ಸುಳ್ಯ: ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಅಂಗವಾಗಿ ಶನಿವಾರ ರಾತ್ರಿ ಶ್ರೀ ಚೆನ್ನಕೇಶವ ದೇವರ ವೈಭವದ ರಥೋತ್ಸವ ನಡೆಯಿತು. ಸಾವಿರಾರು ಮಂದಿ ಭಕ್ತರ ಕಂಠದಿಂದ ಹೊರ ಹೊಮ್ಮಿದ ಚೆನ್ನಕೇಶವನಿಗೆ ಗೋವಿಂದ.. ಗೋವಿಂದ ಜಯ ಘೋಷದ ಮಧ್ಯೆ ರಥೋತ್ಸವ ನಡೆಯಿತು.
ದೇವಸ್ಥಾನಕ್ಕೆ ಕಲ್ಕುಡ ಭಂಡಾರ ಆಗಮಿಸಿದ ಬಳಿಕ ವಿಶೇಷ ಪೂಜೆ ಮತ್ತು ಉತ್ಸವ ಬಲಿ ನಡೆದು ಚೆನ್ನಕೇಶವ ದೇವರನ್ನು ರಥದಲ್ಲಿ ಕುಳ್ಳಿರಿಸಲಾಯಿತು. ರಥದಲ್ಲಿ ವಿಶೇಷ ಪೂಜೆಯ ಬಳಿಕ ರಥವು ರಥಬೀದಿಯಲ್ಲಿ ಸಾಗಿತು. ಕಲ್ಕುಡ ದೈವ ಮತ್ತು ಕಾನತ್ತಿಲ ದೈವದ ಕೋಲಗಳು ರಥೋತ್ಸವದ ಜೊತೆಯಲ್ಲಿ ಆಗಮಿಸಿತು. ಸಾವಿರಾರು ಭಕ್ತರ ಮುಗಿಲು ಮುಟ್ಟಿದ ಉದ್ಘಾರದ ಮಧ್ಯೆ ರಥಬೀದಿಯಲ್ಲಿ ಸಾಗಿ ಬಂದ ರಥವು ಮುಖ್ಯ ರಸ್ತೆಯ ದ್ವಾರದ ಬಳಿಯ ಕಟ್ಟೆಯ ಬಳಿಗೆ ಆಗಮಿಸಿತು.
ಚೆನ್ನಕೇಶವ ದೇವರನ್ನು ರಥದಿಂದ ಇಳಿಸಿ ಶೃಂಗರಿಸಿದ್ದ ಕಟ್ಟೆಯಲ್ಲಿ ಕುಳ್ಳಿರಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು. ಪೂಜೆ ನಡೆದು ಪ್ರಸಾದ ವಿತರಿಸಿದ ಬಳಿಕ ದೇವರು ರಥದಲ್ಲಿ ದೇವಾಲಯಕ್ಕೆ ಹಿಂತಿರುಗಿತು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel