ಸುಳ್ಯ: ಸುಳ್ಯದ ನೆಹರು ಮೆಮೋರಿಯಲ್ ಪ.ಪೂ ಕಾಲೇಜಿನಲ್ಲಿ ಪ್ರಥಮ ಪಿಯುಸಿಗೆ ದಾಖಲುಗೊಂಡ ವಿದ್ಯಾರ್ಥಿಗಳಿಗೆ ಪ್ರಾರಂಭೋತ್ಸವ ಕಾರ್ಯಕ್ರಮ ನಡೆಯಿತು.
ಎ.ಓ.ಎಲ್.ಇಯ ನಿರ್ದೇಶಕಿ ಶೋಭಾ ಚಿದಾನಂದ ದೀಪ ಬೆಳಗಿಸಿ ಉದ್ಘಾಟಿಸಿದರು. ಪುತ್ತೂರು ವಿವೇಕಾನಂದ ಕಾಲೇಜಿನ ಸ್ನಾತಕೋತ್ತರ ಕೇಂದ್ರದ ಸಂಯೋಜಕಿ ವಿಜಯ ಸರಸ್ವತಿ ಮುಖ್ಯ ಅತಿಥಿಯಾಗಿದ್ದರು. ಕೆ.ವಿ.ಜಿ ಮೆಡಿಕಲ್ ಕಾಲೇಜಿನ ಆಡಳಿತಾಧಿಕಾರಿ ಜಗದೀಶ್ ಅಡ್ತಲೆ, ಕ್ಯಾಂಪಸ್ ವಿದ್ಯಾರ್ಥಿ ಕ್ಷೇಮಾಧಿಕಾರಿ ಪ್ರೊ.ಡಿ.ಜವರೇ ಗೌಡ , ಎನ್ನೆಂಸಿ ಗೌರವ ಶೈಕ್ಷಣಿಕ ಸಲಹೆಗಾರ ಪ್ರೊ.ಎಂ.ಬಾಲಚಂದ್ರ ಗೌಡ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಎಸ್.ಎಸ್.ಎಲ್.ಸಿ ಯಲ್ಲಿ ಅತ್ಯಧಿಕ ಅಂಕಗಳಿಸಿ ಪ್ರಥಮ ಪಿಯುಸಿಗೆ ದಾಖಲುಗೊಂಡ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.
ವಿದ್ಯಾರ್ಥಿನಿಯರಾದ ನಂದಿತ, ಚರೀಷ್ಮ, ಅಕ್ಷತ, ಅನಘ, ವಿಸ್ಮಿತ ಪ್ರಾರ್ಥಿಸಿದರು. ಕಾಲೇಜಿನ ಪ್ರಾಂಶುಪಾಲೆ ಹರಿಣಿ ಪುತ್ತೂರಾಯ ಸ್ವಾಗತಿಸಿ, ವಿದ್ಯಾರ್ಥಿ ಕ್ಷೇಮಾಧಿಕಾರಿ ಲಕ್ಷ್ಮಣ್ ಏನೇಕಲ್ ವಂದಿಸಿದರು. ಉಪನ್ಯಾಸಕರಾದ ದಾಮೋದರ ಪಿ, ಸಾವಿತ್ರಿ ಕೆ, ಬೇಬಿ ವಿದ್ಯಾ ಪಿ.ಬಿ ಕಾರ್ಯಕ್ರಮ ನಿರೂಪಿಸಿದರು.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…