ಸುಳ್ಯ: ಸುಳ್ಯ ತಾಲೂಕಿನಾದ್ಯಂತ ಸಂಭ್ರಮದ ಗಣೇಶೋತ್ಸವವನ್ನು ಆಚರಿಸಲಾಯಿತು. ವಿಘ್ನ ವಿನಾಶಕ ಗಣೇಶ ಆರಾಧನೆ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.
ಶ್ರೀ ಸಿದ್ಧಿವಿನಾಯಕ ಸೇವಾ ಸಮಿತಿ ಸುಳ್ಯ ಹಾಗು ಸಾರ್ವಜನಿಕ ಶ್ರೀ ದೇವತಾರಾಧನಾ ಸಮಿತಿಯ ವತಿಯಿಂದ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ನಡೆಯುವ 51ನೇ ವರ್ಷದ ಗಣೇಶೋತ್ಸವ ಆರಂಭಗೊಂಡಿದೆ. ವಿವಿಧ ಕಾರ್ಯಕ್ರಮಗಳೊಂದಿಗೆ ಐದು ದಿನಗಳ ಕಾಲ ನಡೆಯುವ ಗಣೇಶೋತ್ಸವ ಸೆ.6 ರಂದು ವೈಭವದ ಶೋಭಾಯಾತ್ರೆಯೊಂದಿಗೆ ಸಮಾಪನಗೊಳ್ಳಲಿದೆ.
ಹಳೆಗೇಟು:
ಹಳೆಗೇಟಿನ ಸಾಂಸ್ಕೃತಿಕ ಸಂಘದ ವತಿಯಿಂದ ನಡೆಯುವ 35ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಆರಂಭಗೊಂಡಿದೆ. ಧಾರ್ಮಿಕ ಸಭೆ, ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ಮೂರು ದಿನಗಳ ಕಾಲ ನಡೆಯುವ ಗಣೇಶೋತ್ಸವ ಶೋಭಾ ಯಾತ್ರೆಯೊಂದಿಗೆ ಸೆ.4ರಂದು ಸಮಾಪನಗೊಳ್ಳಲಿದೆ.
ಜಟ್ಟಿಪಳ್ಳ:
ಜಟ್ಟಿಪಳ್ಳದ ಶ್ರೀರಾಮ ಭಜನಾ ಸೇವಾ ಸಮಿತಿಯ ವತಿಯಿಂದ ನಡೆದ 26ನೇ ವರ್ಷದ ಗಣೇಶೋತ್ಸವ ನಡೆಯಿತು. ಸೋಮವಾರ ಬೆಳಿಗ್ಗೆ ದೇವರ ಮೂರ್ತಿ ಪ್ರತಿಷ್ಠೆ ನಡೆಯಿತು. ಬಳಿಕ ವಿವಿಧ ಕಾರ್ಯಕ್ರಮಗಳು, ಮಹಾ ಪೂಜೆ, ಅನ್ನಸಂತರ್ಪಣೆ ನಡೆಯಿತು.
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…