ಸುಳ್ಯ: ಸುಳ್ಯದ ಸಬ್ ರಿಜಿಸ್ಟ್ರಾರ್ ಕಚೇರಿಯ ಅಧಿಕಾರಿ ಕೇಶವಮೂರ್ತಿ ಹಲವಾರು ಸಮಯಗಳಿಂದ ಲಂಚ , ಭ್ರಷ್ಟಾಚಾರದಲ್ಲಿ ತೊಡಗಿಕೊಂಡಿದ್ದರೂ ಯಾವುದೇ ಕ್ರಮ ಆಗದ ಹಿನ್ನೆಲೆಯಲ್ಲಿ ಸುಳ್ಯನ್ಯೂಸ್.ಕಾಂ ವಿಡಿಯೋ ಸಹಿತ ವರದಿ ಮಾಡಿತ್ತು. ಅದಾದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದೀಗ ಸುಳ್ಯಕ್ಕೆ ಮಂಗಳೂರಿನಿಂದ ಸುಧೀಂದ್ರ ಎಂಬವರು ಅಧಿಕಾರ ಪಡೆದಿದ್ದಾರೆ.
ಸುಳ್ಯದಲ್ಲಿ ಸಬ್ ರಿಜಿಸ್ಟ್ರಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಬಂಟ್ವಾಳ ಸಬ್ ರಿಜಿಸ್ಟ್ರಾರ್ ಕಚೇರಿಯ ದ್ವಿತೀಯ ದರ್ಜೆಯ ಸಹಾಯಕ ಕೇಶವಮೂರ್ತಿ ಅವರು ಸುಳ್ಯದಲ್ಲಿ ಜನಸಾಮಾನ್ಯರಿಂದ ತೊಡಗಿ ಯೋಧರೊಬ್ಬರಿಂದಲೂ ಇ ಸಿ ಗೆ ಹಣ ಪಡೆದಿದ್ದ ಬಗ್ಗೆ ಆರೋಪ ಇತ್ತು. ಈ ಬಗ್ಗೆ ಸಾರ್ವಜನಿಕರು ಹಲವು ಬಾರಿ ಮಾತನಾಡಿದ್ದರೂ ಯಾವುದೇ ಕ್ರಮ ಆಗಿರಲಿಲ್ಲ. ಇದರಿಂದ ರೋಸಿ ಹೋಗಿದ್ದ ವ್ಯವಸ್ಥೆ ಬಗ್ಗೆ ಕೃಷಿರೊಬ್ಬರು ಸುಳ್ಯನ್ಯೂಸ್.ಕಾಂ ಮಾಹಿತಿ ನೀಡಿದ್ದರು. ಹೀಗಾಗಿ ವಿಡಿಯೋ ಸಹಿತ ವರದಿ ಮಾಡಿತ್ತು. ಅದಾದ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ ಮಾಧ್ಯಮಗಳಲ್ಲಿ ಮತ್ತು ಆನ್ಲೈನ್ ಮಾಧ್ಯಮಗಳಲ್ಲಿ ಪತ್ರಿಕೆಗಳಲ್ಲಿ ವರದಿಯಾಗಿತ್ತು.
ಈ ಬಗ್ಗೆ ಶಾಸಕ ಅಂಗಾರ , ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ ಸೇರಿದಂತೆ ಜನಪ್ರತಿನಿಧಿಗಳು, ಸಾಮಾಜಿಕ ಸಂಘಟನೆಗಳು ಅಧಿಕಾರಿ ವಿರುದ್ಧ ಸೂಕ್ತ ಕ್ರಮಕ್ಕೆ ಒತ್ತಾಯ ಮಾಡಿದ್ದರು. ಸದ್ಯ ಕೇಶವ ಮೂರ್ತಿ ಬಂಟ್ವಾಳದಲ್ಲಿ ಕೆಲಸ ನಡೆಸುತ್ತಿದ್ದು ಕಡ್ಡಾಯ ರಜೆಯ ಮೂಲಕ ತೆರಳಲು ಆದೇಶದ ಸೂಚನೆ ಇದೆ. ಈ ನಡುವೆ ಭ್ರಷ್ಟಾಚಾರ ನಿಗ್ರಹ ದಳ ಕೇಸು ದಾಖಲಿಸಿಕೊಳ್ಳಲಿದೆ.
ಸುಳ್ಯದಲ್ಲಿ ಇನ್ನೂ ಹಲವು ಇಲಾಖೆಗಳಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಆರೋಪ ಇದೆ. ಲಂಚ ನೀಡದೆ ಕಡತಗಳು ಮುಂದುವರಿಯುವುದಿಲ್ಲ, ಹಾಗೂ ಸತಾಯಿಸಲಾಗುತ್ತಿದೆ ಎಂಬ ಆರೋಪ ಇದೆ. ಈ ಬಗ್ಗೆ ಕೃಷಿಕರು, ಸಾರ್ವಜನಿಕರು ಎಸಿಬಿ ಅಧಿಕಾರಿಗಳಿಗೆ ಮಾಹಿತಿ ನೀಡಬಹುದಾಗಿದೆ.
ಕೃಷಿಗಾಗಿ, ಕೃಷಿ ಉಳಿಸುವುದಕ್ಕಾಗಿ ಸುರಂಗ ಕೊರೆದು ನೀರು ಹರಿಸಿದ ವಿಶೇಷ ಸಾಧನೆಯನ್ನು ಮಾಡಿದ್ದಾರೆ…
ದೇಶಾದ್ಯಂತ ಅಳಿವಿನಂಚಿಗೆ ತಲುಪಿರುವ ಗುಬ್ಬಚ್ಚಿ ಸಂಕುಲದ ರಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು…
ಸ್ವಾವಲಂಬನೆಯ ಜೀವನ ಕಟ್ಟಿಕೊಳ್ಳುತ್ತಿರುವ ಅನೇಕ ಮಹಿಳಾ ಉದ್ಯಮಿದಾರರಿಗೆ ಎನ್ಆರ್ ಎಲ್ಎಮ್ ಯೋಜನೆಯು ಸ್ಪೂರ್ತಿಯ…
ಕೊಡಗು ಜಿಲ್ಲೆಯಲ್ಲಿ ಅಕ್ರಮ ಲಾಟರಿ, ಇತರೆ ರಾಜ್ಯದ ಲಾಟರಿಗಳು, ಮಟ್ಕಾಗೆ ಪೂರ್ಣ ಪ್ರಮಾಣದಲ್ಲಿ…
ಹಾನಿಯಾದ ಮನೆ ಮತ್ತು ಬೆಳೆಗಳಿಗೆ ತ್ವರಿತವಾಗಿ ಪರಿಹಾರ ನೀಡಿ, ಯಾವುದೇ ಪ್ರಕರಣಗಳು ಬಾಕಿ…
ಭಾರತದ ಸ್ವಚ್ಛತಾ ಅಭಿಯಾನಕ್ಕೆ ವೇಗ ದೊರೆಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.…