ಸುಳ್ಯ:ಆಧುನಿಕ ಸುಳ್ಯದ ನಿರ್ಮಾತೃ ಡಾ.ಕುರುಂಜಿ ವೆಂಕಟ್ರಮಣ ಗೌಡರ 91ನೇ ಹುಟ್ಟು ಹಬ್ಬದ ಪ್ರಯುಕ್ತ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಭವ್ಯ ಸುಳ್ಯ ಸಂಕಲ್ಪ ದಿನಾಚರಣೆ ಡಿ.26ರಂದು ಅಜ್ಜಾವರ ಗ್ರಾಮದ ಮುಳ್ಯಕಜೆ ಕಾಲೊನಿಯಲ್ಲಿ ನಡೆಯಿತು.
ಅಜ್ಜಾವರ ಗ್ರಾ.ಪಂ. ಅಧ್ಯಕ್ಷೆ ಬೀನಾ ಕರುಣಾಕರ ಕಾರ್ಯಕ್ರಮ ಉದ್ಘಾಟಿಸಿದರು. ಸಂಘದ ಅಧ್ಯಕ್ಷ ಮುರಳೀಧರ ಅಡ್ಡನಪಾರೆ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮುಳ್ಯ ಅಟ್ಲೂರು ಯುವಕ ಸಂಘದ ಗೌರವಾಧ್ಯಕ್ಷ ಎಂ.ಎನ್. ಶ್ರೀಕೃಷ್ಣ ಸೋಮಯಾಗಿ, ಗ್ರಾ.ಪಂ. ಸದಸ್ಯರಾದ ಜಯರಾಮ ಮುಂಡೋಳಿಮೂಲೆ, ಗೀತಾ ಮುಳ್ಯ, ವಸಂತಿ ಮುಳ್ಯ, ಮಾಜಿ ಸದಸ್ಯರಾದ ನಾಗರಾಜ ಮುಳ್ಯ, ಮೋಹನ್ ಮುಳ್ಯ, ಸೋಮನಾಥ ಮುಳ್ಯಕಜೆ, ಹಿರಿಯರಾದ ತಾಪೂರ ಮುಳ್ಯಕಜೆ ಇದ್ದರು.
ನಾಟಿ ವೈದ್ಯೆ ಸುಶೀಲಾ ಅವರನ್ನು ಸನ್ಮಾನಿಸಲಾಯಿತು.ರಾಮ ಮುಳ್ಯಕಜೆಯವರಿಗೆ ಸಹಾಯಧನ ವಿತರಿಸಲಾಯಿತು.
ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾದ ಶಿವಪ್ರಸಾದ್ ಕೇರ್ಪಳ ಸ್ವಾಗತಿಸಿ, ದುರ್ಗಾಕುಮಾರ್ ನಾಯರ್ ಕೆರೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಾಜಿ ಕಾರ್ಯದರ್ಶಿ ಲೋಕೇಶ್ ಗುಡ್ಡೆಮನೆ ಸನ್ಮಾನ ಪತ್ರ ವಾಚಿಸಿದರು.ಕೋಶಾಧಿಕಾರಿ ಸತೀಶ್ ಹೊದ್ದೆಟ್ಟಿ ವಂದಿಸಿದರು. ಜಿಲ್ಲಾ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಲೋಕೇಶ್ ಪೆರ್ಲಂಪಾಡಿ ಕಾರ್ಯಕ್ರಮ ನಿರೂಪಿಸಿದರು.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆ.1 ರಂದು ಕೇಂದ್ರ ಬಜೆಟ್ ಮಂಡಿಸಲಿದ್ದು,…
ಮಾನಸಿಕ ವಿಕಲಚೇತನರಾಗಿ ಉಡುಪಿಯಲ್ಲಿ ರಸ್ತೆ ಬದಿ ತಿರುಗಾಡುತ್ತಿದ್ದ ಬಿಹಾರದ ರಮಾದೇವಿ ಅವರು ವರ್ಷದ…
ಮಣ್ಣಿನಲ್ಲಿ ಬಿದ್ದ ಬೀಜವು ಜೀವಂತಿಕೆಯಿಂದ ತನ್ನ ಬೇರುಗಳನ್ನು ಸಿಕ್ಕಿದ ಬಿರುಕುಗಳಲ್ಲಿ ಹಬ್ಬಿಸುತ್ತ ತೆವಳುತ್ತ…
ಮುಂದಿನ ಆರ್ಥಿಕ ವರ್ಷದಿಂದ ರಾಜ್ಯದ ಸಾವಯವ ಉತ್ಪನ್ನಗಳ ಮಾರಾಟಕ್ಕೆ ಎಪಿಎಂಸಿಗಳಲ್ಲಿ ಮಾರುಕಟ್ಟೆ ವ್ಯವಸ್ಥೆ…
ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ಬಗ್ಗೆ ಅಧ್ಯಯನ ಮಾಡಲು ಶ್ರೀಲಂಕಾದಿಂದ 38 ಮಂದಿ “ಲಂಕಾ…
ಬದಲಾದ ಕಾಲದಲ್ಲಿ ನಾವು ಇಂತಹ ಪರಿಕರಕೊಳ್ಳುವ ಮೊದಲು ನಮಗೆಷ್ಟು ಇದು ಪ್ರಯೋಜನಕಾರಿ ಎಂದು…