ಸುಳ್ಯದ ಅಸಮಾಧಾನ ಶಮನ ? ಎಸ್.ಅಂಗಾರ ಅವರಿಗೆ ಸದ್ಯದಲ್ಲೇ ಪ್ರಮುಖ ಹುದ್ದೆ ?

August 21, 2019
12:53 PM

ಸುಳ್ಯ: ಶಾಸಕ ಎಸ್ ಅಂಗಾರ ಅವರಿಗೆ ಸಚಿವ ಸ್ಥಾನ ಸಿಗದೇ ಇರುವ ಬಗ್ಗೆ ವ್ಯಾಪಕ ಅಸಮಾಧಾನ ವ್ಯಕ್ತಪಡಿಸಿದ್ದ ಸುಳ್ಯ ಬಿಜೆಪಿ ಈಗ ಶಾಂತವಾಗಿದೆಯೇ ? ಎಸ್ ಅಂಗಾರ ಅವರಿಗೆ    ಮುಂದಿನ ಸಚಿವ ಹಂತದ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ಅಥವಾ  ಪ್ರಮುಖವಾದ ನಿಗಮದ ಹುದ್ದೆ ನೀಡುವ ಭರವಸೆಯನ್ನು ಪಕ್ಷದ ಹಿರಿಯರು ನೀಡಿದ್ದು ಈ ಮೂಲಕ ಸುಳ್ಯ ಬಿಜೆಪಿ ಪ್ರಮುಖರನ್ನು ಸಮಾಧಾನ ಪಡಿಸಿರುವ ಬಗ್ಗೆ ಮೂಲಗಳು ಮಾಹಿತಿ ನೀಡಿವೆ.

Advertisement
Advertisement
Advertisement

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಸುಳ್ಯ ವಿಧಾನ ಸಭಾ ಕ್ಷೇತ್ರದ ನಂಟು ಹೊಂದಿರುವ ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲು ಅವರು ಘೋಷಣೆಯಾದ ಬೆನ್ನಲ್ಲೇ ಅವರದೇ ತವರು ಕ್ಷೇತ್ರದ ಅಸಮಾಧಾನ ಶಮನ ಮಾಡಲು ತಕ್ಷಣವೇ ಮಾತುಕತೆ ನಡೆಸಿದ್ದು ದಕ್ಷಿಣ ಕನ್ನಡ ಜಿಲ್ಲೆಯಿಂದ ಮುಂದಿನ ಹಂತದ ಸಚಿವ ಸಂಪುಟ ವಿಸ್ತರಣೆಯ ವೇಳೆ ಅಂಗಾರ ಅವರಿಗೆ ಸಚಿವ ಸ್ಥಾನ ಅಥವಾ ಪ್ರಮುಖ ನಿಮಗದ ಹುದ್ದೆ ನೀಡುವ ಭರವಸೆಯನ್ನು ಪಕ್ಷದ ಹಿರಿಯರು ನೀಡಿದ್ದಾರೆ ಎಂದು ನಂಬಲರ್ಹ ಮೂಲಗಳು ತಿಳಿಸಿವೆ. ಇದರ ಜೊತೆಗೆ ಅಸಮಾಧಾನದ ಬಗ್ಗೆ ಯಾವುದೇ ಹೇಳಿಕೆಗಳನ್ನು ಮಾಧ್ಯಮಗಳ ಮೂಲಕ ನೀಡಬಾರದು ಎಂದೂ ಸ್ಪಷ್ಟವಾದ ಸೂಚನೆ ನೀಡಿದ್ದು , ಪಕ್ಷದ ಒಳಗಿನ ಆಂತರಿಕ ಸಂಗತಿಗಳನ್ನು , ಅನಗತ್ಯವಾಗಿ ಅಭಿಪ್ರಾಯಗಳನ್ನು ಮಾಧ್ಯಮಗಳ ಮೂಲಕ ಹಂಚಿ ಗೊಂದಲ ಸೃಷ್ಟಿಸಿದರೆ ಯಾವುದೇ ಹುದ್ದೆ ಸಿಗುವುದೂ ಕಷ್ಟವಾಗಬಹುದು ಎಂಬ ಖಡಕ್ ಸೂಚನೆ ಲಭ್ಯವಾಗಿದೆ ಎಂದು ಮೂಲಗಳು ತಿಳಿಸಿವೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಕ್ಯಾನ್ಸರ್‌ಕಾರಕ | ತಿರುಚಿದ ವರದಿ ಪ್ರಕಟಿಸಿದ WHO | ಕೇಂದ್ರ ಸರ್ಕಾರ ಮಧ್ಯಪ್ರವೇಶಕ್ಕೆ ಕ್ಯಾಂಪ್ಕೊ ಒತ್ತಾಯ |
November 26, 2024
7:05 PM
by: ದ ರೂರಲ್ ಮಿರರ್.ಕಾಂ
ಅಡಿಕೆಯ ಔಷಧೀಯ ಗುಣ | “we made” ಅಡಿಕೆಯ ಲಿಕ್ವಿಡ್‌ ಸೋಪು | ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ |
November 26, 2024
7:11 AM
by: ಮಹೇಶ್ ಪುಚ್ಚಪ್ಪಾಡಿ
ಇಂಡಿಯನ್ ಅಕಾಡೆಮಿ ಆಫ್ ಓರಲ್ ಮೆಡಿಸಿನ್ ಅಂಡ್ ರೇಡಿಯಾಲಜಿಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಡಾ.ಜಯಪ್ರಸಾದ ಆನೆಕಾರ
November 26, 2024
5:53 AM
by: ದ ರೂರಲ್ ಮಿರರ್.ಕಾಂ
ನೀರಿಗಾಗಿ ಏಕಾಂಗಿಯಾಗಿ ಸುರಂಗ ತೋಡಿದ ಕೃಷಿಕ | ಹಸಿರಾದ ಕೃಷಿ |
November 25, 2024
8:44 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror