ಸುಳ್ಯ: ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಸುಳ್ಯ ತಾಲೂಕಿಗೆ ಒಲಿದು ಬಂದಿದೆ. ಆಲೆಟ್ಟಿ ದ.ಕ.ಜಿ.ಪ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಪದ್ಮಾ.ಡಿ ಅವರು ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಸೆ.5 ರಂದು ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಶಿಕ್ಷಕರ ದಿನಾಚರಣೆಯಲ್ಲಿ ಅವರು ಪ್ರಶಸ್ತಿ ಸ್ವೀಕರಿಸಲಿದ್ದಾರೆ.
36 ವರ್ಷಗಳ ಶಿಕ್ಷಕ ವೃತ್ತಿಯಲ್ಲಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ನಾಗಪಟ್ಟಣ, ಸ.ಹಿ.ಪ್ರಾ ಶಾಲೆ ಪಡ್ಪಿನಂಗಡಿ, ಸ.ಹಿ.ಪ್ರಾ ಶಾಲೆ ಮಂಡೆಕೋಲು ಶಾಲೆಯಲ್ಲಿ ಕರ್ತವ್ಯ ನಿರ್ವಹಿಸಿ ಪ್ರಸ್ತುತ ಸ.ಹಿ.ಪ್ರಾ ಶಾಲೆ ಆಲೆಟ್ಟಿ ಶಾಲೆಯಲ್ಲಿ ಮುಖ್ಯ ಶಿಕ್ಷಕಿಯಾಗಿದ್ದಾರೆ. ಕರ್ತವ್ಯ ನಿರ್ವಹಿಸಿದ ಶಾಲೆಗಳಲ್ಲಿ ಸಾರ್ವಜನಿಕ ಸಹಭಾಗಿತ್ವದೊಂದಿಗೆ ಗುಣಾತ್ಮಕ ಶಿಕ್ಷಣಕ್ಕೆ ಒತ್ತು ನೀಡಿದ ಮತ್ತು ಶಾಲೆಯ ಭಾತಿಕ ಸೌಕರ್ಯವನ್ನು ಹೆಚ್ಚಿಸಲು ನಡೆಸಿದ ಸೇವೆಯನ್ನು ಪರಿಗಣಿಸಿ ಅವರನ್ನು ರಾಜ್ಯಮಟ್ಟದ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಮಂಡೆಕೋಲು ಮತ್ತು ಆಲೆಟ್ಟಿ ಶಾಲೆಯಲ್ಲಿ ಬಾಲವನವನ್ನು ನಿರ್ಮಿಸಿದ್ದಾರೆ. ಅಲ್ಲದೆ ಶಾಲೆಗಳಲ್ಲಿ ಇವರ ನೇತೃತ್ವದಲ್ಲಿ ಸ್ಮಾರ್ಟ್ ಕ್ಲಾಸ್‍ಗಳ ನಿರ್ಮಾಣ, ಶಾಲೆಗಳಲ್ಲಿ ಆಕರ್ಷಕ ದ್ವಾರಗಳ ನಿರ್ಮಾಣ, ಶಾಲೆಗಳಲ್ಲಿಟಿ.ವಿ, ಕಂಪ್ಯೂಟರ್, ಡಿಶ್, ಪೀಠೋಪಕರಣಗಳ ಕೊಡುಗೆ, ಗ್ರಂಥಾಲಯ ಕೊಠಡಿ, ಸೈಕಲ್ ಶೆಡ್, ಆವರಣ ಗೋಡೆ, ಶೌಚಾಲಯಗಳ ನಿರ್ಮಾಣ ನಡೆಸಲಾಗಿದೆ.ಇವರ ಶಾಲೆಯಲ್ಲಿ ನಲಿಕಲಿ ತರಗತಿಗಳಿಗೆ ಉತ್ತಮ ವ್ಯವಸ್ಥೆ ಮಾಡಿದ್ದಾರೆ. ಉತ್ತಮ ಶಿಕ್ಷಣವನ್ನು ನೀಡುವುದರ ಜೊತೆಗೆ ಶಾಲೆಯ ಮೂಲಭೂತ ಅಭಿವೃದ್ಧಿಗೆ ಇವರು ನೀಡಿದ ಕೊಡುಗೆಯನ್ನು ಪರಿಗಣಿಸಿ ರಾಜ್ಯಮಟ್ಟದ ಪ್ರಶಸ್ತಿ ಇವರನ್ನು ಅರಸಿ ಬಂದಿದೆ. ಪದ್ಮಾ ಅವರ ಪತಿ ಪಿ.ಎಂ.ರಂಗನಾಥ್ ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದಲ್ಲಿ ವ್ಯವಸ್ಥಾಪಕರಾಗಿದ್ದಾರೆ. ಮಕ್ಕಳು ಡಾ.ಸೋನಿಕಾ ಮತ್ತು ಡಾ.ಸುಲೇಖಾ ವೈದ್ಯಕೀಯ ವಿದ್ಯಾರ್ಥಿಗಳು.
25.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಅಡಿಕೆ ಬೆಳೆಯಲ್ಲಿ ಪೋಷಕಾಂಶಗಳ ನಿರ್ವಹಣೆಯ ಬಗ್ಗೆ ಡಾ.ಭವಿಷ್ಯ ಅವರು ನೀಡಿರುವ ಮಾಹಿತಿ ಇಲ್ಲಿದೆ..(ಸಂಪೂರ್ಣ…
ಅಡಿಕೆ ಎಲೆಚುಕ್ಕಿ ರೋಗ ನಿರ್ವಹಣೆ ಹೇಗೆ..? ಕೃಷಿ ವಿಚಾರಗೋಷ್ಟಿಯಲ್ಲಿ ಮಾತನಾಡಿರುವ ಆಡಿಯೋ ಇಲ್ಲಿದೆ..
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…