ಸುಳ್ಯ: ಸುಳ್ಯ ತಾಲೂಕಿನಲ್ಲಿ ಮಂಗಳವಾರ ಮಳೆ ಅಬ್ಬರಿಸಿದೆ. ವಿವಿಧ ಕಡೆ ಜಲ ಸಂಕಷ್ಟ ತಂದೊಡ್ಡಿದೆ. ಸುಳ್ಯ ತಹಶೀಲ್ದಾರ್ ವಿವಿದೆಡೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂಜಾಗ್ರತಾ ಕ್ರಮಕ್ಕೆ ಸೂಚನೆ ನೀಡಿದ್ದಾರೆ. ಹಾನಿಯಾಗದಂತೆ ತಡೆಯುವುದು ಹಾಗೂ ಮುಂಜಾಗ್ರತಾ ಕ್ರಮಕ್ಕೆ ಅಧಿಕಾರಿಗಳು ಚಿತ್ತ ಹರಿಸಿದ್ದಾರೆ. ಕಡಬ ತಹಶೀಲ್ದಾರ್ ಅವರು ಕೂಡಾ ವಿವಿದೆಡೆ ಭೇಟಿ ನೀಡಿದ್ದ ಸುಬ್ರಹ್ಮಣ್ಯ ಸ್ನಾನ ಘಟ್ಟ ಸೇರಿದಂತೆ ವಿವಿಧ ಕಡೆ ಭೇಟಿ ನೀಡಿದರು.
ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸ್ನಾನ ಘಟ್ಟ ಮುಳುಗಡೆಯಾದರೆ ಸುಳ್ಯದ ಕೇರ್ಪಳದಲ್ಲಿ ಕಂಪೌಂಡ್ ಗೋಡೆ ಕುಸಿತವಾಗಿದೆ. ಬೆಳ್ಳಾರೆ ರಸ್ತೆಯಲ್ಲಿ ನೀರು ಹರಿದು ತಗ್ಗು ಪ್ರದೇಶದಲ್ಲಿ ನೀರು ಶೇಖರಣೆಗೊಂಡು ಸಂಕಷ್ಟ ತಂದಿದೆ. ಬಳ್ಳಕ್ಕ ಗುತ್ತಿಗಾರು ರಸ್ತೆಯಲ್ಲಿ ಮರ ಬಿದ್ದು ವಾಹನ ಸಂಚಾರಕ್ಕೆ ತೊಂದರೆಯಾಯಿತು. ಸುಳ್ಯದ ಜಟ್ಟಿಪಳ್ಳ, ಹಳೆಗೇಟು ಬಳಿಯೂ ನೀರು ಹರಿದು ಸಂಕಷ್ಟವಾಗಿದೆ.
ತಹಶೀಲ್ದಾರ್ ಭೇಟಿ:
ಸುಳ್ಯ ತಹಶೀಲ್ದಾರ್ ಕುಂಞೆ ಅಹಮ್ಮದ್ ಅವರು ವಿವಿಧ ಕಡೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಬಳಿಕ ಅಧಿಕಾರಿಗಳ ಜೊತೆ ಸಭೆ ನಡೆಸಿ ತಾಲೂಕಿನ ಎಲ್ಲಾ ಅಧಿಕಾರಿ ಎಲರ್ಟ್ ಆಗಿರಲು ಸೂಚಿಸಿದರು. ಅಗತ್ಯಬಿದ್ದರೆ ಗಂಜಿ ಕೇಂದ್ರ ತೆರಯಲೂ ಸಿದ್ಧತೆ ನಡೆಸುವಂತೆ ಸೂಚಿಸಿದರು.
ಕುಕ್ಕೆ ಸುಬ್ರಹ್ಮಣ್ಯ ಸ್ನಾನ ಘಟ್ಟಕ್ಕೆ ಕಡಬ ತಹಶೀಲ್ದಾರ್ ಜಾನ್ ಪ್ರಕಾಶ್ ತೆರಳಿ ಪರಿಶೀಲನೆ ನಡೆಸಿ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…
ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…