹರಿಣಿ ಸದಾಶಿವ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ಅಂಗವಾಗಿ ಸರಕಾರ ನೀಡಿದ ತ್ರಿಚಕ್ರ ವಾಹನ ಸವಾರರಿಂದ ನಗರದಲ್ಲಿ ಮೆರವಣಿಗೆ ನಡೆಯಿತು. ಜ್ಯೋತಿ ವೃತ್ತದಿಂದ ಪುರಭವನದವರೆಗೆ ನಡೆದ ಮೆರವಣಿಗೆಗೆ ಜಿ.ಪಂ.ಸದಸ್ಯ ಹರೀಶ್ ಕಂಜಿಪಿಲಿ ಚಾಲನೆ ನೀಡಿದರು. ಕಾರ್ಯಕ್ರಮದ ಅಂಗವಾಗಿ ವಿಶಿಷ್ಟ ಸಾಧಕ ವಿಕಲಚೇತನರಿಗೆ ಸನ್ಮಾನ, ಮಾಹಿತಿ ಕಾರ್ಯಾಗಾರ, ನೂತನ ಗುರುತು ಚೀಟಿ ನೀಡುವ ಕಾರ್ಯಕ್ರಮ, ವಿಶೇಷ ಮಕ್ಕಳ ಮನರಂಜನೆಗಾಗಿ ತಿರುಗುವ ಕುದುರೆ, ಜಂಪಿಂಗ್ ಬಾಲ್ ಮುಂತಾದ ವಿಶಿಷ್ಟ ಮನೋಲ್ಲಾಸ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಯಿತು.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…