ಸುಳ್ಯ: ಸುಳ್ಯ ತಾಲೂಕು ರಾಷ್ಟ್ರೀಯ ಹಬ್ಬಗಳ ದಿನಾಚರಣಾ ಸಮಿತಿಯ ಆಶ್ರಯದಲ್ಲಿ 73ನೇ ಸ್ವಾತಂತ್ರ್ಯೋತ್ಸವ ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿದರು.
ಬಳಿಕ ಸ್ವಾತಂತ್ರ್ಯ ಸಂದೇಶ ನೀಡಿದ ಅವರು ಭವ್ಯ ಭಾರತದ ಪರಿಕಲ್ಪನೆಯ ಯೋಜನೆಗಳಡಿಯಲ್ಲಿ ಯುವ ಸಮುದಾಯವು ತೊಡಗಿಸಿಕೊಂಡು ದೇಶದ ಅಭಿವೃದ್ಧಿ ಪಥದತ್ತ ಕೊಂಡೊಯ್ಯಬೇಕಾಗಿದೆ ಎಂದು ಕರೆ ನೀಡಿದರು. ಪ್ರಾಚೀನ ಕಾಲದ ಗತ ವೈಭವವನ್ನು ನಮ್ಮ ದೇಶವು ಮತ್ತೆ ಪಡೆಯುವಂತಾಗಬೇಕು. ಅತಿಯಾದ ಆಧುನಿಕ ತಂತ್ರಜ್ಞಾನದ ಆವಿಷ್ಕಾರದ ಭರದಲ್ಲಿ ಜಗತ್ತೇ ಮೆಚ್ಚುವ ನಮ್ಮ ಆಚಾರ-ವಿಚಾರ, ಸಂಸ್ಕೃತಿ, ನಡೆ ನುಡಿ ಒಗ್ಗಟ್ಟು ರಾಷ್ಟ್ರೀಯ ಭಾವೈಕ್ಯತೆಯನ್ನು ಉಳಿಸಿ ಬೆಳೆಸಿಕೊಂಡು ಹೋಗುವ ಬಹು ದೊಡ್ಡ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಈ ನಿಟ್ಟಿನಲ್ಲಿ ರಾಷ್ಟ್ರೀಯ ಆಚರಣೆಗಳು ನಮ್ಮ ಭಾವೈಕ್ಯತೆಯನ್ನು ಬೆಸೆಯಲಿ, ನಮ್ಮ ಮನಸ್ಸನ್ನು ಪತಿವರ್ತಿಸಲಿ ನವ್ಯ ಸಾಧನೆಗೆ ಸ್ಪೂರ್ತಿಯ ಚಿಲುಮೆಯಾಗಲಿ ಆ ಮೂಲಕ ಭವ್ಯ ಭಾರತ ನಿರ್ಮಾಣವಾಗಲಿ ಎಂದು ಆಶಯವನ್ನು ವ್ಯಕ್ತಪಡಿಸಿದರು.
ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಆಕರ್ಷಕ ಪಥ ಸಂಚಲನ ನಡೆಯಿತು. ಪೊಲೀಸ್, ಗೃಹ ರಕ್ಷಕ ದಳ, ಎನ್.ಸಿ.ಸಿ, ಸ್ಕೌಟ್ಸ್, ಗೈಡ್ಸ್, ಶಾಲಾ ವಿದ್ಯಾರ್ಥಿಗಳು ಪಥ ಸಂಚಲನದಲ್ಲಿ ಭಾಗವಹಿಸಿದ್ದರು.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೇಘಾಲಯಕ್ಕೆ ಭೇಟಿ ನೀಡಿದ ಸಂದರ್ಭ ಹಲಸಿನ…
ವ್ಯಾಪಾರದ ಯಶಸ್ಸು ಒಂದು ಕಾಲದಿಂದ ಇನ್ನೊಂದು ಕಾಲಕ್ಕೆ ಬದಲಾಗುತ್ತದೆ, ಮತ್ತು ಜ್ಯೋತಿಷ್ಯ ಶಾಸ್ತ್ರದ…
ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಮತ್ತು ಇತರ ಮೂವರು ಸಿಬ್ಬಂದಿಯನ್ನು…
ಸಾಮಾಜಿಕ ವ್ಯವಸ್ಥೆಯಲ್ಲಿ ‘ಸೇವೆ’ಗೆ ಮೌಲ್ಯ ನಿರ್ಧರಿಸಲು ಕಷ್ಟಸಾಧ್ಯ. ಆತ್ಮಾರ್ಥ ಸೇವೆಗಳು ಸದ್ದಾಗುವುದಿಲ್ಲ. ಫಕ್ಕನೆ…
15.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…