ಸುಳ್ಯ: ಶಾಸಕ ಎಸ್ ಅಂಗಾರ ಅವರಿಗೆ ಸಚಿವ ಸ್ಥಾನ ಸಿಗದೇ ಇರುವ ಬಗ್ಗೆ ವ್ಯಾಪಕ ಅಸಮಾಧಾನ ವ್ಯಕ್ತಪಡಿಸಿದ್ದ ಸುಳ್ಯ ಬಿಜೆಪಿ ಈಗ ಶಾಂತವಾಗಿದೆಯೇ ? ಎಸ್ ಅಂಗಾರ ಅವರಿಗೆ ಮುಂದಿನ ಸಚಿವ ಹಂತದ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ಅಥವಾ ಪ್ರಮುಖವಾದ ನಿಗಮದ ಹುದ್ದೆ ನೀಡುವ ಭರವಸೆಯನ್ನು ಪಕ್ಷದ ಹಿರಿಯರು ನೀಡಿದ್ದು ಈ ಮೂಲಕ ಸುಳ್ಯ ಬಿಜೆಪಿ ಪ್ರಮುಖರನ್ನು ಸಮಾಧಾನ ಪಡಿಸಿರುವ ಬಗ್ಗೆ ಮೂಲಗಳು ಮಾಹಿತಿ ನೀಡಿವೆ.
ಬಿಜೆಪಿ ರಾಜ್ಯಾಧ್ಯಕ್ಷರಾಗಿ ಸುಳ್ಯ ವಿಧಾನ ಸಭಾ ಕ್ಷೇತ್ರದ ನಂಟು ಹೊಂದಿರುವ ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲು ಅವರು ಘೋಷಣೆಯಾದ ಬೆನ್ನಲ್ಲೇ ಅವರದೇ ತವರು ಕ್ಷೇತ್ರದ ಅಸಮಾಧಾನ ಶಮನ ಮಾಡಲು ತಕ್ಷಣವೇ ಮಾತುಕತೆ ನಡೆಸಿದ್ದು ದಕ್ಷಿಣ ಕನ್ನಡ ಜಿಲ್ಲೆಯಿಂದ ಮುಂದಿನ ಹಂತದ ಸಚಿವ ಸಂಪುಟ ವಿಸ್ತರಣೆಯ ವೇಳೆ ಅಂಗಾರ ಅವರಿಗೆ ಸಚಿವ ಸ್ಥಾನ ಅಥವಾ ಪ್ರಮುಖ ನಿಮಗದ ಹುದ್ದೆ ನೀಡುವ ಭರವಸೆಯನ್ನು ಪಕ್ಷದ ಹಿರಿಯರು ನೀಡಿದ್ದಾರೆ ಎಂದು ನಂಬಲರ್ಹ ಮೂಲಗಳು ತಿಳಿಸಿವೆ. ಇದರ ಜೊತೆಗೆ ಅಸಮಾಧಾನದ ಬಗ್ಗೆ ಯಾವುದೇ ಹೇಳಿಕೆಗಳನ್ನು ಮಾಧ್ಯಮಗಳ ಮೂಲಕ ನೀಡಬಾರದು ಎಂದೂ ಸ್ಪಷ್ಟವಾದ ಸೂಚನೆ ನೀಡಿದ್ದು , ಪಕ್ಷದ ಒಳಗಿನ ಆಂತರಿಕ ಸಂಗತಿಗಳನ್ನು , ಅನಗತ್ಯವಾಗಿ ಅಭಿಪ್ರಾಯಗಳನ್ನು ಮಾಧ್ಯಮಗಳ ಮೂಲಕ ಹಂಚಿ ಗೊಂದಲ ಸೃಷ್ಟಿಸಿದರೆ ಯಾವುದೇ ಹುದ್ದೆ ಸಿಗುವುದೂ ಕಷ್ಟವಾಗಬಹುದು ಎಂಬ ಖಡಕ್ ಸೂಚನೆ ಲಭ್ಯವಾಗಿದೆ ಎಂದು ಮೂಲಗಳು ತಿಳಿಸಿವೆ.
ಮುಂದಿನ 24 ಗಂಟೆಗಳಲ್ಲಿ ದೆಹಲಿಯನ್ನು ಮುಂಗಾರು ಆವರಿಸುವ ಸಾಧ್ಯತೆಯಿದೆ. ಎರಡು ದಿನಗಳ ಹಿಂದೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಬಲಿತ ಹಲಸಿನ ಕಾಯಿ ಬ್ರೇಡ್ ರೋಲ್ : ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ…
ಪರಿಸರಕ್ಕೆ ಸಂಬಂಧಿಸಿದ ವಿವಿಧ ವಿಷಯಗಳಲ್ಲಿ ಸರ್ಕಾರ ಬೇಜಾವಾಬ್ದಾರಿ ತೋರಿದೆ ಎಂದು ಲೇಖಕ ಅರವಿಂದ್…
ಕಣ್ಣೂರು-ಬೆಂಗಳೂರು ರೈಲು ತಡವಾಗಿ ಆಗಮಿಸುತ್ತಿದ್ದು ರೈಲು ಪ್ರಯಾಣಿಕರಿಗೆ ಸಮಸ್ಯೆಯಾಗುತ್ತಿದೆ. ಹೀಗಾಗಿ ತಕ್ಷಣವೇ ಇಲಾಖೆ…
ಉಳ್ಳಾಲ ಪ್ರದೇಶದಲ್ಲಿ ಈ ಬಾರಿಯೂ ಕಡಲುಕೊರೆತ ಆರಂಭವಾಗಿದೆ. ಈ ಪ್ರದೇಶಕ್ಕೆ ವಿಧಾನಸಭಾ ಸ್ಪೀಕರ್…