ಸುಳ್ಯ: ಸುಳ್ಯ ತಾಲೂಕು ರಾಷ್ಟ್ರೀಯ ಹಬ್ಬಗಳ ದಿನಾಚರಣಾ ಸಮಿತಿಯ ಆಶ್ರಯದಲ್ಲಿ 73ನೇ ಸ್ವಾತಂತ್ರ್ಯೋತ್ಸವ ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿದರು.
ಬಳಿಕ ಸ್ವಾತಂತ್ರ್ಯ ಸಂದೇಶ ನೀಡಿದ ಅವರು ಭವ್ಯ ಭಾರತದ ಪರಿಕಲ್ಪನೆಯ ಯೋಜನೆಗಳಡಿಯಲ್ಲಿ ಯುವ ಸಮುದಾಯವು ತೊಡಗಿಸಿಕೊಂಡು ದೇಶದ ಅಭಿವೃದ್ಧಿ ಪಥದತ್ತ ಕೊಂಡೊಯ್ಯಬೇಕಾಗಿದೆ ಎಂದು ಕರೆ ನೀಡಿದರು. ಪ್ರಾಚೀನ ಕಾಲದ ಗತ ವೈಭವವನ್ನು ನಮ್ಮ ದೇಶವು ಮತ್ತೆ ಪಡೆಯುವಂತಾಗಬೇಕು. ಅತಿಯಾದ ಆಧುನಿಕ ತಂತ್ರಜ್ಞಾನದ ಆವಿಷ್ಕಾರದ ಭರದಲ್ಲಿ ಜಗತ್ತೇ ಮೆಚ್ಚುವ ನಮ್ಮ ಆಚಾರ-ವಿಚಾರ, ಸಂಸ್ಕೃತಿ, ನಡೆ ನುಡಿ ಒಗ್ಗಟ್ಟು ರಾಷ್ಟ್ರೀಯ ಭಾವೈಕ್ಯತೆಯನ್ನು ಉಳಿಸಿ ಬೆಳೆಸಿಕೊಂಡು ಹೋಗುವ ಬಹು ದೊಡ್ಡ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಈ ನಿಟ್ಟಿನಲ್ಲಿ ರಾಷ್ಟ್ರೀಯ ಆಚರಣೆಗಳು ನಮ್ಮ ಭಾವೈಕ್ಯತೆಯನ್ನು ಬೆಸೆಯಲಿ, ನಮ್ಮ ಮನಸ್ಸನ್ನು ಪತಿವರ್ತಿಸಲಿ ನವ್ಯ ಸಾಧನೆಗೆ ಸ್ಪೂರ್ತಿಯ ಚಿಲುಮೆಯಾಗಲಿ ಆ ಮೂಲಕ ಭವ್ಯ ಭಾರತ ನಿರ್ಮಾಣವಾಗಲಿ ಎಂದು ಆಶಯವನ್ನು ವ್ಯಕ್ತಪಡಿಸಿದರು.
ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಆಕರ್ಷಕ ಪಥ ಸಂಚಲನ ನಡೆಯಿತು. ಪೊಲೀಸ್, ಗೃಹ ರಕ್ಷಕ ದಳ, ಎನ್.ಸಿ.ಸಿ, ಸ್ಕೌಟ್ಸ್, ಗೈಡ್ಸ್, ಶಾಲಾ ವಿದ್ಯಾರ್ಥಿಗಳು ಪಥ ಸಂಚಲನದಲ್ಲಿ ಭಾಗವಹಿಸಿದ್ದರು.
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…