ಸುಳ್ಯ ತಹಶೀಲ್ದಾರ್ ವರ್ಗಾವಣೆ ವಿರುದ್ಧ ಭುಗಿಲೆದ್ದ ಆಕ್ರೋಶ.

July 22, 2019
3:17 PM

ಸುಳ್ಯ: ಸುಳ್ಯ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಅವರ ವರ್ಗಾವಣೆ ವಿರುದ್ಧ ಆಕ್ರೋಶ ಭುಗಿಲೆದ್ದಿದೆ. ವರ್ಗಾವಣೆ ವಿರೋಧಿಸಿ ಅಂಬೇಡ್ಕರ್ ತತ್ವ ರಕ್ಷಣಾ ವೇದಿಕೆ- ಕರ್ನಾಟಕ ಇದರ ವತಿಯಿಂದ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ವೇದಿಕೆಯ ರಾಜ್ಯಾಧ್ಯಕ್ಷ ಗಿರಿಧರ ನಾಯ್ಕ ಮಾತನಾಡಿ ಕೆಲವೇ ತಿಂಗಳಲ್ಲಿ ಜನಪರ ಅಧಿಕಾರಿ ಎಂದು ಹೆಸರು ಗಳಿಸಿರುವ ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿಯನ್ನು ರಾಜಕೀಯ ಒತ್ತಡದಿಂದ ವರ್ಗಾವಣೆ ಮಾಡಿಸಲಾಗಿದೆ. ಇದರ ವಿರುದ್ಧ ಅಹೋರಾತ್ರಿ ಧರಣಿ ನಡೆಸಲಾಗುವುದು. ಸಹಾಯಕ ಕಮೀಷನರ್ ಅಥವಾ ಜಿಲ್ಲಾಧಿಕಾರಿ ಸುಳ್ಯಕ್ಕೆ ಬಂದು ವರ್ಗಾವಣೆ ಹಿಂಪಡೆಯುತ್ತೇವೆ ಎಂದು ಭರವಸೆ ನೀಡದಿದ್ದರೆ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಪಟ್ಟು ಹಿಡಿದರು. ಮಳೆ, ಪ್ರಾಕೃತಿಕ ವಿಕೋಪದಿಂದ ಜನರು ತತ್ತರಿಸಿರುವ ಈ ಸಂದರ್ಭದಲ್ಲಿ ತಾಲೂಕು ದಂಡಾಧಿಕಾರಿಯನ್ನು ವರ್ಗಾವಣೆ ಮಾಡಿರುವುದು ಅಕ್ಷಮ್ಯ ಎಂದು ಹೇಳಿದರು.
ಬಳಿಕ ದೂರವಾಣಿ ಮೂಲಕ ಸಹಾಯಕ ಕಮೀಷನರ್ ಅವರನ್ನು ಸಂಪರ್ಕಿಸಿ ಮಾತುಕತೆ ನಡೆಸಿ ಅವರು ನೀಡಿದ ಭರವಸಯೆ ಮೇರೆಗೆ ಪ್ರತಿಭಟನೆ ಹಿಂತೆಗೆದುಕೊಳ್ಳಲಾಯಿತು.
ಅಂಬೇಡ್ಕರ್ ತತ್ವ ರಕ್ಷಣಾ ವೇದಿಕೆಯ ಸುಳ್ಯ ತಾಲೂಕು ಅಧ್ಯಕ್ಷ ಸುಂದರ ಪಾಟಾಜೆ, ವಕೀಲ ಪ್ರದೀಪ್ ಕುಮಾರ್ ಕೆ.ಎಲ್, ಮುಖಂಡರಾದ ಕೆ.ಕೆ.ನಾಯ್ಕ್, ವಿಠಲ ರೈ ಪೋಲಾಜೆ, ಕುಶಾಲಪ್ಪ, ವಿಜಯ ಪಾಟಾಜೆ, ಪರಮೇಶ್ವರ, ವಕೀಲ ಪ್ರದೀಪ್ ಕುಮಾರ್ ಕೆ.ಎಲ್. ಮಾತನಾಡಿದರು.

ವರ್ಗಾವಣೆಗೆ ರಾಜಕೀಯ ಒತ್ತಡ ಕಾರಣವೇ.?

ಸುಳ್ಯ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ವರ್ಗಾವಣೆಗೆ ರಾಜಕೀಯ ಒತ್ತಡ ಕಾರಣವೇ. ಹೀಗೊಂದು ಗುಮಾನಿ ಈಗ ಹಬ್ಬಿದೆ. ಪ್ರತಿಭಟನೆಯಲ್ಲಿ ಮಾತನಾಡಿದ ಅಂಬೇಡ್ಕರ್ ತತ್ವ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಗಿರಿಧರ ನಾಯ್ಕ ರಾಜಕೀಯ ಷಡ್ಯಂತ್ರದಿಂದ ತಹಶೀಲ್ದಾರ್ ವರ್ಗಾವಣೆ ಆಗಿದೆ ಎಂದು ಹೇಳಿದ್ದಾರೆ‌. ತಹಶೀಲ್ದಾರ್ ವರ್ಗಾವಣೆ ತಡೆ ಹಿಡಿಯದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಅವರು ಎಚ್ಚರಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಆಂಧ್ರಪ್ರದೇಶದ ಹೊಸ ಪ್ರಯೋಗ : ರೈತನ ತೋಟದಿಂದ ನೇರವಾಗಿ ಮನೆ ಬಾಗಿಲಿಗೆ ಕೃಷಿ ಉತ್ಪನ್ನ
May 28, 2026
7:20 AM
by: ದ ರೂರಲ್ ಮಿರರ್.ಕಾಂ
ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!
May 27, 2026
8:51 PM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ
May 27, 2026
8:15 PM
by: ಮಿರರ್‌ ಡೆಸ್ಕ್
ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ
May 27, 2026
8:07 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror