Advertisement
ಕಾರ್ಯಕ್ರಮಗಳು

ಸುಳ್ಯದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ

Share

ಸುಳ್ಯ: ಕರ್ನಾಟಕ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಿರಿಯ ನಾಗರಿಕ ಮತ್ತು ವಿಕಲಚೇತನರ ಸಬಲೀಕರಣ ಇಲಾಖೆ, ಸುಳ್ಯ ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಸಂಘ, ಎಂ.ಬಿ.ಫೌಂಡೇಶನ್ ಸುಳ್ಯ ಇದರ ಸಂಯುಕ್ತ ಆಶ್ರಯದಲ್ಲಿ ಸುಳ್ಯ ತಾಲೂಕು ಮಟ್ಟದ ವಿಶ್ವ ವಿಕಲಚೇತನರ ದಿನಾಚರಣೆ ಡಿ.7 ರಂದು ಸುಳ್ಯ ಕೆ.ವಿ.ಜಿ. ಪುರಭವನದಲ್ಲಿ ನಡೆಯಿತು.

ಸುಳ್ಯ ಪೊಲೀಸ್ ವೃತ್ತ ನಿರೀಕ್ಷಕ ನವೀನ್ ಚಂದ್ರ ಜೋಗಿ ಉದ್ಘಾಟಿಸಿದರು. ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ ಅಧ್ಯಕ್ಷತೆ ವಹಿಸಿದ್ದರು. ಜಿ.ಪಂ.ಸದಸ್ಯ ಹರೀಶ್ ಕಂಜಿಪಿಲಿ, ವಕೀಲರ ಸಂಘದ ಅಧ್ಯಕ್ಷ ಎಂ.ವೆಂಕಪ್ಪ ಗೌಡ, ಲಯನ್ಸ್ ಕ್ಲಬ್ ಅಧ್ಯಕ್ಷ ಗಂಗಾಧರ ರೈ, ರೋಟರಿ ಕ್ಲಬ್ ಅಧ್ಯಕ್ಷ ಡಾ.ಪುರುಷೋತ್ತಮ ಕೆ.ಜಿ, ನಗರ ಪಂಚಾಯತ್ ಮುಖ್ಯಾಧಿಕಾರಿ ಎನ್.ಮತ್ತಡಿ ಅತಿಥಿಗಳಾಗಿ ಭಾಗವಹಿಸಿದ್ದರು. ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಸಂಘದ ಕಾರ್ಯದರ್ಶಿ ಪ್ರವೀಣ್ ನಾಯಕ್, ತಾ.ಪಂ.ತಾಲೂಕು ವಿವಿಧೋದ್ದೇಶ ಕಾರ್ಯಕರ್ತ ಚಂದ್ರಶೇಖರ್.ಬಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಸಂಘದ ಅಧ್ಯಕ್ಷ ಪುಟ್ಟಣ್ಣ ವಲಿಕಜೆ ಸ್ವಾಗತಿಸಿ, ಎಂ.ಬಿ. ಫೌಂಡೇಶನ್ ಅಧ್ಯಕ್ಷ ಎಂ.ಬಿ.ಸದಾಶಿವ ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಜೇಶ್ವರಿ ಪ್ರಾರ್ಥಿಸಿದರು. ಹರಿಣಿ ಸದಾಶಿವ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ಅಂಗವಾಗಿ  ಸರಕಾರ ನೀಡಿದ ತ್ರಿಚಕ್ರ ವಾಹನ ಸವಾರರಿಂದ ನಗರದಲ್ಲಿ ಮೆರವಣಿಗೆ ನಡೆಯಿತು. ಜ್ಯೋತಿ ವೃತ್ತದಿಂದ ಪುರಭವನದವರೆಗೆ ನಡೆದ ಮೆರವಣಿಗೆಗೆ ಜಿ.ಪಂ.ಸದಸ್ಯ ಹರೀಶ್ ಕಂಜಿಪಿಲಿ ಚಾಲನೆ ನೀಡಿದರು. ಕಾರ್ಯಕ್ರ‌ಮದ ಅಂಗವಾಗಿ ವಿಶಿಷ್ಟ ಸಾಧಕ ವಿಕಲಚೇತನರಿಗೆ ಸನ್ಮಾನ, ಮಾಹಿತಿ ಕಾರ್ಯಾಗಾರ, ನೂತನ ಗುರುತು ಚೀಟಿ ನೀಡುವ ಕಾರ್ಯಕ್ರಮ, ವಿಶೇಷ ಮಕ್ಕಳ ಮನರಂಜನೆಗಾಗಿ ತಿರುಗುವ ಕುದುರೆ, ಜಂಪಿಂಗ್ ಬಾಲ್ ಮುಂತಾದ ವಿಶಿಷ್ಟ ಮನೋಲ್ಲಾಸ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಯಿತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

17 hours ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

23 hours ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

23 hours ago

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

1 day ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

2 days ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

2 days ago