ಸುಳ್ಯ: ಸುಳ್ಯ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಅವರ ವರ್ಗಾವಣೆ ವಿರುದ್ಧ ಆಕ್ರೋಶ ಭುಗಿಲೆದ್ದಿದೆ. ವರ್ಗಾವಣೆ ವಿರೋಧಿಸಿ ಅಂಬೇಡ್ಕರ್ ತತ್ವ ರಕ್ಷಣಾ ವೇದಿಕೆ- ಕರ್ನಾಟಕ ಇದರ ವತಿಯಿಂದ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ವೇದಿಕೆಯ ರಾಜ್ಯಾಧ್ಯಕ್ಷ ಗಿರಿಧರ ನಾಯ್ಕ ಮಾತನಾಡಿ ಕೆಲವೇ ತಿಂಗಳಲ್ಲಿ ಜನಪರ ಅಧಿಕಾರಿ ಎಂದು ಹೆಸರು ಗಳಿಸಿರುವ ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿಯನ್ನು ರಾಜಕೀಯ ಒತ್ತಡದಿಂದ ವರ್ಗಾವಣೆ ಮಾಡಿಸಲಾಗಿದೆ. ಇದರ ವಿರುದ್ಧ ಅಹೋರಾತ್ರಿ ಧರಣಿ ನಡೆಸಲಾಗುವುದು. ಸಹಾಯಕ ಕಮೀಷನರ್ ಅಥವಾ ಜಿಲ್ಲಾಧಿಕಾರಿ ಸುಳ್ಯಕ್ಕೆ ಬಂದು ವರ್ಗಾವಣೆ ಹಿಂಪಡೆಯುತ್ತೇವೆ ಎಂದು ಭರವಸೆ ನೀಡದಿದ್ದರೆ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಪಟ್ಟು ಹಿಡಿದರು. ಮಳೆ, ಪ್ರಾಕೃತಿಕ ವಿಕೋಪದಿಂದ ಜನರು ತತ್ತರಿಸಿರುವ ಈ ಸಂದರ್ಭದಲ್ಲಿ ತಾಲೂಕು ದಂಡಾಧಿಕಾರಿಯನ್ನು ವರ್ಗಾವಣೆ ಮಾಡಿರುವುದು ಅಕ್ಷಮ್ಯ ಎಂದು ಹೇಳಿದರು.
ಬಳಿಕ ದೂರವಾಣಿ ಮೂಲಕ ಸಹಾಯಕ ಕಮೀಷನರ್ ಅವರನ್ನು ಸಂಪರ್ಕಿಸಿ ಮಾತುಕತೆ ನಡೆಸಿ ಅವರು ನೀಡಿದ ಭರವಸಯೆ ಮೇರೆಗೆ ಪ್ರತಿಭಟನೆ ಹಿಂತೆಗೆದುಕೊಳ್ಳಲಾಯಿತು.
ಅಂಬೇಡ್ಕರ್ ತತ್ವ ರಕ್ಷಣಾ ವೇದಿಕೆಯ ಸುಳ್ಯ ತಾಲೂಕು ಅಧ್ಯಕ್ಷ ಸುಂದರ ಪಾಟಾಜೆ, ವಕೀಲ ಪ್ರದೀಪ್ ಕುಮಾರ್ ಕೆ.ಎಲ್, ಮುಖಂಡರಾದ ಕೆ.ಕೆ.ನಾಯ್ಕ್, ವಿಠಲ ರೈ ಪೋಲಾಜೆ, ಕುಶಾಲಪ್ಪ, ವಿಜಯ ಪಾಟಾಜೆ, ಪರಮೇಶ್ವರ, ವಕೀಲ ಪ್ರದೀಪ್ ಕುಮಾರ್ ಕೆ.ಎಲ್. ಮಾತನಾಡಿದರು.
ವರ್ಗಾವಣೆಗೆ ರಾಜಕೀಯ ಒತ್ತಡ ಕಾರಣವೇ.?
ಸುಳ್ಯ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ವರ್ಗಾವಣೆಗೆ ರಾಜಕೀಯ ಒತ್ತಡ ಕಾರಣವೇ. ಹೀಗೊಂದು ಗುಮಾನಿ ಈಗ ಹಬ್ಬಿದೆ. ಪ್ರತಿಭಟನೆಯಲ್ಲಿ ಮಾತನಾಡಿದ ಅಂಬೇಡ್ಕರ್ ತತ್ವ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಗಿರಿಧರ ನಾಯ್ಕ ರಾಜಕೀಯ ಷಡ್ಯಂತ್ರದಿಂದ ತಹಶೀಲ್ದಾರ್ ವರ್ಗಾವಣೆ ಆಗಿದೆ ಎಂದು ಹೇಳಿದ್ದಾರೆ. ತಹಶೀಲ್ದಾರ್ ವರ್ಗಾವಣೆ ತಡೆ ಹಿಡಿಯದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಅವರು ಎಚ್ಚರಿಸಿದ್ದಾರೆ.
Advertisement
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.