ಸುಳ್ಯ ತಾಲೂಕಿನಲ್ಲಿ ನೆಮ್ಮದಿ | 54 ಮಂದಿಗೂ ಕೊರೊನಾ ನೆಗೆಟಿವ್ |

May 6, 2020
3:06 PM

ಸುಳ್ಯ: ಸುಳ್ಯ ತಾಲೂಕಿನಲ್ಲಿ  ಯಾವುದೇ ಕೊರೊನಾ ಪಾಸಿಟಿವ್ ಪ್ರಕರಣ ಕಂಡುಬಂದಿಲ್ಲ. ಕೊರೊನಾ ವೈರಸ್ ಸಂಬಂಧವಾಗಿ ತಾಲೂಕಿನಲ್ಲಿ  54 ಮಂದಿಯನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿತ್ತು, ಅವರೆಲ್ಲರದ್ದೂ ನೆಗೆಟಿವ್ ವರದಿ ಬಂದಿದೆ.

ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದು ಬಂದಿದ್ದ ಸುಬ್ರಹ್ಮಣ್ಯ ಬಳಿಯ ವ್ಯಕ್ತಿಯೊಬ್ಬರನ್ನು ಹಾಗೂ ಅವರ ಮನೆಯವರನ್ನು  ಮತ್ತು  ಅವರನ್ನು ಮಾತನಾಡಲು ಹೋಗಿದ್ದ ಗುತ್ತಿಗಾರು ಗ್ರಾಮದ ಕಮಿಲದ ಕುಟುಂಬ, ಪೆರಾಜೆಯ ಕುಟುಂಬವನ್ನು  ಮುನ್ನೆಚ್ಚರಿಕಾ ಕ್ರಮವಾಗಿ ಕ್ವಾರಂಟೈನ್ ಗೆ ಒಳಪಡಿಸಲಾಗಿತ್ತು. ಅವರೆಲ್ಲರ ಪರೀಕ್ಷಾ ವರದಿಗಳೂ ಸೇರಿದಂತೆ ತಾಲೂಕಿನ ಇದುವರೆಗಿನ ಎಲ್ಲಾ ಪರೀಕ್ಷಾ ವರದಿಗಳೂ ನೆಗೆಟಿವ್ ಬಂದಿದ್ದು ಯಾವುದೇ ಆತಂಕವಿಲ್ಲ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಕ್ವಾರಂಟೈನ್ ಗೆ ಒಳಗಾದವರನ್ನು ಕೊರೊನಾ ಸೋಂಕು ಬಾಧಿಸಿದೆ ಎಂಬ ರೀತಿಯಲ್ಲಿ  ಕೆಲವು ಮಂದಿ ನೋಡಿದ್ದಾರೆ ಹಾಗೂ ಕೆಲವು ಮಂದಿ ಕೊರೊನಾ ವೈರಸ್ ಬಾಧಿಸಿದೆ ಎಂದೇ ಅಪಪ್ರಚಾರ ಮಾಡಿದ್ದಾರೆ ಎಂದು ಕ್ವಾರಂಟೈನ್ ಒಳಗಾದವರು ನೋವು ತೋಡಿಕೊಂಡಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಹೋಂ ಕ್ವಾರಂಟೈನ್ ಗೆ ಒಳಗಾಗಿ ಇದೀಗ ಕೊರೊನಾ ನೆಗೆಟಿವ್ ವರದಿ ಬಂದಿರುವುದು  ಯಾವುದೇ ಆತಂಕವಿಲ್ಲದಾಗಿದೆ. ಅನಗತ್ಯವಾಗಿ ಯಾರೊಬ್ಬರೂ ಅಪಪ್ರಚಾರ ಮಾಡಬಾರದು ಎಂದು ಕ್ವಾರಂಟೈನ್ ಗೆ ಒಳಗಾದವರು ಹೇಳಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬರಗಾಲದಲ್ಲೂ ಬೆಳೆ ಉಳಿಸಿದ ಸಾವಯವ ಕೃಷಿ – ಸಾವಯವ ಕೃಷಿ ಅಬ್ಬರಿಸಿ ಬರುವುದಿಲ್ಲ- ಮುಗ್ಗರಿಸಿ ಬೀಳುವುದಿಲ್ಲ..!
October 12, 2026
7:30 AM
by: ಮಹೇಶ್ ಪುಚ್ಚಪ್ಪಾಡಿ
ರಾಜ್ಯಾದ್ಯಂತ ನವರಾತ್ರಿ ಸಂಭ್ರಮ : ಶಕ್ತಿಪೀಠಗಳಲ್ಲಿ ವಿಶೇಷ ಪೂಜೆ, ಮಂಗಳೂರು–ಮಡಿಕೇರಿ–ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ
October 11, 2026
10:37 AM
by: ದ ರೂರಲ್ ಮಿರರ್.ಕಾಂ
ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ರಕ್ಷಿಸಿ : ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ
October 11, 2026
10:24 AM
by: ದ ರೂರಲ್ ಮಿರರ್.ಕಾಂ
ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ
October 10, 2026
2:55 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror