Advertisement
ಸುದ್ದಿಗಳು

ಸುಳ್ಯ ತಾಲೂಕಿನಲ್ಲಿ 15 ಸಾವಿರ ಮಂದಿಗೆ ಸಾಲ ಮನ್ನಾ ಹಣ ಬಂದಿದೆ

Share

ಸುಳ್ಯ: ವಾಣಿಜ್ಯ ಬ್ಯಾಂಕ್ ಗಳಲ್ಲಿ 1083 ಮಂದಿಗೆ ಮತ್ತು ಸಹಕಾರಿ ಸಂಘಗಳ ಮೂಲಕ 14,119 ಮಂದಿಗೆ ಒಟ್ಟು ಸುಳ್ಯ ತಾಲೂಕಿನಲ್ಲಿ 15,202 ಮಂದಿಗೆ ರಾಜ್ಯ ಸರಕಾರದ ಸಾಲಮನ್ನಾ ಯೋಜನೆಯ ಒಂದು ಲಕ್ಷ ಹಣ ಸಂದಾಯವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಹಾಗು ಕಂದಾಯ ಸಚಿವರ ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜ ಹೇಳಿದ್ದಾರೆ.

ಸುಳ್ಯದಲ್ಲಿ  ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಉಳಿದ ರೈತರಿಗೂ ಸಿಗುವಂತೆ ಮಾಡಲು ಕ್ರಮ ಜರುಗಿಸಲು ಮತ್ತು ಖಾತೆಗೆ ನೇರ ಹಣ ಜಮೆ ಆದ ಮಾಹಿತಿಯನ್ನು ರೈತರಿಗೆ ತಿಳಿಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು. ಎಲ್ಲಾ ಜಿಲ್ಲೆಗಳಿಗೆ ಭೇಟಿ ನೀಡಿ ಕಂದಾಯ ಪ್ರಗತಿ ಪರಿಶೀಲನೆ ನಡೆಸಲಾಗುತ್ತಿದ್ದು ಸಮಸ್ಯೆಗಳನ್ನು ತಿಳಿದು ಕೆಲವೊಂದು ಕಂದಾಯ ಕಾನೂನುಗಳನ್ನು ಸರಳೀಕರಣ ಮಾಡಲು ಕಾನೂನು ತಿದ್ದುಪಡಿ ಮಾಡಲಾಗುವುದು. ಈ ಕುರಿತು ಅಧಿವೇಶನದಲ್ಲಿ ಪ್ರಸ್ತಾಪಿಸಲಾಗುವುದು‌ ಎಂದು ಅವರು ತಿಳಿಸಿದ್ದಾರೆ.
ಸರಕಾರಿ ಭೂಮಿಯ ಸಾಗುವಳಿ ಮಾಡಿ ಹಕ್ಕು ಪತ್ರ ನೀಡಲಾಗುತ್ತಿದ್ದು 4.38 ಸೆಂಟ್ಸ್ ವರೆಗಿನ ಸ್ಥಳವನ್ನು ರೈತರಿಗೆ ಮಂಜೂರು ಮಾಡಲಾಗುತ್ತಿದೆ. ಹೀಗೆ ಸುಳ್ಯ ತಾಲೂಕಿನಲ್ಲಿ 20 ಸಾವಿರ ಎಕ್ರೆ ಭೂಮಿ ಕೃಷಿಕರಿಗೆ ಮಂಜೂರು ಮಾಡಲಾಗಿದೆ ಎಂದು ಅವರು ವಿವರಿಸಿದರು.
ಸುಳ್ಯದಲ್ಲಿ 94ಸಿ ಯೋಜನೆಯಲ್ಲಿ ಅತೀ ಹೆಚ್ಚು ಅರ್ಜಿಗಳು ತಿರಸ್ಕಾರಗೊಂಡಿರುವುದು ಕಂಡು ಬರುತಿದೆ. ಇದರ ಮರು ಪರಿಶೀಲನೆಗೆ ಸೂಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಪುತ್ತೂರು ಸಹಾಯಕ ಕಮೀಷನರ್ ಡಾ.ಹೆಚ್.ಕೆ.ಕೃಷ್ಣಮೂರ್ತಿ, ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜಿಐ ಮಾನ್ಯತೆಯ ‘ಗುಲ್ಬರ್ಗಾ ತೊಗರಿ ಬೇಳೆ’ಗೆ ಮಾಲ್ಡೀವ್ಸ್‌ ಮಾರುಕಟ್ಟೆ – ರಫ್ತಿಗೆ ಕೇಂದ್ರದ ಅನುಮತಿ

ಜಿಐ ಮಾನ್ಯತೆ ಪಡೆದ ‘ಗುಲ್ಬರ್ಗಾ ತೊಗರಿ ಬೇಳೆ’ಯನ್ನು ಮಾಲ್ಡೀವ್ಸ್‌ಗೆ ರಫ್ತು ಮಾಡಲು ಕೇಂದ್ರ…

3 hours ago

ನಾಗರಿಕ ಪ್ರಜ್ಞೆ ಎಂದರೆ ಕಾನೂನು ಪಾಲನೆ ಮಾತ್ರವಲ್ಲ – ನಮ್ಮ ನಡವಳಿಕೆಯೇ ಸಮಾಜದ ಕನ್ನಡಿ

ನಾಗರಿಕ ಪ್ರಜ್ಞೆ ಎಂದರೆ ಕಾನೂನಿನ ಭಯದಿಂದ ನಿಯಮ ಪಾಲಿಸುವುದಷ್ಟೇ ಅಲ್ಲ; ಇತರರ ಹಕ್ಕು,…

3 hours ago

ಹಾಲಿನ ದರ ಕನಿಷ್ಠ ₹10 ಹೆಚ್ಚಳಕ್ಕೆ ಕೆಎಂಎಫ್‌ ಮನವಿ – ಹೈನುಗಾರರಿಗೆ ಏನು ಪ್ರಯೋಜನ..? ಗ್ರಾಹಕರಿಗೆ ಎಷ್ಟು ಹೊರೆ..?

ರಾಜ್ಯದಲ್ಲಿ ಹಾಲಿನ ದರವನ್ನು ಕನಿಷ್ಠ ಲೀಟರ್‌ಗೆ ₹10 ಹೆಚ್ಚಿಸುವಂತೆ ಹಾಲು ಒಕ್ಕೂಟಗಳು ಸರ್ಕಾರಕ್ಕೆ…

5 hours ago

ಬದುಕಿನ “ಬ್ಯಾಗೇಜ್‌” ಇಳಿಸುವ ಸಮಯ ಇದು

ಹಳೆಯ ನೋವು, ಕೋಪ, ತಿರಸ್ಕಾರ ಮತ್ತು ನಿರೀಕ್ಷೆಗಳ ಭಾರವನ್ನು ಹೊಸ ಸಂಬಂಧಗಳ ಮೇಲೆ…

17 hours ago

ರೈತರಿಗೆ ವಿದ್ಯುತ್‌ ಶಾಕ್ – ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್‌ ಕಡಿತ- ಪರ್ಯಾಯ ಶಕ್ತಿಯ ಬಗ್ಗೆ ಯೋಚಿಸಲು ಸಕಾಲ

ಮಳೆ ಕೊರತೆ ಮತ್ತು ಜಲವಿದ್ಯುತ್ ಉತ್ಪಾದನೆ ಕುಸಿತದ ಹಿನ್ನೆಲೆಯಲ್ಲಿ ಕೃಷಿ ಪಂಪ್‌ಸೆಟ್‌ಗಳಿಗೆ ನೀಡುತ್ತಿದ್ದ…

23 hours ago

ಅ.29 ರಿಂದ ನ.11 ರವರೆಗೆ ಹಾಸನಾಂಬ ಜಾತ್ರಾ ಮಹೋತ್ಸವ -12 ದಿನ ಸಾರ್ವಜನಿಕ ದರ್ಶನ

ವರ್ಷಕ್ಕೆ ಒಮ್ಮೆ ಮಾತ್ರ ದರ್ಶನ ನೀಡುವ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವ ಅಕ್ಟೋಬರ್…

23 hours ago