Advertisement
ಸುದ್ದಿಗಳು

ಸುಳ್ಯದಲ್ಲಿ ಶಿಕ್ಷಕರ ದಿನಾಚರಣೆ: ಸಮಾಜಕ್ಕೆ ಕೊಡುಗೆ ನೀಡಿದರೆ ಸಮಾಜ ಗುರುತಿಸಿಕೊಳ್ಳುತ್ತದೆ: ಶಾಸಕ‌ ಅಂಗಾರ ಅಭಿಮತ

Share

ಸುಳ್ಯ: ತಮ್ಮ ಜೀವನದಲ್ಲಿ ಸಮಾಜಕ್ಕೆ ದೊಡ್ಡ ಕೊಡುಗೆಯನ್ನು ನೀಡಿದವರನ್ನು ಸಮಾಜ ಗುರುತಿಸುತ್ತದೆ ಮತ್ತು ಸದಾ ನೆನಪಿಸಿಕೊಳ್ಳುತ್ತದೆ. ಶಿಕ್ಷಣ ಕ್ಷೇತ್ರಕ್ಕೆ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ನೀಡಿದ ಕೊಡುಗೆಯನ್ನು ಶಿಕ್ಷಕರ ದಿನವನ್ನಾಗಿ ಆಚರಿಸುವ ಮೂಲಕ ಸಮಾಜ ನೆನಪಿಸುತ್ತದೆ ಎಂದು ಶಾಸಕ ಎಸ್.ಅಂಗಾರ ಹೇಳಿದ್ದಾರೆ.
ಸುಳ್ಯ ತಾಲೂಕು ಶಿಕ್ಷಕರ ದಿನಾಚರಣೆ ಸಮಿತಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಆಶ್ರಯದಲ್ಲಿ ಕೇರ್ಪಳ ಶ್ರೀ ದುರ್ಗಾಪರಮೇಶ್ವರಿ ಕಲಾ ಮಂದಿರದಲ್ಲಿ ನಡೆದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನೋತ್ಸವ ಮತ್ತು ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಮ್ಮ ದೇಶದ ಉದಾತ್ತ ವಿಚಾರಧಾರೆಗಳು ನಮ್ಮನ್ನು ಕೈ ಹಿಡಿದು ಮುಂದಕ್ಕೆ ನಡೆಸುತ್ತದೆ. ವಿಚಾರಗಳಿಗೆ ಮಹತ್ವ ನೀಡಿ ಅದಕ್ಕೆ ಬದ್ಧರಾಗಿ ಕೆಲಸ ಮಾಡಿದರೆ ನಮ್ಮನ್ನು ಕೂಡ ಸಮಾಜ ಗುರುತಿಸುವಂತೆ ಮಾಡಬಹುದು. ಇಂದಿನ ಆಧುನಿಕ ಶಿಕ್ಷಣ ವ್ಯವಸ್ಥೆ ಹಲವಾರು ಸಮಸ್ಯೆಗಳನ್ನೂ, ಸವಾಲುಗಳನ್ನೂ ಎದುರಿಸುತ್ತಿದೆ. ಶಿಕ್ಷಕರ ಕೊರತೆ ದೊಡ್ಡ ಸಮಸ್ಯೆಯಾಗಿ ಕಾಡುತ್ತಿದೆ ಎಂದು ಅವರು ಬೊಟ್ಟು ಮಾಡಿದರು.

ಪತ್ರಕರ್ತ ದುರ್ಗಾಕುಮಾರ್ ನಾಯರ್ ಕೆರೆ ವಿಶೇಷ ಉಪನ್ಯಾಸ ನೀಡಿದರು.ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ.ಕೆ.ವಿ. ಚಿದಾನಂದ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಸರಕಾರಿ ನೌಕರರ ಸಂಘದ ಅಧ್ಯಕ್ಷ ತೀರ್ಥರಾಮ ಹೊಸೊಳಿಕೆ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶ್ರೀಧರ ಗೌಡ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮೋಹನ್, ಸಾರ್ವಜನಿಕ ಬೋಧಕೇತರ ನೌಕರರ ಸಂಘದ ಅಧ್ಯಕ್ಷ ಶ್ಯಾಮ್ ಪ್ರಸಾದ್, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಸೂಫಿ ಪೆರಾಜೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಈ ಹಿಂದೆ ಸುಳ್ಯದಲ್ಲಿ ಶಿಕ್ಷಣಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಬಿ.ಎಸ್.ಕೆಂಪಲಿಂಗಪ್ಪ, ಶೇಖರ್ ಅವರನ್ನು ಸನ್ಮಾನಿಸಲಾಯಿತು. ಕ್ಷೇತ್ರ ಸಮನ್ವಯಾಧಿಕಾರಿ ವೀಣಾ ಎಂ.ಟಿ. ಸ್ವಾಗತಿಸಿದರು. ಅಚ್ಚುತ ಅಟ್ಲೂರು ಹಾಗೂ ವಸಂತ ಏನೆಕಲ್ಲು ಕಾರ್ಯಕ್ರಮ ನಿರೂಪಿಸಿದರು.

ಜಿಲ್ಲಾ ಪ್ರಶಸ್ತಿ ಪಡೆದ ಶಿಕ್ಷಕರನ್ನು, ನಿವೃತ್ತ ಶಿಕ್ಷಕರನ್ನು, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಶಿಕ್ಷರನ್ನು ಸನ್ಮಾನಿಸಲಾಯಿತು. ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಪಡೆದ ಶಾಲೆಗಳನ್ನು, ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

1 hour ago

ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು

ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…

19 hours ago

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

1 day ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

1 day ago

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!

ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…

2 days ago

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

2 days ago