ಸುಳ್ಯ: ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಶ್ರೇಯೋಭಿವೃದ್ಧಿ ಸಂಘ ಆರ್ ಡಿ ಪಿ ಆರ್ ಸುಳ್ಯ ತಾಲೂಕು ಇದರ ಸಭೆಯು ಅಧ್ಯಕ್ಷ ಚಿದಾನಂದ ಜಾಲ್ಸೂರು ಇವರ ಅಧ್ಯಕ್ಷತೆಯಲ್ಲಿ ಜಾಲ್ಸೂರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.
ವೇದಿಕೆಯಲ್ಲಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ದೇವಿಪ್ರಸಾದ್ ಬೊಳ್ಮ, ಜಿಲ್ಲಾ ಕಾರ್ಯದರ್ಶಿ ರಜೀಶ್ ಉಬರಡ್ಕ, ತಾಲೂಕು ಉಪಾಧ್ಯಕ್ಷರಾದ ನಾಗವೇಣಿ ಮಡಪ್ಪಾಡಿ, ಕಾರ್ಯದರ್ಶಿ ನೇತ್ರಾವತಿ ಮರ್ಕಂಜ, ಜೊತೆ ಕಾರ್ಯದರ್ಶಿ ನೇತ್ರಾವತಿ ಆಲೆಟ್ಟಿ, ಮೈಸೂರು ನೌಕರರ ಸಂಘದ ವಿವಿಧ ಪದಾಧಿಕಾರಿಗಳು, ಸುಳ್ಯ ತಾಲೂಕು ಸಂಘದ ವಿವಿಧ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.
ಈ ಸಂಧರ್ಭದಲ್ಲಿ ಗ್ರಾಮ ಪಂಚಾಯತ್ ನೌಕರರಿಗೆ ಸರಕಾರದಿಂದ ಸಿ ಮತ್ತು ಡಿ ದರ್ಜೆಯ ಸ್ಥಾನಮಾನ, ವೇತನ ಶ್ರೇಣಿ, ಸೇವಾ ಭದ್ರತೆ ಮತ್ತು ಇತರ ಇಲಾಖೆಗಳ ಕೆಲಸಗಳನ್ನು ಗ್ರಾಮ ಪಂಚಾಯತ್ ಗೆ ವಹಿಸಿ ಪಂಚಾಯತ್ ನೌಕರರಿಗೆ ತೀವ್ರ ಒತ್ತಡ ನೀಡುವುದರ ಕುರಿತು ಸಂಬಂದಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸುವುದೆಂದು ನಿರ್ಣಯಿಸಲಾಯಿತು. ಈ ಸಂದರ್ಭದಲ್ಲಿ ಸಂಘಟನೆ ಮತ್ತು ಸಾಮಾಜಿಕ ಸೇವೆಗಾಗಿ ಗೌರವ ಡಾಕ್ಟರೇಟ್ ಪಡೆದಿರುವ ರಾಜ್ಯಾಧ್ಯಕ್ಷರಾದ ದೇವಿಪ್ರಸಾದ್ ಬೊಳ್ಮ ಇವರನ್ನು ಗೌರವಿಸಲಾಯಿತು.
ಕಾರ್ಯಕ್ರಮವನ್ನು ಸುಳ್ಯ ತಾಲೂಕು ಸಂಘದ ಸದಸ್ಯರಾದ ಗಿರಿಧರ ಕಳಂಜ ಸ್ವಾಗತಿಸಿ, ಕಾರ್ಯದರ್ಶಿ ನೇತ್ರಾವತಿ ಮರ್ಕಂಜ ವಂದಿಸಿ, ಜಿಲ್ಲಾ ಕಾರ್ಯದರ್ಶಿ ರಜೀಶ್ ಉಬರಡ್ಕ ಕಾರ್ಯಕ್ರಮ ನಿರೂಪಿಸಿದರು.
ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…
ಕೇಂದ್ರ ಸರ್ಕಾರ 2015ರಲ್ಲಿ ದೇಶೀಯ ಹಾಗೂ ಆಮದು ಯೂರಿಯಾಗೆ ಬೇವು ಲೇಪನ ಕಡ್ಡಾಯಗೊಳಿಸುವ…
ಮನೆತನವನ್ನು ಕಟ್ಟುವುದು ಕೇವಲ ಆರ್ಥಿಕ ಸೌಲಭ್ಯಗಳನ್ನು ಒದಗಿಸುವುದಲ್ಲ; ಕುಟುಂಬದ ಸದಸ್ಯರ ನಡುವೆ ಪ್ರೀತಿ,…
ಮ್ಯಾನ್ಮಾರ್‌ನಿಂದ ಮಿಜೋರಾಂ ಮೂಲಕ ಸುಮಾರು ₹1,022 ಕೋಟಿ ಮೌಲ್ಯದ 3,103 ಮೆಟ್ರಿಕ್ ಟನ್…
ಅ.11ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದ್ದರೂ, ಅ.14–16ರಿಂದ ಹಿಂಗಾರು…
ಕೃಷಿ ಸೇರಿದಂತೆ ಕುಟುಂಬದ ಬದುಕಿನಲ್ಲಿ ಕಾಣದ ಶ್ರಮವನ್ನು ಗುರುತಿಸಿ ಮೆಚ್ಚುಗೆ ವ್ಯಕ್ತಪಡಿಸುವುದು ಸಂಬಂಧಗಳನ್ನು…