ಸುಳ್ಯದ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಕಿಂಡಿಅಣೆಕಟ್ಟು – ಯು.ಟಿ.ಖಾದರ್ ಭರವಸೆ

June 1, 2019
8:30 PM

ಸುಳ್ಯ: ಸುಳ್ಯದ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಲು ಶಾಶ್ವತ ಯೋಜನೆಗೆ ಪಶ್ಚಿಮ ವಾಹಿನಿ ಯೋಜನೆಯಲ್ಲಿ ಸೇರ್ಪಡೆ ಮಾಡಿ ಪಯಸ್ವಿನಿ ನದಿಗೆ ಕಿಂಡಿ ಅಣೆಕಟ್ಟು ನಿರ್ಮಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.

Advertisement
Advertisement
Advertisement

ಪ್ರಕೃತಿ ವಿಕೋಪ ನಿರ್ವಹಣೆ ಮತ್ತು ಕುಡಿಯುವ ನೀರಿನ ಸಮಸ್ಯೆಯ ಪರಿಹಾರ ಕುರಿತು ಚರ್ಚಿಸಲು ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಶನಿವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

Advertisement

ಸುಳ್ಯ ನಗರಕ್ಕೆ ಶಾಶ್ವತ ಕುಡಿಯುವ ನೀರಿನ ಯೋಜನೆ ರೂಪಿಸಲು ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ಹಲವು ಬಾರಿ ಪ್ರಸ್ತಾವನೆ ಸಲ್ಲಿಸಲಾಗಿದ್ದರೂ ಸರಕಾರದಿಂದ ಅನುಮೋದನೆ ಸಿಕ್ಕಿಲ್ಲ ಎಂದು ಶಾಸಕ ಎಸ್.ಅಂಗಾರ ಮತ್ತು ಇತರ ಜನಪ್ರತಿನಿಧಿಗಳು ಹೇಳಿದರು. ಈ ಕುರಿತು ಚರ್ಚೆ ನಡೆದಾಗ ಪಶ್ಚಿಮವಾಹಿನಿ ಯೋಜನೆಯಲ್ಲಿ ಸೇರ್ಪಡೆಗೆ ಪ್ರಸ್ತಾವನೆ ಸಲ್ಲಿಸಲು ಸೂಚಿಸಿದರು.

ನಗರದಲ್ಲಿ ಶುದ್ಧೀಕರಿಸದ ಕಲುಷಿತ ನೀರು ಸರಬರಾಜಾಗುತಿದೆ ಎಂದು ನ.ಪಂ.ಸದಸ್ಯ ಎಂ.ವೆಂಕಪ್ಪ ಗೌಡ ಹೇಳಿದರು. ಹಳೆಯ ಕಾಲದ ಶುದ್ಧೀಕರಣ ಘಟಕ ಆದ ಕಾರಣ ಸಮರ್ಪಕವಾಗಿ ನೀರು ಶುದ್ಧೀಕರಣ ಮಾಡಲು ಸಾಧ್ಯವಾಗುವುದಿಲ್ಲ ಎಂದು ಅಧಿಕಾರಿಗಳು ಹೇಳಿದರು. ನೀರು ಶುದ್ಧೀಕರಣ ಘಟಕದ ನವೀಕರಣಕ್ಕೆ ಪ್ರಸ್ತಾವನೆ ಸಲ್ಲಿಸಲು ಸಚಿವರು ಸೂಚಿಸಿದರು. ನಗರ ಮತ್ತು ಗ್ರಾಮಾಂತರದಲ್ಲಿ ಕುಡಿಯುವ ನೀರಿನ ಸರಬರಾಜಿನ ಕುರಿತು ಮಾಹಿತಿ ಪಡೆದ ಸಚಿವರು ಸಮರ್ಪಕವಾಗಿ ನೀರು ಸರಬರಾಜು ಮಾಡುವಂತೆ ಸೂಚನೆ ನೀಡಿದರು.ಶಾಲೆಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

Advertisement

ನಗರದಲ್ಲಿ ದಾರಿದೀಪಗಳು ಹಾಳಾಗಿದೆ ಇದರ ಬದಲಾವಣೆಗೆ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ವೆಂಕಪ್ಪ ಗೌಡ ಆಗ್ರಹಿಸಿದಾಗ ಎಷ್ಟು ಲೈಟ್ ಬದಲಾವಣೆಯ ಅಗತ್ಯವಿದೆ ಎಂಬುದರ ಪಟ್ಟಿ ತಯಾರಿಸಿ ಕಳಿಸಿ ಅನುಮತಿ ಪಡೆಯಲು ಸಚಿವರು ಸೂಚಿಸಿದರು.

ಪ್ರಕೃತಿ ವಿಕೋಪ ಉಂಟಾದರೆ ಸರಿಯಾದ ವರದಿ ತ್ವರಿತ ಪರಿಹಾರ ನೀಡಲು ಸೂಚನೆ:

Advertisement

ಅತಿವೃಷ್ಠಿ ಮತ್ತು ಪ್ರಕೃತಿ ವಿಕೋಪ ಉಂಟಾಗಿ ನಷ್ಟ ಆದ ಕಡೆಗಳಿಗೆ ಅಧಿಕರಿಗಳು ಕೂಡಲೇ ಭೇಟಿ ನೀಡಿ ಸಮರ್ಪಕವಾದ ವರದಿ ಕೊಡಬೇಕು ಮತ್ತು ತ್ವರಿತವಾಗಿ ಪರಿಹಾರ ವಿತರಣೆ ಆಗಬೇಕು ಎಂದು ಸಚಿವರು ಸೂಚನೆ ನೀಡಿದರು.

ಭಾಗಷಃ ಹಾನಿ ಎಂಬ ವರದಿ, ಅಸಮರ್ಪಕ ವರದಿ ನೀಡಿ ಸಂತ್ರಸ್ತರಾದದವರಿಗೆ ಅನ್ಯಾಯ ಆಗದಂತೆ ಎಚ್ಚರ ವಹಿಸಿ ಎಂದು ಹೇಳಿದರು. ಈ ಹಿಂದೆ ಗುಡ್ಡ ಕುಸಿತ ಅಥವಾ ಪ್ರಾಕೃತಿಕ ವಿಕೋಪ ಉಂಟಾದ ಕಡೆಗಳಲ್ಲಿ ಮಳೆಗಾಲಕ್ಕೆ ಮುನ್ನವೇ ಮುಂಜಾಗೃತಾ ಕ್ರಮ ವಹಿಸಿ ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸನ್ನದ್ಧರಾಗಿರಬೇಕು ಎಂದು ಅವರು ಸೂಚಿಸಿದರು.ಪ್ರತಿ ಗ್ರಾಮ ಮಟ್ಟದಲ್ಲಿ ಪ್ರಕೃತಿ ವಿಕೋಪ ರಕ್ಷಣಾ ತಂಡವನ್ನು ರಚನೆ ಮಾಡಿರುವುದಾಗಿ ತಹಶೀಲ್ದಾರ್ ಎನ್.ಎ.ಕುಂಞ ಅಹಮ್ಮದ್ ಸಭೆಗೆ ತಿಳಿಸಿದರು.

Advertisement

ಸೊಳ್ಳೆಗಳ ನಿರ್ಮೂಲನೆ ಮಾಡಲು ಕ್ರಮ ಕೈಗೊಳ್ಳಲಾಗುತಿದೆ ಮತ್ತು ಫಾಗಿಂಗ್ ನಡೆಸಲಾಗುವುದು ಎಂದು ಆರೋಗ್ಯ ಇಲಾಖೆ ಹೇಳಿದಾಗ ಫಾಗಿಂಗ್ ಸಮರ್ಪಕವಾಗಿ ಆಗುತ್ತಾ ಇಲ್ಲ ಎಂದು ಜಿ.ಪಂ.ಸದಸ್ಯ ಎಸ್.ಎನ್.ಮನ್ಮಥ, ನ.ಪಂ.ಸದಸ್ಯ ಎಂ.ವೆಂಕಪ್ಪ ಗೌಡ ಹೇಳಿದರು.

ಕೊಳೆ ರೋಗಕ್ಕೆ ಅರ್ಧದಷ್ಟು ಮಂದಿಗೆ ಮಾತ್ರ ಪರಿಹಾರ ಬಂದಿದೆ ಉಳಿದದು ವಿತರಣೆಗೆ ಕ್ರಮ ಕೈಗೊಳ್ಳಬೇಕು ಎಂದು ಎಸ್.ಎನ್.ಮನ್ಮಥ ಹೇಳಿದರು ಕುರಿತು ಕ್ರಮ ಕೈಗೊಳ್ಳುವುದಾಗಿ ಸಚಿವರು ಹೇಳಿದರು.

Advertisement

ಸಭೆಯಲ್ಲಿ ತಾ.ಪಂ.ಅಧ್ಯಕ್ಷ ಚನಿಯ ಕಲ್ತಡ್ಕ, ತಾ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಧುಕುಮಾರ್, ಜಿ.ಪಂ.ಸದಸ್ಯರಾದ ಪುಷ್ಪಾವತಿ ಬಾಳಿಲ, ನ.ಪಂ.ಸದಸ್ಯರಾದ ಬಾಲಕೃಷ್ಣ ಭಟ್ ಕೊಡೆಂಕೇರಿ, ಡೇವಿಡ್ ಧೀರಾ ಕ್ರಾಸ್ತಾ, ಶರೀಫ್ ಕಂಠಿ, ಪ್ರಮುಖರಾದ ಟಿ.ಎಂ.ಶಹೀದ್, ಎಂ.ಸದಾಶಿವ, ಸಂತೋಷ್ ಜಾಕೆ, ಭಾಗೀರಥಿ ಮುರುಳ್ಯ, ಶಾಫಿ ಕುತ್ತಮೊಟ್ಟೆ, ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದಕ್ಷಿಣ ಕನ್ನಡ ಸ್ವಾತಂತ್ರ್ಯ ಹೋರಾಟಗಾರರು | ತಾಲೂಕು ಮಟ್ಟದ ಭಾಷಣ ಸ್ಪರ್ಧೆ
October 23, 2024
8:44 AM
by: ದ ರೂರಲ್ ಮಿರರ್.ಕಾಂ
ನ.2 ರಿಂದ ಕಲರವ | ಹಕ್ಕಿ-ವನ್ಯ ಜೀವಿ – ಪಕೃತಿ ಛಾಯಾಚಿತ್ರ ಪ್ರದರ್ಶನ |
October 23, 2024
8:32 AM
by: ದ ರೂರಲ್ ಮಿರರ್.ಕಾಂ
ಡಾಕ್ಟರೇಟ್ ಪದವಿ ಪಡೆದ ಪುತ್ತೂರಿನ ವಿವೇಕಾನಂದ ಪ್ರಾಧ್ಯಾಪಕಿ ವಿದ್ಯಾ ಎಸ್
October 3, 2024
12:58 PM
by: ದ ರೂರಲ್ ಮಿರರ್.ಕಾಂ
ಅಖಿಲ ಹವ್ಯಕ ಮಹಾಸಭೆ | ಡಾ.ಕಜೆ 10 ನೆಯ ಬಾರಿಗೆ ಅಧ್ಯಕ್ಷರಾಗಿ ಪುನರಾಯ್ಕೆ | ಡಿ.27 ರಿಂದ ತೃತೀಯ ವಿಶ್ವಹವ್ಯಕ ಸಮ್ಮೇಳನ |
September 24, 2024
3:50 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror