ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದಲ್ಲಿ ಪರಿಶಿಷ್ಟ ಜಾತಿ ರೈತರಿಗೆ ಮಾಹಿತಿ ಶಿಬಿರ

October 21, 2019
6:37 PM

ಸುಳ್ಯ: ಗೇರು ಸಂಶೋಧನಾ ನಿರ್ದೇಶನಾಲಯ ಪುತ್ತೂರು ಮತ್ತು ಕೃಷಿ ವಿಜ್ಞಾನ ಕೇಂದ್ರ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಅ.21 ರಂದು ಪರಿಶಿಷ್ಟ ಜಾತಿಯ ಸಮುದಾಯದವರಿಗೆ ಕೃಷಿ ಮತ್ತು ಕೃಷಿ ಸಂಬಂಧಿತ ವಿಷಯಗಳ ಬಗ್ಗೆ ಮಾಹಿತಿ ಶಿಬಿರವನ್ನು ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಮಹಮ್ಮಾಯಿ ದೇವಿ ದೇವಸ್ಥಾನದ ಆವರಣದಲ್ಲಿ ಏರ್ಪಡಿಸಲಾಯಿತು.

ಗ್ರಾಮ ಪಂಚಾಯತ್ ಅಧ್ಯಕ್ಷರಾದ  ಬೀನಾ ಕರುಣಾಕರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾಹಿತಿ ಶಿಬಿರದ ಪ್ರಯೋಜನವನ್ನು ಸದುಪಯೋಗ ಪಡಿಸಿಕೊಳ್ಳಲು ಕರೆನೀಡಿದರು. ತಾಲೂಕು ಪಂಚಾಯತ್ ಅಧ್ಯಕ್ಷರಾದ ಚನಿಯ ಕಲ್ಲಡ್ಕ ಇವರು ಈ ಕಾರ್ಯಕ್ರಮದ ಮಹತ್ವದ ಬಗ್ಗೆ ಮಾತನಾಡಿ ಇದರ ಉಪಯೋಗ ಪಡೆದುಕೊಂಡು ಸ್ವಾವಲಂಬಿಗಳಾಗಿ ಬದುಕಲು ತಿಳಿ ಹೇಳಿದರು. ಕೃಷಿ ವಿಜ್ಞಾನ ಕೇಂದ್ರ ಮಂಗಳೂರು ಇದರ ಮುಖ್ಯಸ್ಥರಾದ ಡಾ. ರಮೇಶ್ ಇವರು ಕೃಷಿ ವಿಜ್ಞಾನ ಕೇಂದ್ರದ ಬಗ್ಗೆ ಮಾಹಿತಿ ನೀಡಿದರು.  ಸಸ್ಯ ಸಂರಕ್ಷಣೆ ವಿಜ್ಞಾನಿ ಡಾ. ಕೇದಾರನಾಥ ಸಮಗ್ರ ಕೃಷಿ ಬಗ್ಗೆ ಮಾಹಿತಿ ನೀಡಿದರು.

ಗೇರು ಸಂಶೋಧನಾ ನಿರ್ದೇಶನಾಲಯದ ವಿಜ್ಞಾನಿಯವರಾದ ಡಾ. ಈರದಾಸಪ್ಪ ಪರಿಶಿಷ್ಟ ಜಾತಿ ಉಪಯೋಜನೆಯ ಕುರಿತು ವಿವರವಾಗಿ ಮಾಹಿತಿ ನೀಡಿ ಫಲಾನುಭವಿಗಳಿಗೆ ಅರ್ಜಿಗಳನ್ನು ವಿತರಿಸಿದರು.  ಅಜ್ಜಾವರದ ಸಾವಯವ ಕೃಷಿಕರಾದ ಭವಾನಿಶಂಕರ್ ಇವರು ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲರಿಗೂ ಸ್ವಾಗತಿಸಿ ವಂದಿಸಿದರು.

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಸಿಂಗಾರ ಒಣಗುತ್ತಿದೆಯೇ..? ನಿಮ್ಮ ತೋಟದ ಶತ್ರು ನೀವು ಬಳಸುವ ಬೇವಿನ ಎಣ್ಣೆಯೇ ಇರಬಹುದು…!
January 10, 2026
7:24 AM
by: ದ ರೂರಲ್ ಮಿರರ್.ಕಾಂ
ಕಳಪೆ ಅಡಿಕೆ ಪತ್ತೆ | 15.5 ಲಕ್ಷ ದಂಡ ವಿಧಿಸಿದ ನ್ಯಾಯಾಲಯ
January 10, 2026
7:08 AM
by: ದ ರೂರಲ್ ಮಿರರ್.ಕಾಂ
ತೆಂಗಿನಕಾಯಿಯಿಂದ Gen-Z ಫೇವರಿಟ್ ಫುಡ್‌…! ವೆಗನ್ ಕುಲ್ಫಿ ಮತ್ತು ಚಾಕೊಲೇಟ್ ಬಿಡುಗಡೆ
January 9, 2026
10:26 PM
by: ದ ರೂರಲ್ ಮಿರರ್.ಕಾಂ
ತೆಂಗು ರೈತರಿಗೆ ಹೊಸ ದಾರಿ | ಮೌಲ್ಯವರ್ಧನೆ ಮತ್ತು ಬಹುಬೆಳೆ ಪದ್ಧತಿಗೆ ಉತ್ತೇಜನ
January 9, 2026
10:16 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror